Kerala ragging horror: ವಿದ್ಯಾರ್ಥಿಯ ಗುಪ್ತಾಂಗಕ್ಕೆ ಡಂಬಲ್ಸ್ ನೇತುಹಾಕಿ ಅಮಾನವೀಯ ಕೃತ್ಯ!

ಕೊಟ್ಟಾಯಂನ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳು ಮೊದಲ ವರ್ಷದ ವಿದ್ಯಾರ್ಥಿಗಳ ಮೇಲೆ ರ‍್ಯಾಗಿಂಗ್ ಹೆಸರಿನಲ್ಲಿ ಅಮಾನವೀಯವಾಗಿ ವರ್ತಿಸಿದ ಘಟನೆ ಬೆಳಕಿಗೆ ಬಂದಿದೆ. ವಿವಸ್ತ್ರಗೊಳಿಸಿ ಖಾಸಗಿ ಭಾಗಗಳಿಗೆ ಡಂಬೆಲ್ಸ್ ನೇತು ಹಾಕಿ ಹಿಂಸೆ ನೀಡುವುದು, ಕಂಪಾಸ್ ಬಾಕ್ಸ್‌ನಿಂದ ಚುಚ್ಚುವುದು ಸೇರಿದಂತೆ ಹಲವು ರೀತಿಯಲ್ಲಿ ಕಿರುಕುಳ ನೀಡುತ್ತಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

Kerala ragging horror stripped naked subjected to brutal act used dumbbells keral Kottayam student reveal rav

ಕೊಟ್ಟಾಯಂ (ಫೆ.13): ವಿವಸ್ತ್ರಗೊಳಿಸಿ ಖಾಸಗಿ ಭಾಗಗಳಿಗೆ ವ್ಯಾಯಾಮಕ್ಕಾಗಿ ಬಳಸುವ ಡಂಬೆಲ್ಸ್‌ಗಳನ್ನು ನೇತುಹಾಕಿ ಹಿಂಸೆ ಕೊಡ್ತಾರೆ, ಕಂಪಾಸ್‌ ಬಾಕ್ಸ್‌ನ ಚೂಪಾದ ಕೈವಾರ (ಜ್ಯಾಮಿತಿ) ದಿಂದ ಚುಚ್ಚಿ ಗಾಯ ಮಾಡ್ತಾರೆ, ಪ್ರತಿ ಭಾನುವಾರ ಮದ್ಯ ಸೇವನೆಗೆ ಹಣಕೊಡದಿದ್ದರೆ ಮನಸೋ ಇಚ್ಛೆ ಹಲ್ಲೆ ಮಾಡ್ತಾರೆ...!

ಇದು ಯಾವುದೋ ಸಿನಿಮಾದಲ್ಲಿ ರೌಡಿಗಳು ಅಮಾಯಕರ ಮೇಲೆ ತೋರುವ ರಾಕ್ಷಸೀಯ ಕೃತ್ಯದ ದೃಶ್ಯವಲ್ಲ, ಬದಲಾಗಿ ಕೇರಳದ ಕೊಟ್ಟಾಯಂನಲ್ಲಿರುವ ಸರ್ಕಾರಿ ನರ್ಸಿಂಗ್‌ ಕಾಲೇಜ್‌ನಲ್ಲಿ ಹಿರಿಯ ವಿದ್ಯಾರ್ಥಿಗಳಿಂದ ಮೊದಲ ವರ್ಷದ ವಿದ್ಯಾರ್ಥಿಗಳ ಮೇಲೆ ರ್‍ಯಾಗಿಂಗ್‌ ಹೆಸರಲ್ಲಿ ಕಳೆದ ಮೂರು ತಿಂಗಳಿಂದ ನಡೆಯುತ್ತಿರುವ ಅಮಾನವೀಯ ವರ್ತನೆ.

ಹಿರಿಯ ವಿದ್ಯಾರ್ಥಿಗಳ ಈ ಮೃಗೀಯ ವರ್ತನೆ ವಿರುದ್ಧ ಮೂವರು ವಿದ್ಯಾರ್ಥಿಗಳು ಇದೀಗ ಠಾಣೆ ಮೆಟ್ಟಿಲೇರಿದ್ದು, ಅದರಂತೆ ಐವರು ವಿದ್ಯಾರ್ಥಿಗಳನ್ನು ಅಮಾನತು ಮಾಡಿ ಆ್ಯಂಟಿ ರ್‍ಯಾಗಿಂಗ್‌ ಕಾಯ್ದೆಯಡಿ ಬಂಧಿಸಲಾಗಿದೆ.

ಇದನ್ನೂ ಓದಿ: ಟ್ಲಾಯ್ಲೆಟ್ ಸೀಟು ನೆಕ್ಕುವಂತೆ ಒತ್ತಾಯಕ್ಕೆ ವಿದ್ಯಾರ್ಥಿ ಸ್ವಹ ತ್ಯೆ, ಭಯಾನಕ ಸತ್ಯ ಬಿಚ್ಚಿಟ್ಟ ಬಾಲಕನ ತಾಯಿ!

ಮೂರು ತಿಂಗಳಿಂದ ಚಿತ್ರಹಿಂಸೆ: ಕಾಲೇಜಿನ ಜೂನಿಯರ್‌ಗಳನ್ನು ವಿವಸ್ತ್ರಗೊಳಿಸಿ ಅವರ ಖಾಸಗಿ ಅಂಗಗಳಿಗೆ ಡಂಬೆಲ್ಸ್‌ಗಳನ್ನು ನೇತುಹಾಕಿ ವಿಕೃತ ಆನಂದಪಡುವ ಹಿರಿಯ ವಿದ್ಯಾರ್ಥಿಗಳು ಕೈವಾರದಂಥ ಚೂಪಾದ ವಸ್ತುಗಳಿಂದ ಚುಚ್ಚಿ ಹಿಂಸೆ ನೀಡಲಾಗುತ್ತಿತ್ತು. ಈ ವೇಳೆ ಗಾಯಗಳಾದರೆ ಅದಕ್ಕೆ ಮುಲಾಮು ಹಚ್ಚಲಾಗುತ್ತಿತ್ತು. ಒಂದು ವೇಳೆ ಈ ಸಂದರ್ಭದಲ್ಲಿ ನೋವಿನಿಂದ ಕೂಗಿದರೆ ಆ ಮುಲಾಮು ಅನ್ನು ಮುಖ, ತಲೆ, ಬಾಯಿಗೆ ಹಾಕಲಾಗುತ್ತಿತ್ತು.

ವಿವಸ್ತ್ರಗೊಳಿಸಿ ಹಿಂಸೆ ನೀಡುವ ದೃಶ್ಯಗಳನ್ನು ವಿದ್ಯಾರ್ಥಿಗಳು ಚಿತ್ರೀಕರಣ ಕೂಡ ಮಾಡಿಕೊಳ್ಳುತ್ತಿದ್ದರು. ರ್‍ಯಾಗಿಂಗ್ ವಿಚಾರ ಯಾರ ಮುಂದೆಯಾದರೂ ಬಾಯ್ಬಿಟ್ಟರೆ ಅದನ್ನು ವೈರಲ್‌ ಮಾಡುವ, ಅವರ ಶೈಕ್ಷಣಿಕ ಭವಿಷ್ಯವನ್ನೇ ಹಾಳು ಮಾಡುವ ಬೆದರಿಕೆಯನ್ನು ಹಾಕುತ್ತಿದ್ದರು.

ಇದನ್ನೂ ಓದಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ದೋಷಿ:, ಮರಣದಂಡನೆ ಸಾಧ್ಯತೆ?

ಹಣ ವಸೂಲಿ: ಹಿರಿಯ ವಿದ್ಯಾರ್ಥಿಗಳ ಆಟಾಟೋಪ ಚಿತ್ರಹಿಂಸೆಗಷ್ಟೇ ನಿಲ್ಲದೆ, ಕಿರಿಯ ವಿದ್ಯಾರ್ಥಿಗಳಿಂದ ಭಾನುವಾರ ಮದ್ಯ ಸೇವಿಸಲು ಬಲವಂತವಾಗಿ ಹಣವನ್ನೂ ವಸೂಲಿ ಮಾಡಲಾಗುತ್ತಿತ್ತು. ಹಣ ಕೊಡಲು ನಿರಾಕರಿಸಿದರೆ ಅವರಿಗೆ ಮನಸೋ ಇಚ್ಛೆ ಹಲ್ಲೆ ನಡೆಸಲಾಗುತ್ತಿತ್ತು. ಹಿರಿಯ ವಿದ್ಯಾರ್ಥಿಗಳಿಗೆ ಹಣಕೊಡಲಾಗದ ವಿದ್ಯಾರ್ಥಿಯೊಬ್ಬ ತಾನು ಅನುಭವಿಸುತ್ತಿರುವ ಚಿತ್ರಹಿಂಸೆಯನ್ನು ತಂದೆಯ ಮುಂದೆ ಹೇಳಿಕೊಂಡಿದ್ದು, ಪೋಷಕರ ಸೂಚನೆ ಮೇರೆಗೆ ಇದೀಗ ಪೊಲೀಸರಿಗೆ ದೂರು ನೀಡಲಾಗಿದೆ.

ಇತ್ತೀಚೆಗೆ 15 ವರ್ಷದ ಬಾಲಕನೊಬ್ಬ ಕೊಚ್ಚಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಇದಕ್ಕೆ ಸಹಪಾಠಿಗಳ ಕಿರುಕುಳವೇ ಕಾರಣ ಎಂದು ಆತನ ತಾಯಿ ಆರೋಪಿಸಿದ್ದರು. ಇದರ ಬೆನ್ನಲ್ಲೇ ಈ ಘಟನೆ ಬೆಳಕಿಗೆ ಬಂದಿರುವುದು ತೀವ್ರ ಆಕ್ರೋಶ, ಆತಂಕಕ್ಕೆ ಕಾರಣವಾಗಿದೆ.

Latest Videos
Follow Us:
Download App:
  • android
  • ios