ಪ್ರಧಾನಿ ಮೋದಿ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದಲ್ಲಿ ಮಂಡ್ಯದ ವ್ಯಕ್ತಿಯನ್ನು ಬಂಧಿಸಲಾಗಿದೆ. ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಮೋದಿ ಶೂ ಧರಿಸುವಂತೆ ಎಡಿಟ್ ಮಾಡಿದ ಫೋಟೊವನ್ನು ಶೇರ್ ಮಾಡಿದ್ದ ಆರೋಪ. ಇದೇ ರೀತಿಯ ಘಟನೆ ಕೋಲಾರದಲ್ಲೂ ನಡೆದಿದ್ದು, ಸುಳ್ಳು ಸುದ್ದಿ ಹಬ್ಬಿಸಿದ ಆರೋಪದಲ್ಲಿ ವಿಚಾರಣೆ ನಡೆಯುತ್ತಿದೆ.