Bank of Baroda Recruitment 2022: 26 ಬ್ರ್ಯಾಂಚ್‌ಗಳಲ್ಲಿ 159 ಹುದ್ದೆಗಳ ಭರ್ತಿಗೆ ನೇಮಕಾತಿ
ಬ್ಯಾಂಕ್ ಆಫ್ ಬರೋಡಾ ಖಾಲಿ ಇರುವ ಶಾಖೆಯ ಸ್ವೀಕೃತಿ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಒಟ್ಟು 159 ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಎಪ್ರಿಲ್ 14 ಕೊನೆಯ ದಿನಾಂಕವಾಗಿದೆ.
ಬೆಂಗಳೂರು(ಎ.3): ಬ್ಯಾಂಕ್ ಆಫ್ ಬರೋಡಾ (Bank of Baroda) ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ದೇಶದಾದ್ಯಂತ ಇರುವ 26 ಬ್ರ್ಯಾಂಚ್‌ಗಳಲ್ಲಿ ಅಗತ್ಯ ಶಾಖೆಯ ಸ್ವೀಕೃತಿ ವ್ಯವಸ್ಥಾಪಕ (Branch Receivables Manager) ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಒಟ್ಟು 159 ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್‌ಲೈನ್ (Online) ಮೂಲಕ ಅರ್ಜಿ ಸಲ್ಲಿಸಲು ಎಪ್ರಿಲ್ 14 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಸಕ್ತರು ಅಧಿಕೃತ ವೆಬ್ಸೈಟ್ https://www.bankofbaroda.in/ ಗೆ ಭೇಟಿ ನೀಡಬಹುದು.
ವರ್ಗಾನುಸಾರ 159 ಹುದ್ದೆಗಳ ವಿಂಗಡಣೆ
SC: 23 ಹುದ್ದೆಗಳು
ST: 11 ಹುದ್ದೆಗಳು
OBC: 42 ಹುದ್ದೆಗಳು
EWS: 15 ಹುದ್ದೆಗಳು
UR: 68 ಹುದ್ದೆಗಳು
ಶೈಕ್ಷಣಿಕ ವಿದ್ಯಾರ್ಹತೆ: ಬ್ಯಾಂಕ್ ಆಫ್ ಬರೋಡಾದ ಖಾಲಿ ಇರುವ ತಜ್ಞ ಶಾಖೆಯ ಸ್ವೀಕೃತಿ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಯಾವುದೇ ಪದವಿ ಪಡೆದಿರಬಹುದು.
IIMB RECRUITMENT 2022 ಪೆಡಾಗೋಗಿಕಲ್ ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ನೇಮಕಾತಿ
ಅರ್ಜಿ ಶುಲ್ಕ: ಬ್ಯಾಂಕ್ ಆಫ್ ಬರೋಡಾದ ಖಾಲಿ ಇರುವ ಶಾಖೆಯ ಸ್ವೀಕೃತಿ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ SC/ST/PWD ಅಭ್ಯರ್ಥಿಗಳು 100 ರೂ. ಮತ್ತು ಸಾಮಾನ್ಯ ವರ್ಗ/EWS/OBC ಅಭ್ಯರ್ಥಿಗಳು 600 ರೂ ಪಾವತಿಸಬೇಕು.
ವಯೋಮಿತಿ: ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಶಾಖೆಯ ಸ್ವೀಕೃತಿ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 23 ರಿಂದ 35 ವರ್ಷದ ಒಳಗಿನವರಾಗಿರಬೇಕು.
ಆಯ್ಕೆ ಪ್ರಕ್ರಿಯೆ: ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಶಾಖೆಯ ಸ್ವೀಕೃತಿ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ, ಗುಂಪು ಚರ್ಚೆ, ವೈಯಕ್ತಿಕ ಸಂದರ್ಶನ ಮತ್ತು ಕೆಲ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೇತನ: ಬ್ಯಾಂಕ್ ಆಫ್ ಬರೋಡಾದ ಖಾಲಿ ಇರುವ ತಜ್ಞ ಅಧಿಕಾರಿಗಳು ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ದೊರೆಯಲಿದೆ.
BHEL Recruitment 2022: ಕಾರ್ಯನಿರ್ವಾಹಕ ಹುದ್ದೆಗಳ ಭರ್ತಿಗೆ ನೇಮಕಾತಿ
ಮ್ಯಾನೇಜರ್ ಹುದ್ದೆಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿ:
ಭಾರತೀಯ ರಿಸರ್ವ್ ಬ್ಯಾಂಕ್ (Reserve Bank of India -RBI) ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಭಾಷಾಂತರ ವಿಭಾಗ ಮತ್ತು ಪ್ರೋಟೋಕಾಲ್ ಹಾಗೂ ಭದ್ರತೆ ವಿಭಾಗದಲ್ಲಿ ಒಟ್ಟು 6 ಸಹಾಯಕ ವ್ಯವಸ್ಥಾಪಕ (Assistant Manager) ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಎಪ್ರಿಲ್ 18ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ www.rbi.org.in ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ opportunities.rbi.org.in.
ಶೈಕ್ಷಣಿಕ ವಿದ್ಯಾರ್ಹತೆ: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದೆಗನುಸಾರವಾಗಿ ಹಿಂದಿ ಭಾಷಾಂತರದಲ್ಲಿ ದ್ವಿತೀಯ ದರ್ಜೆಯ ಸ್ನಾತಕೋತ್ತರ ಪದವಿಯನ್ನು ಪೂರೈಸಿರಬೇಕು. ಮತ್ತು ಪದವಿ ಮಟ್ಟದಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಓದಿರಬೇಕು. ಅಥವಾ ಇಂಗ್ಲಿಷ್ ಮತ್ತು ಹಿಂದಿ ಭಾಷಾಂತರ ಎರಡರಲ್ಲೂ ಸ್ನಾತಕೋತ್ತರ ಪದವಿ ಮಾಡಿರಬೇಕು.
ಪ್ರೋಟೋಕಾಲ್ ಮತ್ತು ಭದ್ರತೆ ವಿಭಾಗಕ್ಕೆ ಅರ್ಜಿ ಸಲ್ಲಿಸಲು ಇಚ್ಚಿಸುವವರು ಸೇನೆ/ನೌಕಾಪಡೆ/ವಾಯುಸೇನೆಯಲ್ಲಿ ಕನಿಷ್ಠ ಐದು ವರ್ಷಗಳ ಕಮಿಷನ್ಡ್ ಸೇವೆಯನ್ನು ಹೊಂದಿರುವ ಅಧಿಕಾರಿಯಾಗಿರಬೇಕು.