Asianet Suvarna News Asianet Suvarna News

ಬೆಂಗಳೂರಲ್ಲಿಂದು ಐಪಿಎಲ್ ಪಂದ್ಯ, ಈ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧ, ಮಾರ್ಗಸೂಚಿ ಪ್ರಕಟ!

ಐಪಿಎಲ್ ಟೂರ್ನಿಯಲ್ಲಿಂದು ಆರ್‌ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗುತ್ತಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಗೊಂಡಿದೆ. ಈ ಪಂದ್ಯದ ಪ್ರಯುಕ್ತ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಸಗುಮ ಸಂಚಾರಕ್ಕೆ ಬೆಂಗಳೂರು ಟ್ರಾಫಿಕ್ ಪೊಲೀಸರು ಮಾರ್ಗಸೂಚಿ ಪ್ರಕಟಿಸಿದ್ದಾರೆ.
 

IPL 2024 Bengaluru Police Issues Traffic Advisory for Parking and smooth travel due RCB Match ckm
Author
First Published Mar 25, 2024, 3:09 PM IST

ಬೆಂಗಳೂರು(ಮಾ.25) ಐಪಿಎಲ್  2024ರ ಟೂರ್ನಿಗೆ ಚೆನ್ನೈನಲ್ಲಿ ಅದ್ಧೂರಿ ಚಾಲನೆ ಸಿಕ್ಕಿತ್ತು. ಇದೀಗ ಐಪಿಎಲ್ ಹಬ್ಬ ಬೆಂಗಳೂರಿಗೆ ಆಗಮಿಸಿದೆ. ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್  ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೋರಾಟ ನಡೆಸಲಿದೆ. ರಾತ್ರಿ 7.30ಕ್ಕೆ ಪಂದ್ಯ ಆರಂಭಗೊಳ್ಳುತ್ತಿದೆ. ಈಗಾಗಲೇ ಕ್ರೀಡಾಂಗಣದತ್ತ ಅಭಿಮಾನಿಗಳ ದಂಡು ಆಗಮಿಸುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಕ್ರೀಡಾಂಗಣದತ್ತ ಧಾವಿಸುತ್ತಿರುವ ಕಾರಣ ಸುಗಮ ಸಂಚಾರಕ್ಕೆ ಬೆಂಗಳೂರು ಟ್ರಾಫಿಕ್ ಪೊಲೀಸರು ಮಾರ್ಗಸೂಚಿ ಪ್ರಕಟಿಸಿದ್ದಾರೆ. ಕೆಲ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಪಂದ್ಯ ವೀಕ್ಷಿಸಲು ಕ್ರೀಡಾಂಗಣಕ್ಕೆ ಆಗಮಿಸುವ ಅಭಿಮಾನಿಗಳು ವಾಹನ ಪಾರ್ಕಿಂಗ್ ಮಾಡಲು ಸ್ಥಳ ಗುರುತಿಸಲಾಗಿದೆ. ಇಷ್ಟೇ ಅಲ್ಲ ಒಲಾ, ಊಬರ್ ಸೇರಿದಂತೆ ಟ್ಯಾಕ್ಸಿಗಳಿಗೂ ಪಿಕ್ ಅಪ್ ಹಾಗೂ ಡ್ರಾಪ್ ಮಾಡುಲು ಸ್ಥಳಗಳನ್ನು ನೀಡಲಾಗಿದೆ.

ಪಂದ್ಯದ ಹಿನ್ನಲೆಯಲ್ಲಿ ಮಾರ್ಚ್ 25ರ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆ ವರೆಗೆ ಈ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಈ ವಾಹನ ನಿಲುಗಡೆ ನಿಷೇಧಿಸಿರುವ ರಸ್ತೆಗಳ ವಿವರ ಇಲ್ಲಿದೆ.

> ಸ್ಟೀನ್ಸ್ ರಸ್ತೆ, ಎಂ.ಜಿ ರಸ್ತೆ, ಎಂ.ಜಿ ರಸ್ತೆ ಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ,
> ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ
> ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ
> ವಿಶ್ವಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ & ನೃಪತುಂಗ ರಸ್ತೆ

 

 

ದುಬಾರಿ ಬೆಲೆಯ ಸನ್‌ಗ್ಲಾಸ್‌ ಧರಿಸಿ ಆರ್‌ಸಿಬಿ ಪ್ರ್ಯಾಕ್ಟೀಸ್‌ಗೆ ಬಂದ ಕಿಂಗ್‌ ಕೊಹ್ಲಿ!

ಇದೇ ವೇಳೆ ಕ್ರೀಡಾಂಗಣಕ್ಕ ಆಗಮಿಸುವ ಅಭಿಮಾನಿಗಳು ಇತರರು ವಾಹನ ನಿಲುಗಡೆಗೆ ಕೆಲ ಸ್ಥಳಗಳನ್ನು ನಿಗದಿಪಡಿಸಲಾಗಿದೆ. ಈ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಿ ಪಂದ್ಯ ವೀಕ್ಷಿಸಲು ತೆರಳಬಹುದು. ಸಾರ್ವಜನಿಕ ವಾಹನ ನಿಲುಗಡೆ ಸ್ಥಳಗಳ ವಿವರ

> ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ
> ಯು.ಬಿ ಸಿಟಿ ಪಾರ್ಕಿಂಗ್ ಸ್ಥಳ
> ಬಿ.ಎಂ.ಟಿ.ಸಿ ಬಸ್ ನಿಲ್ದಾಣದ ಮೊದಲನೆ ಮಹಡಿ & ಓಲ್ಡ್ ಕೆ.ಜಿ.ಐ.ಡಿ ಬಿಲ್ಡಿಂಗ್
> ಕಿಂಗ್ಸ್ ರಸ್ತೆ, (ಕಬ್ಬನ್ ಪಾರ್ಕ್ ಒಳಭಾಗ)

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕ್ರೀಡಾಭಿಮಾನಿಗಳನ್ನು ಕರೆದುಕೊಂಡು ಬರುವ ಓಲಾ, ಉಬರ್, ಆಟೋ ಇತ್ಯಾದಿ ಕ್ಯಾಬ್‌ ಗಳು ಪಿಕ್ ಆಪ್ ಮತ್ತು ಡ್ರಾಪ್ ಗೆ ಪ್ರತ್ಯೇಕ ಸ್ಥಳಗಳ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರು ಕ್ರಿಕೆಟ್ ಪ್ರೇಮಿಗಳಿಗೆ ಗುಡ್‌ ನ್ಯೂಸ್; ಚಿನ್ನಸ್ವಾಮಿ ಸ್ಟೇಡಿಯಂಗೆ 12 ಸ್ಥಳದಿಂದ ಬಿಎಂಟಿಸಿ ಬಸ್ ಸಂಚಾರ

ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಅಭಿಮಾನಿಗಳು ಜಮಾಯಿಸಿದ್ದಾರೆ. ಇತ್ತ ಟಿಕೆಟ್‌ಗಾಗಿ ಈಗಲೂ ಭಾರಿ ಬೇಡಿಕೆ ವ್ಯಕ್ತವಾಗುತ್ತಿದೆ. ಆದರೆ ಎಲ್ಲಾ ಟಿಕೆಟ್‌ಗಳು ಸೋಲ್ಡ್ ಔಟ್ ಆಗಿವೆ. ಮೆಟ್ರೋ ಮೂಲಕ ಕ್ರೀಡಾಂಗಣಕ್ಕೆ ಆಗಮಿಸುವ , ಸಾರಿಗೆ ಬಸ್ ಮೂಲಕ ಆಗಮಿಸುವ ಅಭಿಮಾನಿಗಳಿಗೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. 
 

Follow Us:
Download App:
  • android
  • ios