- Home
- Sports
- Cricket
- ಲಾರ್ಡ್ಸ್ ಟೆಸ್ಟ್ ಪಂದ್ಯಕ್ಕೆ ಬಲಿಷ್ಠ ಇಂಗ್ಲೆಂಡ್ ತಂಡ ಪ್ರಕಟ; ಜೋಫ್ರಾ ಆರ್ಚರ್‌ಗೆ 4 ವರ್ಷಗಳ ಬಳಿಕ ಸ್ಥಾನ!
ಲಾರ್ಡ್ಸ್ ಟೆಸ್ಟ್ ಪಂದ್ಯಕ್ಕೆ ಬಲಿಷ್ಠ ಇಂಗ್ಲೆಂಡ್ ತಂಡ ಪ್ರಕಟ; ಜೋಫ್ರಾ ಆರ್ಚರ್‌ಗೆ 4 ವರ್ಷಗಳ ಬಳಿಕ ಸ್ಥಾನ!
ಲಾರ್ಡ್ಸ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯಕ್ಕೆ ಬಲಿಷ್ಠ ಇಂಗ್ಲೆಂಡ್ ಕ್ರಿಕೆಟ್ ತಂಡ ಪ್ರಕಟವಾಗಿದ್ದು, ಮಾರಕ ವೇಗಿ ಜೋಫ್ರಾ ಆರ್ಚರ್, ಇಂಗ್ಲೆಂಡ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
- FB
- TW
- Linkdin

ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲೆರಡು ಪಂದ್ಯಗಳು ಮುಕ್ತಾಯವಾಗಿದ್ದು, ಉಭಯ ತಂಡಗಳು ತಲಾ ಒಂದೊಂದು ಪಂದ್ಯಗಳನ್ನು ಜಯಿಸುವ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿದೆ.
ಹೆಡಿಂಗ್ಲೆ ಟೆಸ್ಟ್ ಪಂದ್ಯವನ್ನು ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿದ್ದ ಆತಿಥೇಯ ಇಂಗ್ಲೆಂಡ್ ತಂಡಕ್ಕೆ ಎಜ್‌ಬಾಸ್ಟನ್‌ನಲ್ಲಿ ಶಾಕ್ ನೀಡುವಲ್ಲಿ ಶುಭ್‌ಮನ್ ಗಿಲ್ ನೇತೃತ್ವದ ಟೀಂ ಇಂಡಿಯಾ ಯಶಸ್ವಿಯಾಗಿದೆ.
ಹೀಗಾಗಿ ಜುಲೈ 10ರಿಂದ ಆರಂಭವಾಗಲಿರುವ ಮೂರನೇ ಟೆಸ್ಟ್ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಹೀಗಿರುವಾಗಲೇ ಲಾರ್ಡ್ಸ್ ಟೆಸ್ಟ್‌ಗೆ ಬಲಿಷ್ಠ 11 ಆಟಗಾರರನ್ನೊಳಗೊಂಡ ತಂಡವನ್ನು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಘೋಷಿಸಿದೆ.
ಮಾರಕ ವೇಗಿ ಜೋಫ್ರಾ ಆರ್ಚರ್ 4 ವರ್ಷಗಳ ಬಳಿಕ ಅಂದರೆ 1596 ದಿನಗಳ ಬಳಿಕ ಇಂಗ್ಲೆಂಡ್ ಟೆಸ್ಟ್ ತಂಡಕ್ಕೆ ಕಮ್‌ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಗಾಯದ ಸಮಸ್ಯೆಯಿಂದ ಪದೇ ಪದೇ ಜೋಫ್ರಾ ಆರ್ಚರ್ ಇಂಗ್ಲೆಂಡ್ ಟೆಸ್ಟ್ ತಂಡದಿಂದ ಹೊರಗುಳಿಯುತ್ತಲೇ ಬಂದಿದ್ದಾರೆ. 2021ರ ಫೆಬ್ರವರಿಯಲ್ಲಿ ಕೊನೆಯ ಬಾರಿಗೆ ಭಾರತ ವಿರುದ್ದವೇ ಜೋಫ್ರಾ ಆರ್ಚರ್ ಇಂಗ್ಲೆಂಡ್ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದರು.
ಜೋಫ್ರಾ ಆರ್ಚರ್ ಇದೀಗ ತಂಡ ಕೂಡಿಕೊಂಡಿದ್ದರಿಂದ ಮತ್ತೋರ್ವ ಯುವ ವೇಗಿ ಜೋಶ್ ಟಂಗ್ ತಮ್ಮ ಸ್ಥಾನವನ್ನು ತ್ಯಾಗ ಮಾಡಿದ್ದಾರೆ. ಇನ್ನುಳಿದಂತೆ ಇಂಗ್ಲೆಂಡ್ ತಂಡದಲ್ಲಿ ಮತ್ತೆ ಯಾವುದೇ ಬದಲಾವಣೆಗಳು ಆಗಿಲ್ಲ.
ಜೋಫ್ರಾ ಆರ್ಚರ್ ಇಂಗ್ಲೆಂಡ್ ಪರ 13 ಟೆಸ್ಟ್ ಪಂದ್ಯಗಳನ್ನಾಡಿ 31.04ರ ಸರಾಸರಿಯಲ್ಲಿ 42 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಇದೀಗ ಕಮ್‌ಬ್ಯಾಕ್ ಟೆಸ್ಟ್‌ನಲ್ಲಿ ಆರ್ಚರ್ ಯಾವ ರೀತಿ ಪ್ರದರ್ಶನ ನೀಡುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.
ಲಾರ್ಡ್ಸ್ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡ ಹೀಗಿದೆ:
ಜಾಕ್ ಕ್ರಾಲಿ, ಬೆನ್ ಟಕೆಟ್, ಓಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್(ನಾಯಕ), ಜೇಮಿ ಸ್ಮಿತ್(ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಬ್ರೈಡನ್ ಕಾರ್ಸ್, ಜೋಫ್ರಾ ಆರ್ಚರ್, ಶೋಯೆಬ್ ಬಷೀರ್.