ಲಾಸ್ಟ್ ಬೆಂಚ್ ಪದ್ಧತಿಗೆ ಕೋಕ್ ನೀಡುವ ಮೂಲಕ ಅರ್ಧ ಚಂದ್ರಾಕೃತಿಯಲ್ಲಿ ಬೆಂಚ್‌ಗಳನ್ನು ಅಳವಡಿಸಿ ಮಕ್ಕಳಿಗೆ ಪಾಠ ಮಾಡುವ ವಿನೂತನ ಪ್ರಯೋಗವನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿ ನಗರದ ಅನುದಾನಿತ ಮತ್ತು ತಾಲೂಕಿನ ಸರ್ಕಾರಿ ಶಾಲೆಯಲ್ಲಿ ಸೋಮವಾರ ಆರಂಭಿಸಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ನವೆಂಬರ್ ಪೂರ್ವದಲ್ಲಿ ಪತನಗೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದರು.
ಸಿದ್ದರಾಮಯ್ಯ ಅವರಿಗೆ ಫೋಟೋ ಕೊಟ್ಟು ಜೈಕಾರ ಹಾಕಿಸಿಕೊಳ್ಳುವ ಸ್ಥಿತಿ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.
ಬಿಜೆಪಿ ನಾಯಕರು ಸಿಎಂ ಬದಲಾವಣೆ ಸೇರಿದಂತೆ ರಾಜ್ಯ ಸರ್ಕಾರದ ಕುರಿತು ಮಾತನಾಡುವುದನ್ನು ಬಿಡಲಿ ಎಂದು ಸಚಿವ ಸಂತೋಷ್ ಲಾಡ್ ಹೇಳಿದರು.
ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಕೇಂದ್ರದಲ್ಲಿರುವ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಚಂದ್ರಬಾಬು ನಾಯ್ಡು ಫ್ಲಾಗ್ ಹಾರಿಸಿದರೆ ಮೋದಿ ಸರ್ಕಾರ ಉರುಳುತ್ತದೆ ಎಂದು ಲಾಡ್ ಹೇಳಿದ್ದಾರೆ. ಬಿಜೆಪಿ 75 ವರ್ಷ ಮೇಲ್ಪಟ್ಟವರನ್ನು ರಾಜಕೀಯದಿಂದ ನಿವೃತ್ತಿಗೊಳಿಸಬೇಕೆಂದು ಹೇಳಿದ್ದಾರೆ .
ಎಸ್‌ಎಸ್‌ಎಲ್‌ಸಿಯಲ್ಲಿ ಶೇಕಡ 100 ಫಲಿತಾಂಶಕ್ಕಾಗಿ ದಡ್ಡ ಮಕ್ಕಳಿಗೆ ಟೀಸಿ ಎನ್ನುವ ಶೀರ್ಷಿಕೆಯಡಿ ಕನ್ನಡಪ್ರಭ ಪ್ರಕಟಿಸಿದ ಸರಣಿ ವರದಿ ಆಧರಿಸಿ ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶಕ್ಕಾಗಿ ಕಳೆದ 10 ವರ್ಷಗಳಿಂದ ಮೊರಾರ್ಜಿ ಶಾಲೆಗಳು ದಡ್ಡ ಮಕ್ಕಳನ್ನು ಹೊರಹಾಕುತ್ತಿವೆ. 9ನೇ ತರಗತಿ ಮುಗಿದ ನಂತರ ವಿದ್ಯಾರ್ಥಿಗಳನ್ನು ಶಾಲೆಯಿಂದ ಬಲವಂತವಾಗಿ ಹೊರಗೆ ಕಳುಹಿಸಲಾಗುತ್ತಿದೆ.