Road accidents: ಪ್ರತ್ಯೇಕ ಅಪಘಾತ ಮೂವರು ಸ್ಥಳದಲ್ಲೇ ಸಾವು!

Synopsis
ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಾರವಾರ ತಾಲೂಕಿನ ತೋಡೂರು ಗ್ರಾಮದಲ್ಲಿ ನಡೆದಿದೆ.
ಕಾರವಾರ (ಜೂ.7) ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಾರವಾರ ತಾಲೂಕಿನ ತೋಡೂರು ಗ್ರಾಮದಲ್ಲಿ ನಡೆದಿದೆ.
ಸಂದೀಪ್ ಗುನಗ, ಲಿಂಗರಾಜು ಮೃತಪಟ್ಟಿರುವ ದುರ್ದೈವಿಗಳು. ಬೈಕ್‌ನಲ್ಲಿ ಹೋಗುತ್ತಿದ್ದಾಗ ಡಿಕ್ಕಿ ಹೊಡೆದು ಪರಾರಿಯಾಗಿರುವ ಅಪರಿಚಿತ ವಾಹನ. ಇದು ಯೋಜಿತ ಕೊಲೆಯೋ, ಅಪಘಾತವೋ ಸಂಶಯ ವ್ಯಕ್ತವಾಗಿದೆ. ಸದ್ಯ ಘಟನೆ ಸಂಬಂಧ ಕಾರವಾರ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು - ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ: ಕಾರು ಪಲ್ಟಿಯಾಗಿ ಐವರಿಗೆ ಗಂಭೀರ ಗಾಯ
ಬೈಕ್‌ಗಳ ನಡುವೆ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು
ಮದ್ದೂರು: ಎರಡು ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಒಂದು ಬೈಕ್‌ನ ಚಾಲಕ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ಗಾಯಗೊಂಡಿರುವ ತಾಲೂಕಿನ ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದ ಹಿಂಭಾಗದಲ್ಲಿ ಸೋಮವಾರ ಸಂಜೆ ಜರುಗಿದೆ. ಗೆಜ್ಜಲಗೆರೆಯ ಲೆ.ಶಿವಕುಮಾರ್ ಪುತ್ರ ಭರತ್‌ಕುಮಾರ್ (21) ಮೃತ ಬೈಕ್ ಚಾಲಕ. ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಭರತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.
ಮತ್ತೊಂದು ಬೈಕ್ ಚಾಲಕ ಪ್ರಜ್ವಲ…ಗೌಡ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ವೃತ್ತಿಯಲ್ಲಿ ಗೂಡ್‌್ಸ ಟೆಂಪೋ ಚಾಲಕನಾಗಿರುವ ಭರತ್ ತನ್ನ ಜಮೀನಿಗೆ ತನ್ನ ಪಲ್ಸರ್ ಬೈಕ್‌ನಲ್ಲಿ ತೆರಳುತ್ತಿದ್ದನು. ಕೈಗಾರಿಕಾ ಪ್ರದೇಶದ ಹಿಂಭಾಗದ ಮೊಬ್ಬಳಗೆರೆ ರಸ್ತೆಯಲ್ಲಿ ಪ್ರಜ್ವಲ…ಗೌಡ ಚಾಲನೆ ಮಾಡುತ್ತಿದ್ದ ಬೈಕ್ ನೇರವಾಗಿ ಭರತ್‌ಗೌಡನ ಬೈಕ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಈ ಸಂಬಂಧ ಮದ್ದೂರು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ರೈಲ್ವೆ ಪ್ರಯಾಣಿಕರಿಗೆ ಕೇವಲ 35 ಪೈಸೆಗೆ ಸಿಗುತ್ತೆ 10 ಲಕ್ಷ ರೂ. ವಿಮೆ, ಖರೀದಿ ಹೇಗೆ? ಇಲ್ಲಿದೆ ಮಾಹಿತಿ