ಕೊಹ್ಲಿ, ರೋಹಿತ್ ಮುಂದಿನ ವರ್ಲ್ಡ್ ಕಪ್ ಆಡೋದೇ ಡೌಟ್; ಹೊಸ ಬಾಂಬ್ ಸಿಡಿಸಿದ ಗಂಗೂಲಿ!
ಕೋಲ್ಕತಾ: 2027ರ ಐಸಿಸಿ ಏಕದಿನ ವಿಶ್ವಕಪ್ ಆಡಲು ಕನಸು ಕಾಣುತ್ತಿರುವ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರ ಕ್ರಿಕೆಟ್ ಭವಿಷ್ಯದ ಬಗ್ಗೆ ಸೌರವ್ ಗಂಗೂಲಿ ಅಚ್ಚರಿಯ ಮಾತುಗಳನ್ನಾಡಿದ್ದಾರೆ.
- FB
- TW
- Linkdin
Follow Us
)
ಟೆಸ್ಟ್ ಹಾಗೂ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವ ಭಾರತದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ 2027ರ ಏಕದಿನ ವಿಶ್ವಕಪ್ ಮೇಲೆ ಕಣ್ಣಿಟ್ಟಿದ್ದಾರೆ.
ಆದರೆ ಮಾಜಿ ನಾಯಕ ಸೌರವ್ ಗಂಗೂಲಿ ಪ್ರಕಾರ, ರೋಹಿತ್ ಹಾಗೂ ಕೊಹ್ಲಿ 2027ರ ವಿಶ್ವಕಪ್ ತಂಡದಲ್ಲಿ ಸ್ಥಾನ ಗಿಟ್ಟಿಸುವುದು ಕಷ್ಟ.
ಈ ಬಗ್ಗೆ ಮಾಧ್ಯಮ ಸಂದರ್ಶನದಲ್ಲಿ ಮಾತನಾಡಿದ ಬಿಸಿಸಿಐ ಮಾಜಿ ಅಧ್ಯಕ್ಷ ಗಂಗೂಲಿ, ‘ಎಲ್ಲರಂತೆ ಕೊಹ್ಲಿ, ರೋಹಿತ್‌ರಿಂದಲೂ ಆಟ ದೂರವಾಗುತ್ತಿದೆ ಮತ್ತು ಅವರು ಕೂಡಾ ಆಟದಿಂದ ದೂರ ಹೋಗುತ್ತಾರೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು.
2027ರ ವಿಶ್ವಕಪ್‌ಗೆ ಮುನ್ನ ಭಾರತ 27 ಏಕದಿನ ಪಂದ್ಯಗಳನ್ನಾಡಲಿದೆ. ವರ್ಷಕ್ಕೆ 15 ಪಂದ್ಯಗಳನ್ನಾಡುವುದು ಅವರಿಬ್ಬರಿಗೂ ಸುಲಭವಲ್ಲ’ ಎಂದಿದ್ದಾರೆ.
ಇನ್ನು, ಕೊಹ್ಲಿ ಟೆಸ್ಟ್ ನಿವೃತ್ತಿ ಬಗ್ಗೆ ಮಾತನಾಡಿದ ಅವರು, ‘ವಿರಾಟ್ ಅದ್ಭುತ ಆಟಗಾರ. ಹೀಗಾಗಿ ಅವರ ಸ್ಥಾನಕ್ಕೆ ಸೂಕ್ತ ಆಟಗಾರನನ್ನು ಹುಡುಕಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಈ ಬಗ್ಗೆ ನನಗೆ ಯಾವುದೇ ಚಿಂತೆ ಇಲ್ಲ’ ಎಂದಿದ್ದಾರೆ.
ಕಳೆದ ವರ್ಷ 2024ರ ಐಸಿಸಿ ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆಯೇ ಈ ಇಬ್ಬರು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು. ಇನ್ನು ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿಗೂ ಮುನ್ನ ಟೆಸ್ಟ್ ಮಾದರಿಗೂ ಈ ಇಬ್ಬರು ದಿಗ್ಗಜ ಕ್ರಿಕೆಟಿಗರು ನಿವೃತ್ತಿ ಘೋಷಿಸಿದ್ದಾರೆ.
14ನೇ ಆವೃತ್ತಿಯ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು 2027ರ ಅಕ್ಟೋಬರ್ ಹಾಗೂ ನವೆಂಬರ್ ಸಮಯದಲ್ಲಿ ನಡೆಯಲಿದ್ದು, ಈ ಟೂರ್ನಿಗೆ ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಹಾಗೂ ನಮೀಬಿಯಾ ದೇಶಗಳು ಆತಿಥ್ಯ ವಹಿಸಲಿವೆ.