Asianet Suvarna News Asianet Suvarna News

ಮೋದಿ ಸ್ಟೇಡಿಯಂನಲ್ಲಿ ಘರ್ಜಿಸಿದ ವಿಲ್ ಜ್ಯಾಕ್ಸ್; ಆರ್‌ಸಿಬಿಗೆ ಮತ್ತೊಂದು ಗೆಲುವು

ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಗೆಲ್ಲಲು 201 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸ್ಪೋಟಕ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್‌ಗೆ ಫಾಫ್ ಡು ಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಕೇವಲ 3.5 ಓವರ್‌ಗಳಲ್ಲಿ 40 ರನ್‌ಗಳ ಜತೆಯಾಟವಾಡಿತು.

Will Jacks Powerful Ton Kohli Knock Propel RCB To Stunning Win vs Gujarat Titans kvn
Author
First Published Apr 28, 2024, 7:02 PM IST

ಅಹಮದಾಬಾದ್(ಏ.28): ಇಂಗ್ಲೆಂಡ್ ಮೂಲದ ವಿಲ್ ಜ್ಯಾಕ್ಸ್ ಸಿಡಿಲಬ್ಬರದ ಶತಕ ಹಾಗೂ ವಿರಾಟ್ ಕೊಹ್ಲಿ ಸಮಯೋಚಿತ ಅರ್ಧಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ಎದುರು 24 ಎಸೆತ ಬಾಕಿ ಇರುವಂತೆಯೇ 9 ವಿಕೆಟ್ ಭರ್ಜರಿ ಗೆಲುವು ಸಾಧಿಸಿತು. ಜ್ಯಾಕ್ಸ್‌ ಅಜೇಯ 100 ರನ್ ಸಿಡಿಸಿದರೆ, ಕೊಹ್ಲಿ ಅಜೇಯ 70 ರನ್ ಬಾರಿಸಿದರು.

ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಗೆಲ್ಲಲು 201 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸ್ಪೋಟಕ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್‌ಗೆ ಫಾಫ್ ಡು ಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಕೇವಲ 3.5 ಓವರ್‌ಗಳಲ್ಲಿ 40 ರನ್‌ಗಳ ಜತೆಯಾಟವಾಡಿತು. ನಾಯಕ ಫಾಫ್ ಡು ಪ್ಲೆಸಿಸ್ 12 ಎಸೆತಗಳನ್ನು ಎದುರಿಸಿ 1 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 24 ರನ್ ಬಾರಿಸಿ ಸಾಯಿ ಕಿಶೋರ್‌ಗೆ ವಿಕೆಟ್ ಒಪ್ಪಿಸಿದರು

ಗುಡುಗಿದ ಜ್ಯಾಕ್ಸ್-ಕೊಹ್ಲಿ: ಫಾಫ್ ವಿಕೆಟ್ ಪತನದ ಬಳಿಕ ಜತೆಯಾದ ವಿಲ್ ಜ್ಯಾಕ್ಸ್ ಹಾಗೂ ವಿರಾಟ್ ಕೊಹ್ಲಿ ಭರ್ಜರಿ ಜತೆಯಾಟವಾಡುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ಯಶಸ್ವಿಯಾದರು. ಕೊಹ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸುವ ವೇಳೆ ಜ್ಯಾಕ್ಸ್ ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದರು. ಜ್ಯಾಕ್ಸ್ ಮೊದಲ 17 ಎಸೆತಗಳಲ್ಲಿ 17 ರನ್ ಸಿಡಿಸಿದರು. ಆ ಬಳಿಕ ಜ್ಯಾಕ್ಸ್ ಸ್ಪೋಟಕ ಬ್ಯಾಟಿಂಗ್ ನಡೆಸಿದರು. ವಿರಾಟ್ ಕೊಹ್ಲಿ ಹಾಗೂ ವಿಲ್ ಜ್ಯಾಕ್ಸ್ ಎರಡನೇ ವಿಕೆಟ್‌ಗೆ ಕೇವಲ 74 ಎಸೆತಗಳಲ್ಲಿ ಮುರಿಯದ 166 ರನ್ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. 

IPL 2024 ಗುಜರಾತ್‌ಗೆ ಆಸೆಯಾದ ಚೆನ್ನೈ ಹುಡುಗರು, ಆರ್‌ಸಿಬಿಗೆ ಗುರಿ 201

ಒಂದು ಕಡೆ ವಿರಾಟ್ ಕೊಹ್ಲಿ 44 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಅಜೇಯ 70 ರನ್ ಸಿಡಿಸಿದರು. ಈ ಮೂಲಕ ಈ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ 500 ರನ್ ಪೂರೈಸಿದ ಮೊದಲ ಬ್ಯಾಟರ್ ಎನಿಸಿಕೊಂಡರು.

ಇನ್ನು ಮತ್ತೊಂದು ತುದಿಯಲ್ಲಿ ಅಮೋಘ ಇನಿಂಗ್ಸ್ ಆಡಿದ ವಿಲ್‌ ಜ್ಯಾಕ್ಸ್ ಕೇವಲ 41 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ 10 ಸಿಕ್ಸರ್ ಸಹಿತ ಅಜೇಯ 100 ರನ್ ಸಿಡಿಸಿದರು. ಕೊನೆಯ ಓವರ್‌ನಲ್ಲಿ ಜ್ಯಾಕ್ಸ್ ಒಬ್ಬರೇ 3 ಸಿಕ್ಸರ್ ಹಾಗೂ ಒಂದು ಬೌಂಡರಿ ಸಹಿತ 28 ರನ್ ಸಿಡಿಸಿದರು. ವಿಲ್ ಜ್ಯಾಕ್ಸ್ 41 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಐಪಿಎಲ್ ಇತಿಹಾಸದಲ್ಲಿ 5ನೇ ಅತಿವೇಗದ ಶತಕ ಸಿಡಿಸಿದ ಬ್ಯಾಟರ್ ಎನ್ನುವ ಕೀರ್ತಿಗೆ ಪಾತ್ರರಾದರು.

ಗುಜರಾತ್‌ಗಿಂದು ಆರ್‌ಸಿಬಿ ಚಾಲೆಂಗ್‌; ಬೆಂಗಳೂರು ತಂಡಕ್ಕೆ ಇನ್ನೂ ಇದೆಯಾ ಪ್ಲೇ ಆಫ್ ಚಾನ್ಸ್?

ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಮಾಡಲಿಳಿದ ಗುಜರಾತ್ ಟೈಟಾನ್ಸ್ ತಂಡವು ಆರಂಭಿಕ ಆಘಾತದ ಹೊರತಾಗಿಯೂ ಸಾಯಿ ಸುದರ್ಶನ್ 84* ಹಾಗೂ ಶಾರುಕ್ ಖಾನ್ (58) ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 200 ರನ್ ಕಲೆಹಾಕಿತ್ತು.

Follow Us:
Download App:
  • android
  • ios