ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ 15 ವರ್ಷಗಳ ಬಾಂಡ್ ಬರೆಸಿಕೊಳ್ಳಲು ಒತ್ತಾಯಿಸಿ ನೌಕರರಿಗೆ ಕಿರುಕುಳ ನೀಡುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಕೆಲಸಕ್ಕೆ ಹಾಜರಾದರೂ ಕೆಲಸ ನೀಡದೆ, ಹೊರಗೆ ಕೂರಿಸಲಾಗುತ್ತಿದೆ ಎಂದು ನೊಂದ ಉದ್ಯೋಗಿಗಳು ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡಿದ್ದಾರೆ.
ಕರ್ನಾಟಕದಲ್ಲಿ ನಿರಂತರ ಮಳೆಯಿಂದಾಗಿ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳು ಭರ್ತಿಯಾಗುತ್ತಿವೆ. ಕೆಆರ್ಎಸ್, ಕಬಿನಿ, ಹಾರಂಗಿ ಸೇರಿದಂತೆ ಪ್ರಮುಖ ಜಲಾಶಯಗಳ ನೀರಿನ ಮಟ್ಟದಲ್ಲಿ ಏರಿಕೆ ಕಂಡುಬಂದಿದೆ. ಈ ವರದಿಯಲ್ಲಿ, ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ, ಒಳಹರಿವು ಮತ್ತು ಹೊರಹರಿವಿನ ಮಾಹಿತಿ.
ಕೊಡಗು ಜಿಲ್ಲೆಯಲ್ಲಿ ಒಂದೇ ವರ್ಷದಲ್ಲಿ 470 ಕ್ಕೂ ಹೆಚ್ಚು ಬಾಲಕಿಯರು ಗರ್ಭಿಣಿಯರಾಗಿದ್ದಾರೆ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಕಾಫಿ ತೋಟಗಳ ಲೈನ್ ಮನೆಗಳಲ್ಲಿ ವಾಸಿಸುವ ಕುಟುಂಬಗಳ ಬಾಲಕಿಯರೇ ಹೆಚ್ಚಿನ ಸಂಖ್ಯೆಯಲ್ಲಿ ಗರ್ಭಿಣಿಯರಾಗಿದ್ದು, ವ್ಯವಸ್ಥೆಯ ದುರ್ಬಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.
ಅರಣ್ಯ ಅಭಿವೃದ್ಧಿ ಮಾಡುತ್ತೇವೆ ಎನ್ನುವ ಹೆಸರಿನಲ್ಲಿ ಸಾವಿರಾರು ಜನರಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಯನ್ನೇ ಅರಣ್ಯ ಇಲಾಖೆ ನುಂಗುತ್ತಿದೆ. ಇಂತಹ ವಿಚಿತ್ರ ಘಟನೆ ಸಾಕ್ಷಿಯಾಗಿರುವುದು ಕೊಡಗು ಜಿಲ್ಲೆಯಲ್ಲಿ.
ಕೊಡಗು ಜಿಲ್ಲೆಯಲ್ಲಿ 2018 ರಿಂದ ನಿರಂತರವಾಗಿ ಮೂರು ನಾಲ್ಕು ವರ್ಷಗಳ ಕಾಲ ಭೂಕುಸಿತವಾಗಿದ್ದು ಗೊತ್ತೇ ಇದೆ. ಈ ವರ್ಷವೂ ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಲಿದೆ ಎಂಬ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ವರದಿ : ರವಿ.ಎಸ್ ಹಳ್ಳಿ ಏಷ್ಯಾನೆಟ್ ಸುವರ್ಣ ನ್ಯೂಸ್
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಗೊಂದಿಬಸವನಹಳ್ಳಿಯ ರೊಂಡೆಕೆರೆಯ ಏರಿ ಒಡೆದು ಹೋಗುವ ಸ್ಥಿತಿ ತಲುಪಿದೆ. 15 ಮೀಟರ್ ನಷ್ಟು ಉದ್ದಕ್ಕೆ ಏರಿ ಬಿರುಕು ಬಿಟ್ಟಿದ್ದು, ಕೆರೆ ತುಂಬಿದಂತೆ ಯಾವುದೇ ಕ್ಷಣದಲ್ಲಿ ಏರಿ ಒಡೆದು ಹೋಗುವ ಆತಂಕ ಎದುರಾಗಿದೆ.