ಸಂಬರಗಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಮಂಜೂರಾದ ದನದ ಶೆಡ್ಗಳು ಇನ್ನೂ ನಿರ್ಮಾಣವಾಗದ ಕಾರಣ ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಪಂಚಾಯತ್ ರಾಜ್ ಇಲಾಖೆ ಇಂಜಿನಿಯರ್ನ ನಿರ್ಲಕ್ಷ್ಯದಿಂದಾಗಿ ಶೆಡ್ ವಿತರಣೆಯಲ್ಲಿ ಗೊಂದಲ ಉಂಟಾಗಿದೆ.
ದೇಶದಲ್ಲಿ ಸಂಭವಿಸಿದ ದುರಂತಗಳ ಕುರಿತು ಈ ಮೊದಲೇ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯವಾಣಿ ನಿಜವಾಗಿದ್ದು, ಅವರು ಹೇಳಿದಂತೆ ರಾಜ್ಯದಲ್ಲಿ ಆರ್ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಹಾಗೂ ಅಹಮದಾಬಾದ್ನಲ್ಲಿ ವಿಮಾನ ದುರ್ಘಟನೆ ಆಗಿ ಅಪಾರ ಸಾವುನೋವು ಆಗಿವೆ.
ಬೆಳಗಾವಿ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಎಲ್ಲ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕೆಂದು ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ಹೇಳಿದ್ದಾರೆ
ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾದ ಹಿನ್ನೆಲೆಯಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಭಾವುಕರಾಗಿ ಮಾತನಾಡಿದ್ದಾರೆ. ಕೋರ್ಟ್ ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ಅವರು, ತಮ್ಮ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿದ್ದಾರೆ.
ಶಾಸಕ ಲಕ್ಷ್ಮಣ ಸವದಿ ಸಂಚರಿಸುತ್ತಿದ್ದ ಕಾರಿಗೆ ಪಿಕ್ ಅಪ್ ವಾಹನ ಡಿಕ್ಕಿಯಾದ ಘಟನೆ ನಡೆದಿದೆ. ಮುಖಾಮುಖಿ ಡಿಕ್ಕಿಯಿಂದ ಶಾಸಕರ ಕಾರು ಜಖಂಗೊಂಡಿದೆ.
ಸಹಕಾರ ಚಳುವಳಿಗೆ ಸುಮಾರು 120 ವರ್ಷಗಳ ಇತಿಹಾಸವಿದ್ದು, ಈ ಸಹಕಾರಿ ಕ್ಷೇತ್ರ ದೇಶದ ಆರ್ಥಿಕ ಪ್ರಗತಿಗೆ ಸಾಕಷ್ಟು ಕೊಡುಗೆ ನೀಡಿದೆ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಹೇಳಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಜೈನ ಸಮುದಾಯದ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿತ್ತು. ಆದರೆ, ಈಗಿನ ಕಾಂಗ್ರೆಸ್ ಸರ್ಕಾರ ಅವುಗಳನ್ನು ತಡೆ ಹಿಡಿದು, ಜೈನ ಸಮಾಜಕ್ಕೆ ಅನ್ಯಾಯ ಮಾಡಿದೆ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.