ಅಹಮದಾಬಾದ್ನಲ್ಲಿ ಶತಕ ಸಿಡಿಸಿ ಹೊಸ ದಾಖಲೆ ಬರೆದ ಶುಭ್ಮನ್ ಗಿಲ್!
ಇಂಗ್ಲೆಂಡ್ ವಿರುದ್ಧದ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯದಲ್ಲಿ ಭಾರತದ ಶುಭ್ಮನ್ ಗಿಲ್ ಅಬ್ಬರದ ಶತಕ ಬಾರಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ.

ಗಿಲ್ ಸೆಂಚುರಿ: ಹೊಸ ದಾಖಲೆ
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯ ಅಹಮದಾಬಾದ್ನಲ್ಲಿ ನಡೆಯುತ್ತಿದೆ. ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಕೇವಲ 1 ರನ್ ಗಳಿಸಿ ನಿರಾಸೆ ಮೂಡಿಸಿದರು.

ಶತಕ ಸಿಡಿಸಿದ ಶುಭ್ಮನ್ ಗಿಲ್
ಇನ್ನೊಬ್ಬ ಆರಂಭಿಕ ಆಟಗಾರ ಶುಭ್ಮನ್ ಗಿಲ್ ಜವಾಬ್ದಾರಿಯುತ ಆಟ ಪ್ರದರ್ಶಿಸಿದರು. 95 ಎಸೆತಗಳಲ್ಲಿ ಶತಕ ಬಾರಿಸಿ ಮಿಂಚಿದರು. ಮೊದಲ ಎರಡು ಪಂದ್ಯಗಳಲ್ಲಿ ಗಿಲ್ ಉತ್ತಮ ಪ್ರದರ್ಶನ ನೀಡಿ 87 ಮತ್ತು 60 ರನ್ ಗಳಿಸಿದ್ದರು.
ಅಬ್ಬರಿಸಿದ ಗಿಲ್
ಇಂದಿನ ಪಂದ್ಯದಲ್ಲಿ ಗಿಲ್ ಅಮೋಘ ಪ್ರದರ್ಶನ ನೀಡಿ ಹೊಸ ಮೈಲಿಗಲ್ಲು ತಲುಪಿದ್ದಾರೆ. ಕೇವಲ 50 ಇನ್ನಿಂಗ್ಸ್ಗಳಲ್ಲಿ 2,500 ರನ್ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಭಾರತ vs ಇಂಗ್ಲೆಂಡ್
ಇಂಗ್ಲೆಂಡ್ ಎದುರಿನ ಮೂರನೇ ಏಕದಿನ ಪಂದ್ಯದಲ್ಲಿ ಶುಭ್ಮನ್ ಗಿಲ್ ಕೇವಲ 102 ಎಸೆತಗಳಲ್ಲಿ 112 ರನ್ ಗಳಿಸಿ ಔಟಾದರು. ಇದರಲ್ಲಿ 14 ಬೌಂಡರಿ ಮತ್ತು 3 ಸಿಕ್ಸರ್ಗಳು ಸೇರಿವೆ.