ಕಾರಿನ ಮಿರರ್ಗೆ ದ್ವಿಚಕ್ರ ವಾಹನ ತಾಕಿದ ಕಾರಣಕ್ಕೆ ರೊಚ್ಚಿಗೆದ್ದು ಸುಮಾರು ಎರಡು ಕಿ.ಮೀ. ದ್ವಿಚಕ್ರ ವಾಹನವನ್ನು ಹಿಂಬಾಲಿಸಿ ಕಾರಿನಿಂದ ಗುದ್ದಿಸಿ ಸವಾರನನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ದಂಪತಿಯನ್ನು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪುಣೆಯ ಸಾಫ್ಟ್ವೇರ್ ಎಂಜಿನಿಯರ್ ಜುಬೈರ್ ಹಂಗರ್ಗೇಕರ್ನನ್ನು ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ. ಅಲ್ ಖೈದಾ ಜೊತೆ ಸಂಪರ್ಕ ಹೊಂದಿದ್ದ ಈತ, ಯುವಕರನ್ನು ಮೂಲಭೂತವಾದಿಗಳನ್ನಾಗಿ ಮಾಡುತ್ತಾ, ಭಯೋತ್ಪಾದಕ ದಾಳಿಗೆ ಸಂಚು ರೂಪಿಸುತ್ತಿದ್ದ ಎಂಬ ಆಘಾತಕಾರಿ ವಿಷಯ ತನಿಖೆಯಿಂದ ಬಹಿರಂಗಗೊಂಡಿದೆ.
ಸತಾರ ವೈದ್ಯೆ ಡಾ. ಸಂಪದ ಮುಂಡೆ ಆತ್ಮಹತ್ಯೆ ಪ್ರಕರಣದಲ್ಲಿ ಭಾರಿ ಸಂಚಲನ. ಡೆತ್ ನೋಟಿನಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಪ್ರಶಾಂತ್ ಬದಾನೆ ಸೇರಿದಂತೆ ಮೂವರು ಪೊಲೀಸರ ವಿರುದ್ಧ ಲೈಂಗಿಕ ಕಿರುಕುಳ ಆರೋಪ.
ಕೊಪ್ಪಳ ಜಿಲ್ಲೆಯಲ್ಲಿ ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮ*ಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಮೃತ ಲಕ್ಷ್ಮೀ ಅವರ ತಾಯಿಯೇ, ತಮ್ಮ ಮಗಳ ಸಾವಿಗೆ ಬೀರಪ್ಪ ಎಂಬಾತನೊಂದಿಗಿನ ಅಕ್ರಮ ಸಂಬಂಧ ಮತ್ತು ಆತನ ಒತ್ತಡವೇ ಕಾರಣ ಎಂದು ದೂರು ದಾಖಲಿಸಿದ್ದಾರೆ.
ಡಿಜಿಟಲ್ ವಂಚನೆಯ ಪರ್ವ ಮುಂದುವರಿದಿದೆ. ಖಾಸಗಿ ಫೈನಾನ್ಸ್ ಕಂಪನಿಯೊಂದರ ಆ್ಯಪ್ ಹ್ಯಾಕ್ ಮಾಡಿ ಕೇವಲ ಎರಡೂವರೆ ತಾಸಲ್ಲಿ 49 ಕೋಟಿ ರು. ದೋಚಿದ್ದ ಸೈಬರ್ ವಂಚನೆ ಜಾಲದ ಇಬ್ಬರು ದುಷ್ಕರ್ಮಿಗಳನ್ನು ಬೆಂಗಳೂರಿನ ಸಿಸಿಬಿ ಸೈಬರ್ ಕ್ರೈಂ ಠಾಣೆ ಪೊಲೀಸರು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳಗಾವಿಯ ಚಿಕ್ಕೋಡಿಯಲ್ಲಿ, ಪ್ರೇಯಸಿಯೊಂದಿಗೆ ಲಾಡ್ಜ್ನಲ್ಲಿದ್ದ ಪತಿಯನ್ನು ಪತ್ನಿ ರೆಡ್ಹ್ಯಾಂಡ್ ಆಗಿ ಹಿಡಿದಿದ್ದಾಳೆ. ಕೋಪಗೊಂಡ ಆಕೆ, ಸಾರ್ವಜನಿಕವಾಗಿ ಬೀದಿಗೆಳೆದು ತಂದು ಚಪ್ಪಲಿಯಿಂದ ಥಳಿಸಿದ್ದು, ಈ ಘಟನೆಯ ವಿಡಿಯೋ ವೈರಲ್ ಆಗಿದೆ.
Body found in Dudhganga river: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಬಳಿ ದೂಧಗಂಗಾ ನದಿ ತೀರದಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾಗಿದೆ. ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆಗೈದು ಶವವನ್ನು ಎಸೆಯಲಾಗಿದ್ದು, ಸದಲಗಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.
ಚಿಂಚೊಳ್ಳಿ ತಾಲೂಕಿನಲ್ಲಿ, ತನ್ನ ಬಳಿ ಕೆಲಸ ಮಾಡುತ್ತಿದ್ದ ಕಾರ್ಮಿಕನ 15 ವರ್ಷದ ಅಪ್ರಾಪ್ತ ಮಗಳ ಮೇಲೆ ಅತ್ಯಾ*ಚಾರ ಎಸಗಿದ ಪಾಲಿಶಿಂಗ್ ಘಟಕದ ಮಾಲೀಕನನ್ನು ಬಂಧಿಸಲಾಗಿದೆ. ಈ ಕೃತ್ಯದಿಂದ ಬಾಲಕಿ ಗರ್ಭಿಣಿಯಾಗಿದ್ದಾಳೆ
ಕಾರಟಗಿ ತಹಸೀಲ್ದಾರ್ ಕಚೇರಿಯಲ್ಲಿ ರೈತರ ಭೂ ದಾಖಲೆಗಳನ್ನು ಅಕ್ರಮವಾಗಿ ತಿದ್ದುಪಡಿ ಮಾಡಿ, ವ್ಯಾಜ್ಯ ಸೃಷ್ಟಿಸಿದ ಆರೋಪ ಮೇಲೆ ಹಿಂದಿನ ಶಿರಸ್ತೇದಾರ್ ಪ್ರಕಾಶ್ ಅಮಾನತು. ಕಲಬುರಗಿ ಪ್ರಾದೇಶಿಕ ಆಯುಕ್ತಾಲಯದ ತನಿಖೆಯ ನಂತರ, 123 ಪ್ರಕರಣದ ದಾಖಲೆ ತಿದ್ದುಪಡಿ 97 ಕಡತ ಮಾಯ ಆಗಿರುವುದು ಬಯಲಾಗಿದೆ.
ಇನ್ಸ್ಟಾಗ್ರಾಂನಲ್ಲಿ ಪರಿಚಯವಾದವನಿಗಾಗಿ ಗಂಡನನ್ನು ಬಿಟ್ಟು ಬಂದ ಮಹಿಳೆಗೆ ತನ್ನ ಮಗಳನ್ನು ಕಳೆದುಕೊಳ್ಳುವ ದುರಂತ ಎದುರಾಗುತ್ತದೆ. ಮತ್ತೊಂದು ಘಟನೆಯಲ್ಲಿ, ಸೌಂಡ್ ಸ್ಪೀಕರ್ ವಿಚಾರಕ್ಕೆ ಶುರುವಾದ ಜಗಳದಲ್ಲಿ ತಂದೆಯೇ ತನ್ನ ಮಗನಿಗೆ ಗುಂಡು ಹಾರಿಸುತ್ತಾನೆ. ಈ ಎರಡೂ ಕರುಳು ಹಿಂಡುವ ಕಥೆಗಳ ವರದಿ ಇಲ್ಲಿದೆ.