ಸಿದ್ದರಾಮಯ್ಯ ಅವರನ್ನು ಎಐಸಿಸಿ ಹಿಂದುಳಿದ ವರ್ಗಗಳ ಘಟಕಕ್ಕೆ ಸದಸ್ಯರನ್ನಾಗಿ ಮಾಡಲಾಗಿದೆಯೇ ಹೊರತು ಅಧ್ಯಕ್ಷರನ್ನಾಗಿ ಅಲ್ಲ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೂ ಮುಂಚೆಯೇ 2026ರಲ್ಲಿ ರಾಜ್ಯ ವಿಧಾನಸಭೆಗೆ ಮಧ್ಯಂತರ ಚುನಾವಣೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.
ಐದು ಹುಲಿಗಳ ಸಾವಿಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಸಂಸದ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಮತ್ತು ಸರ್ಕಾರದಲ್ಲಿ
ಅಪೂರ್ಣ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸುವ ಮೂಲಕ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಅಧಿಕಾರಿಗಳು ಮುಂದಾಗಲು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಖಡಕ್ ಎಚ್ಚರಿಕೆ ನೀಡಿದರು.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಅಧಿಕಾರಿಗಳ ಮನೆ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕೋಟ್ಯಂತರ ಮೌಲ್ಯದ ಚಿನ್ನ, ಬೆಳ್ಳಿ, ನಗದು ಹಾಗೂ ದಾಖಲೆ ವಶಪಡಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಿಸುವ ಉದ್ದೇಶದಿಂದ ಈ ಜಂಟಿ ಕಾರ್ಯಾಚರಣೆ ನಡೆಸಲಾಗಿದೆ.