ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸೇರಿದಂತೆ ಕ್ಷೇತ್ರದ ಎಲ್ಲ ವರ್ಗಗಳ ಜನರೇ ತಮ್ಮ ಭವಿಷ್ಯವಾಗಿದ್ದು ಅವರಿಗೆ ಮೂಲಭೂತ ಸೌಲಭ್ಯ ಒದಗಿಸುವುದೇ ತಮ್ಮ ಗುರಿ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು.
ಆಪರೇಷನ್ ಸಿಂಧು ಮೂಲಕ ಭಾರತಕ್ಕೆ ಮರಳಿದವರ ಪೈಕಿ ಚಿಕ್ಕಬಳ್ಳಾಪುರದವರೂ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಇಲ್ಲಿಯ ಅಲಿಪುರಕ್ಕೂ, ಇರಾನ್ಗೂ ಭಾರಿ ನಂಟಿದೆ. ಏನದು? ರೋಚಕ ಸ್ಟೋರಿ ಇಲ್ಲಿದೆ...
ಮಾವಿನ ಹಣ್ಣಿನ ಬೆಲೆ ಕುಸಿತದಿಂದ ಸಂಕಷ್ಟದಲ್ಲಿದ್ದ ರೈತರಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ನೆರವಿಗೆ ಬಂದಿದ್ದಾರೆ.. ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದ ಕುಮಾರಸ್ವಾಮಿ ಅವರ ಮನವಿಗೆ ಸ್ಪಂದಿಸಿ ಕೇಂದ್ರ ಸರ್ಕಾರ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯಡಿ ಬೆಂಬಲ ಬೆಲೆ ಘೋಷಿಸಿದೆ.
ಈ ಸರ್ಕಾರ ಐಸಿಯುನಲ್ಲಿದೆ. ಸರ್ಕಾರ ಇನ್ನೂ ಬದುಕಿದೆ ಎಂದು ತೋರಿಸಿಕೊಳ್ಳಲು, ಕಲಬುರ್ಗಿ, ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ ಮಾಡಿದ್ದಾರೆ ಎಂದು ಸಂಸದ ಡಾ.ಕೆ.ಸುಧಾಕರ್ ಟೀಕಿಸಿದರು.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಘಟನೆಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಳ ನೊಂದಿದ್ದಾರೆ, ನಮಗೆಲ್ಲಾ ಬಹಳ ದುಃಖವಾಗಿದೆ. ಮುಖ್ಯಮಂತ್ರಿಗಳಂತೂ ಬಹಳ ನೋವು ತಿಂದಿದ್ದಾರೆ ಎಂದು ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ವಿಜಯೋತ್ಸವದ ವೇಳೆ ನೂಕುನುಗ್ಗಲಿನಿಂದ 11 ಜನ ಸಾವನ್ನಪ್ಪಿದ ಘಟನೆಯನ್ನು ಸಿಟಿ ರವಿ 'ಸರ್ಕಾರದ ಪ್ರಾಯೋಜಿತ ಹತ್ಯಾಕಾಂಡ' ಎಂದು ಕರೆದಿದ್ದಾರೆ.
ಇದೇ ತಿಂಗಳ 11ರಂದು ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಗ್ರಾಮದಲ್ಲಿ ಕುಸುಮ್- ಸಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ನನ್ನ ಕ್ಷೇತ್ರ ವ್ಯಾಪ್ತಿಯ 366 ಹಳ್ಳಿಗಳ ಪೈಕಿ ಇದುವರೆಗೂ 152 ಹಳ್ಳಿಗಳಿಗೆ ಭೇಟಿ ನೀಡಿ ಅಲ್ಲಿನ ಜನತೆಯ ಸಮಸ್ಯೆಗಳ ಅರಿತಿದ್ದು, ಸಾಧ್ಯವಾದಷ್ಟೂ ಮಟ್ಟಿಗೆ ಪರಿಹರಿಸಿದ್ದೇನೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು.