Asianet Suvarna News Asianet Suvarna News

ಕಾಗಿನೆಲೆ ಶ್ರೀಗಳ ಭೇಟಿಯಾದ ಯದುವೀರ ಒಡೆಯರ್, ಬಾಲರಾಜು

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಸ್. ಬಾಲರಾಜು ಅವರು ಮೈಸೂರಿನ ಕಾಗಿನೆಲೆ ಪೀಠದ ಶ್ರೀ ಶಿವಾನಂದಪುರಿ ಸ್ವಾಮೀಜಿ ಅವರನ್ನು ಬುಧವಾರ ಭೇಟಿ ಮಾಡಿ ಆಶೀರ್ವಾದ ಪಡೆದರು.

 Yaduveera Wadiyar  Balaraju who received the blessings of Kaginele Sri  snr
Author
First Published Mar 21, 2024, 10:44 AM IST

 ಮೈಸೂರು :  ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಸ್. ಬಾಲರಾಜು ಅವರು ಮೈಸೂರಿನ ಕಾಗಿನೆಲೆ ಪೀಠದ ಶ್ರೀ ಶಿವಾನಂದಪುರಿ ಸ್ವಾಮೀಜಿ ಅವರನ್ನು ಬುಧವಾರ ಭೇಟಿ ಮಾಡಿ ಆಶೀರ್ವಾದ ಪಡೆದರು.

ಮಠಕ್ಕೆ ಆಗಮಿಸಿದ ಅಭ್ಯರ್ಥಿಗಳನ್ನು ಪೂರ್ಣಕುಂಭ ಸ್ವಾಗತ ಕೋರಲಾಯಿತು. ಮೊದಲು ಅಭ್ಯರ್ಥಿಗಳು ಆಶೀರ್ವಾದ ಪಡೆದರು. ಬಳಿಕ ಶ್ರೀಗಳು ಅಭ್ಯರ್ಥಿಗಳನ್ನು ಸನ್ಮಾನಿಸಿ ಶುಭ ಕೋರಿದರು.

ಈ ವೇಳೆ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ್, ಕೆ.ಆರ್. ಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ, ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ, ಮಾಜಿ ಉಪ ಮೇಯರ್ ಡಾ. ರೂಪ, ಮುಖಂಡರಾದ ಶಿವಕುಮಾರ್, ಜೋಗಿ ಮಂಜು, ರಘು, ಶಂಕರ್, ಡಾ. ವಸಂತಕುಮಾರ್ ಮೊದಲಾದವರು ಇದ್ದರು.

ನಾನು ಪಕ್ಷಕ್ಕೆ ದ್ರೋಹ ಮಾಡಲ್ಲ

ಮೈಸೂರು(ಮಾ.19): ನಾನು ಪಕ್ಷಕ್ಕೂ ದ್ರೋಹ ಮಾಡಲ್ಲ, ಪಕ್ಕದಲ್ಲಿ ರುವವರಿಗೂ (ಯದುವೀರ) ದ್ರೋಹ ಮಾಡಲ್ಲ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಸ್ಪಷ್ಟಪಡಿಸಿದರು. ಬಿಜೆಪಿ ಸೋಮವಾರ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿ, 2014ರಲ್ಲಿ ನನಗೆ ಯಾಕೆ ಟಿಕೆಟ್ ಕೊಟ್ಟರು ಅಂಥಾ ಹೈಕಮಾಂಡ್ ಹೇಳಿರಲಿಲ್ಲ. ನಾನು ಯಾಕೆ ಕೊಟ್ಟರು ಅಂಥ ಕೇಳಿರಲಿಲ್ಲ. ಈಗಲೂ ಅಷ್ಟೇ ಯಾಕೆ ತಪ್ಪಿಸಿ ದ್ದೀರಿ ಅಂತಾ ನಾನು ಕೇಳಿಯೂ ಇಲ್ಲ, ಅವರು ಹೇಳಿಯೂ ಇಲ್ಲ ಎಂದು ಹೇಳಿದರು.

ನನಗೆ ಅಚಾನಕ್ ಆಗಿ 2014 ರಲ್ಲಿಬಿಜೆಪಿ ಟಿಕೆಟ್ ಸಿಕ್ಕಿತು. 2024ರಲ್ಲಿ ಪಕ್ಷ ನನ್ನ ಬದಲು ಬೇರೆಯವರಿಗೆ ಟಿಕೆಟ್ ಕೊಟ್ಟಿದೆ. ಇದರಿಂದ ನನಗೆ ಯಾವುದೇ ಬೇಸರ ಇಲ್ಲ. ಪಕ್ಷ ನನ್ನ ತಾಯಿ ಇದ್ದ ಹಾಗೆ. ಪಕ್ಷದ ಅಭ್ಯರ್ಥಿ ಗೆಲು ವಿಗೆ ಶ್ರಮಿಸುತ್ತೇನೆ. ಯದುವೀರ ಅವರಿಗೆ ಟಿಕೆಟ್ ಸಿಕ್ಕ ಕೂಡಲೇ ಅವರಿಗೆ ಕರೆ ಮಾಡಿ, ನಾನು ನಿಮ್ಮ ಏಜೆಂಟ್ ಆಗಿ ಕೆಲಸ ಮಾಡುತ್ತೇನೆ ಎಂದಿದ್ದೇನೆ. ನಾನು ಪಕ್ಷದ ಪರವಾಗಿ ಕೆಲಸ ಮಾಡುತ್ತೇನೆ ಎಂದರು.

ಕರ್ನಾಟಕದಲ್ಲಿ ಟಿಕೆಟ್ ಕೈ ತಪ್ಪಿದವರ ಕೋಲಾಹಲ; ಮುನಿಸು ಕೈಬಿಟ್ಟ ಸಿಂಹ, ಸಿಡಿದೇಳುತ್ತಾರಾ ಈಶ್ವರಪ್ಪ!

ಯದುವೀರ್ ಅವರು ಅರ ಮನೆ ಉತ್ತರಾಧಿಕಾರಿಯಾಗಿರುವುದರಿಂದ ಮಹಾರಾಜರಾಗಿ ಕೆಲಸ ಮಾಡುತ್ತಾರಾ ಇಲ್ಲ ಜನಪ್ರತಿನಿಧಿಯಾಗಿ ಕೆಲಸ ಮಾಡುತ್ತಾರಾ ಎಂಬ ಪ್ರಶ್ನೆ ಎತ್ತಿದ್ದೆ ಅಷ್ಟೆ ಎಂದು ಸ್ಪಷ್ಟಪಡಿಸಿ ದರು. ಬಿಜೆಪಿ ಟಿಕೆಟ್ ಕೈ ತಪ್ಪಿದ ಮೇಲೆ ಕಾಂಗ್ರೆಸ್ ಪಕ್ಷದಿಂದ ಆಹ್ವಾನ ಬಂದಿದೆಯಾ ಎಂಬ ಪ್ರಶ್ನೆಗೆ, ಅವರು ಸ್ಪಷ್ಟವಾಗಿ ಉತ್ತರ ನೀಡಲು ನಿರಾಕರಿಸಿದರು.

Follow Us:
Download App:
  • android
  • ios