Asianet Suvarna News Asianet Suvarna News

ನರೇಂದ್ರ ಮೋದಿ ಆಶಯದಂತೆ ಸ್ವಾವಲಂಬಿ ಭಾರತ ನಿರ್ಮಿಸೋಣ: ಶಾಸಕ ಯಶ್ಪಾಲ್ ಸುವರ್ಣ

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಮೂಲಕ 17 ವೃತ್ತಿಗಳ ಕುಶಲಕರ್ಮಿಗಳಿಗೆ ಸ್ವ ಉದ್ಯೋಗ ನಡೆಸಲು ನೀಡುತ್ತಿರುವ ವಿಶೇಷ ಪ್ರೋತ್ಸಾಹವನ್ನು ಸದುಪಯೋಗಪಡಿಸಿ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಸ್ವಾವಲಂಬಿ ಭಾರತ ನಿರ್ಮಿಸಲು ಮುಂದಾಗೋಣ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.

Lets build a self reliant India as Narendra Modi wishes Says MLA Yashpal Suvarna gvd
Author
First Published Feb 29, 2024, 11:59 PM IST

ಉಡುಪಿ (ಫೆ.29): ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಮೂಲಕ 17 ವೃತ್ತಿಗಳ ಕುಶಲಕರ್ಮಿಗಳಿಗೆ ಸ್ವ ಉದ್ಯೋಗ ನಡೆಸಲು ನೀಡುತ್ತಿರುವ ವಿಶೇಷ ಪ್ರೋತ್ಸಾಹವನ್ನು ಸದುಪಯೋಗಪಡಿಸಿ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಸ್ವಾವಲಂಬಿ ಭಾರತ ನಿರ್ಮಿಸಲು ಮುಂದಾಗೋಣ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು. ಅವರು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ 45 ಫಲಾನುಭವಿಗಳ ಟೈಲರಿಂಗ್ ತರಬೇತಿ ಕಾರ್ಯಾಗಾರವನ್ನು ಮಣಿಪಾಲದಲ್ಲಿ ಉದ್ಘಾಟಿಸಿ ಮಾತನಾಡಿದರು.

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಮೂಲಕ ಸ್ವಉದ್ಯೋಗ ಆರಂಭಿಸಿ ಗ್ರಾಮೀಣ ಭಾಗದಲ್ಲಿ ಯುವಜನತೆಗೆ ಉದ್ಯೋಗ ಸೃಷ್ಟಿಸುವ ಜೊತೆಗೆ, ಇತರರಿಗೂ ಈ ಬಗ್ಗೆ ಮಾಹಿತಿ ನೀಡಿ ಸ್ವಾವಲಂಬಿ ಬದುಕಿಗೆ ಪ್ರೇರಣೆ ನೀಡಿ ಯೋಜನೆಯ ಯಶಸ್ಸಿಗೆ ಎಲ್ಲರೂ ಸಹಕರಿಸುವಂತೆ ತಿಳಿಸಿದರು. ಸಮಾರಂಭದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ನಾಗರಾಜ ವಿ. ನಾಯಕ, ಕೌಶಲ್ಯಾಭಿವೃದ್ಧಿ ಅಧಿಕಾರಿ ನಾಗರಾಜ್, ಪ್ರಧಾನಮಂತ್ರಿ ಕೌಶಲ್ಯಾಭಿವೃದ್ಧಿ ಕೇಂದ್ರದ ಮೆನೇಜರ್ ಮನೋಜ್ ಕುಮಾರ್, ಉದ್ಯಮಿ ವೆಂಕಟೇಶ್ ಶೇಟ್ ಉಪಸ್ಥಿತರಿದ್ದರು.

ಮೋದಿ ಗೆಲ್ಲಿಸಿ, ಭಾರತ ಉಳಿಸಿ: ಶ್ರೀರಾಮ ಸೇನೆಯಿಂದ ಅಭಿಯಾನ: ಉಡುಪಿ ಜಿಲ್ಲಾ ಶ್ರೀರಾಮಸೇನೆ ವತಿಯಿಂದ ಮಾರ್ಚ್ ಕೊನೆಯಲ್ಲಿ ಉಡುಪಿಯಲ್ಲಿ ನಡೆಯಲಿರುವ ಮೋದಿ ಗೆಲ್ಲಿಸಿ ಭಾರತ ಉಳಿಸಿ ಅಭಿಯಾನದ ಪೂರ್ವಭಾವಿ ಸಭೆಯು ಸೋಮವಾರ ಮಥುರಾ ಕಂಪರ್ಟ್ಸ್ ಸಭಾಂಗಣದಲ್ಲಿ ನಡೆಯಿತು. ಸಂಘಟನೆಯ ಜಿಲ್ಲಾಧ್ಯಕ್ಷ ಜಯರಾಂ ಅಂಬೆಕಲ್ಲು ಮಾತನಾಡಿ, ದೇಶ ಮೊದಲು ಎಂಬ ಸಂಘಟನೆಯ ಧ್ಯೇಯದಂತೆ ನಡೆಯುವ ಈ ಕಾರ್ಯಕ್ರಮದ ರೂಪು ರೇಷೆಯ ಬಗ್ಗೆ ಚರ್ಚಿಸಿ ಸಾಧು ಸಂತರು, ಮೋದಿ ಅಭಿಮಾನಿಗಳು, ವಿವಿಧ ಸಂಘಟನೆ, ಹಾಗೂ ಜನಪ್ರತಿನಿಧಿಗಳ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲಾಗುವುದೆಂದು ಸಭೆಗೆ ತಿಳಿಸಿದರು.

ಗ್ರಾಮದ ರೈತರಿಗೆ ಉತ್ತಮ ಚಿಕಿತ್ಸೆ ದೊರೆಯಬೇಕು: ಶಾಸಕ ಎಚ್‌.ಡಿ.ರೇವಣ್ಣ

ರಾಜ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ, ಈ ರಾ ವ್ಯಾಪಿ ಅಭಿಯಾನದ ವಿವರಗಳನ್ನು ನೀಡಿದರು. ಸಂಘಟನೆಯ ರಾಜ್ಯಾಧ್ಯಕ್ಷರಾಗಿ ಪ್ರಥಮ ಬಾರಿಗೆ ಉಡುಪಿಗೆ ಆಗಮಿಸಿದ ಅವರನ್ನು ಜಿಲ್ಲಾ ಶ್ರೀರಾಮಸೇನೆ ವತಿಯಿಂದ ಗೌರವಿಸಲಾಯಿತು. ಶ್ರೀ ರಾಮಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ ಶೆಟ್ಟಿ ಅವರು ಪ್ರಾಸ್ತಾವಿಕ ಮಾತನಾಡಿದರು. ಜಿಲ್ಲೆಯ ಎಲ್ಲ ಪದಾಧಿಕಾರಿಗಳು ಭಾಗವಹಿಸಿದ ಈ ಸಭೆಯನ್ನು ಜಿಲ್ಲಾ ಪ್ರದಾನ ಕಾರ್ಯದರ್ಶಿ ಸುಧರ್ಶನ್ ಪೂಜಾರಿ ಅವರು ನಿರೂಪಿಸಿದರು.

Follow Us:
Download App:
  • android
  • ios