ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಶೇಷ ಹೆಲಿಕಾಪ್ಟರ್ ಮೂಲಕ ಹಾನಗಲ್ ತಾಲೂಕಿನ ಅಕ್ಕಿ ಆಲೂರಿಗೆ ಆಗಮಿಸಿದರು. ಅವರ ಜೊತೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಶಿವಾನಂದ ಪಾಟೀಲ್, ಸತೀಶ್ ಜಾರಕಿಹೊಳಿ, ಶಾಸಕರಾದ ಶ್ರೀನಿವಾಸ್ ಮಾನೆ ಸೇರಿದಂತೆ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು.