Asianet Suvarna News Asianet Suvarna News

Petrol Diesel Rate: ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ

ಎರಡೂವರೆ ತಿಂಗಳಿನಿಂದ ಬದಲಾಗದ ಇಂಧನ ದರ
ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಇಂದ ತಗ್ಗಿದ ಬೇಡಿಕೆ
2022ರ ಜನವರಿ 18 ರಂದು ರಾಜ್ಯದ ವಿವಿದೆಡೆ ಇರುವ ಇಂಧನ ದರ

petrol diesel price in bengaluru and major cities of karnataka 18 jaunuary 2022 san
Author
Bengaluru, First Published Jan 18, 2022, 11:19 AM IST

ಬೆಂಗಳೂರು (ಜ. 18): ದೇಶದ ಬಹುತೇಕ ರಾಜ್ಯಗಳಲ್ಲಿ ಪೆಟ್ರೋಲ್ (petrol) ಹಾಗೂ ಡೀಸೆಲ್ (diesel ) ದರಗಳಲ್ಲಿ ಕಳೆದ ಎರಡೂವರೆ ತಿಂಗಳಿನಿಂದ ದೊಡ್ಡ ಮಟ್ಟದ ಬದಲಾವಣೆ ಆಗಿಲ್ಲ. ದೀಪಾವಳಿಯ ಸಂದರ್ಭದಲ್ಲಿ ದೇಶದ ಜನತೆಗೆ ಉಡುಗೊರೆಯ ರೂಪದಲ್ಲಿ ಇಂಧನ ದರದ ಮೇಲಿನ ಅಬಕಾರಿ ಸುಂಕವನ್ನು(Excise Duty) ಕೇಂದ್ರ ಸರ್ಕಾರ ಕಡಿತ ಮಾಡಿತ್ತು. ಆ ನಂತರ, ದೆಹಲಿ ಹಾಗೂ ಜಾರ್ಖಂಡ್ ಹೊರತಾಗಿ ಯಾವ ರಾಜ್ಯದಲ್ಲೂ ದೊಡ್ಡ ಮಟ್ಟದ ಬದಲಾವಣೆ ಕಂಡುಬಂದಿಲ್ಲ. ದೇಶದ ಸಾಮಾನ್ಯ ಜನತೆ ಪೆಟ್ರೋಲ್ ಹಾಗೂ ಡೀಸೆಲ್ ದರ ಇನ್ನಷ್ಟು ತಗ್ಗಬೇಕು ಎಂದು ಬಯಸಿದ್ದರೂ, ಯಥಾಸ್ಥಿತಿ ಕಾಯ್ದುಕೊಂಡಿರುವುದರಿಂದ ಅಲ್ಪ ಸಮಾಧಾನ ಕಂಡಿದ್ದಾರೆ. ಈ ನಡುವೆ ಕೋವಿಡ್-19 ಹಾಗೂ ಒಮಿಕ್ರಾನ್ ಆತಂಕದಿಂದಾಗಿ ದೇಶದ ಹಲವು ರಾಜ್ಯಗಳಲ್ಲಿ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ಜಾರಿ ಮಾಡಿರುವುದು ಇಂಧನದ ಬೇಡಿಕೆಯ ಮೇಲೂ ಪರಿಣಾಮ ಬೀರಿದೆ. ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು (ಜ.18) ಪೆಟ್ರೋಲ್ ಹಾಗೂ ಡೀಸೆಲ್ ಎಷ್ಟಿದೆ?

"
ರಾಜ್ಯದ ಪ್ರಮುಖ ನಗರಗಳಲ್ಲಿ ಇಂಧನ ದರ ಎಷ್ಟಿದೆ?
- ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bangalore) ನವೆಂಬರ್ 5 ರಿಂದಲೂ ಪೆಟ್ರೋಲ್ ದರದಲ್ಲಿ ಯಥಾಸ್ಥಿತಿ ಇದೆ. ಪೆಟ್ರೋಲ್ ಲೀಟರ್ ಗೆ 100.58 ರೂಪಾಯಿ ಆಗಿದ್ದರೆ, ಡೀಸೆಲ್ 85.01 ರೂಪಾಯಿ ಆಗಿದೆ.
- ಹುಬ್ಬಳ್ಳಿಯಲ್ಲಿ (Hubli) ಪೆಟ್ರೋಲ್ ಬೆಲೆ 100.31ರೂ. ಹಾಗೂ ಡೀಸೆಲ್ ಬೆಲೆ 84.79 ರೂ.ಇದೆ. 
- ಮಂಗಳೂರಿನಲ್ಲಿ(Mangalore)ಪೆಟ್ರೋಲ್ ಬೆಲೆ 99.76 ರೂ. ಹಾಗೂ ಡೀಸೆಲ್ ದರ 84.24ರೂ.ಇದೆ. 
- ಮೈಸೂರಿನಲ್ಲಿ(Mysore)ಪೆಟ್ರೋಲ್ ದರ ಲೀಟರ್ ಗೆ  100.33ರೂ.ಇದೆ.  ಡೀಸೆಲ್ ದರ ಇಂದು ಲೀಟರ್ ಗೆ  84.78ರೂ. ಇದೆ. ಪೆಟ್ರೋಲ್ ದರದಲ್ಲಿ 25 ಪೈಸೆ ಹಾಗೂ ಡೀಸೆಲ್ ದರದಲ್ಲಿ 22 ಪೈಸೆ ಏರಿಕೆಯಾಗಿದೆ
- ಕಲಬುರಗಿಯಲ್ಲಿ(Kalburgi) ಪೆಟ್ರೋಲ್  ದರ ಲೀಟರ್ ಗೆ 100.02ರೂ. ಹಾಗೂ ಡೀಸೆಲ್ ಗೆ 85.43ರೂ. ಇದೆ. ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ತಲಾ 2 ಪೈಸೆ ಕಡಿಮೆಯಾಗಿದೆ.

Karnataka Republic Day Tableau: ಈ ಬಾರಿ ಸ್ತಬ್ಧಚಿತ್ರದಲ್ಲಿ ಕಮಲಾದೇವಿ ಚಟ್ಟೋಪಾಧ್ಯಾಯ ಚಿತ್ರಣ!
ಪೆಟ್ರೋಲ್ ದರ ಪರಿಷ್ಕರಣೆ ಹೇಗೆ?
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್(VAT) ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್‌ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ.ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು.ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. 

Weekend Curfew ಹಿಂತೆಗೆತಕ್ಕೆ ಹೋಟೆಲ್‌ ಮಾಲೀಕರ ಸಂಘ, ಮದ್ಯ ವ್ಯಾಪಾರಿಗಳಿಂದ ಆಗ್ರಹ!
GST ಇಲ್ಲ
ಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ (GST) ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು.ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ. 

Follow Us:
Download App:
  • android
  • ios