Asianet Suvarna News Asianet Suvarna News

ಲೋಕ ಕದನ 2024: ಬಿಜೆಪಿಯ ಎಲ್ಲಾ 25 ಅಭ್ಯರ್ಥಿಗಳ ಹೆಸರು ಪ್ರಕಟ

ಐವರು ಹೊಸಬರು ಮೊದಲ ಬಾರಿಗೆ ಚುನಾವಣಾ ರಾಜಕಾರಣ ಪ್ರವೇಶಿಸಿದ್ದಾರೆ. ಬೆಂಗಳೂರು ಗ್ರಾಮಾಂ ತರ ಕ್ಷೇತ್ರದಿಂದ ಡಾ.ಸಿ.ಎನ್. ಮಂಜುನಾಥ್, ಮೈಸೂರಿನಿಂದ ಯದುವೀರ್‌ ಒಡೆಯ‌ರ್, ಕೊಪ್ಪಳದಿಂದ ಡಾ.ಕೆ.ಬಸವರಾಜ, ದಕ್ಷಿಣ ಕನ್ನಡದಿಂದ ಕ್ಯಾ.ಬ್ರಿಜೇಶ್ ಹಾಗೂ ದಾವಣಗೆರೆಯಿಂದ ಗಾಯತ್ರಿ ಸಿದ್ದೇಶ್ವರ್ ಅವರು ಮೊದಲ ಬಾರಿಗೆ ಚುನಾವಣೆ ಎದುರಿಸುತ್ತಿದ್ದಾರೆ.

All 25 BJP Candidates Name Announced in Karnataka of Lok Sabha Election 2024 grg
Author
First Published Mar 28, 2024, 9:11 AM IST

ಬೆಂಗಳೂರು(ಮಾ.28):  ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಮೂರನ್ನು ಮಿತ್ರ ಪಕ್ಷ ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವ ಬಿಜೆಪಿಯು ತನ್ನ ಪಾಲಿನ 25 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಈ ಪೈಕಿ ಐವರು ಹೊಸಬರು ಮೊದಲ ಬಾರಿಗೆ ಚುನಾವಣಾ ರಾಜಕಾರಣ ಪ್ರವೇಶಿಸಿದ್ದಾರೆ. ಬೆಂಗಳೂರು ಗ್ರಾಮಾಂ ತರ ಕ್ಷೇತ್ರದಿಂದ ಡಾ.ಸಿ.ಎನ್. ಮಂಜುನಾಥ್, ಮೈಸೂರಿನಿಂದ ಯದುವೀರ್‌ ಒಡೆಯ‌ರ್, ಕೊಪ್ಪಳದಿಂದ ಡಾ.ಕೆ.ಬಸವರಾಜ, ದಕ್ಷಿಣ ಕನ್ನಡದಿಂದ ಕ್ಯಾ.ಬ್ರಿಜೇಶ್ ಹಾಗೂ ದಾವಣಗೆರೆಯಿಂದ ಗಾಯತ್ರಿ ಸಿದ್ದೇಶ್ವರ್ ಅವರು ಮೊದಲ ಬಾರಿಗೆ ಚುನಾವಣೆ ಎದುರಿಸುತ್ತಿದ್ದಾರೆ.

ಅಭ್ಯರ್ಥಿಗಳ ಪೈಕಿ 11 ಮಂದಿ ಹಾಲಿ ಸಂಸದರಿದ್ದಾರೆ. ಚಿಕ್ಕೋಡಿಯ ಅಣ್ಣಾ ಸಾಹೇಬ್ ಜೊಲ್ಲೆ, ಬಾಗಲಕೋಟೆಯ ಪಿ.ಸಿ.ಗದ್ದಿಗೌಡರ್, ವಿಜಯಪುರದ ರಮೇಶ್ ಜಿಗಜಿಣಗಿ, ಕಲಬುರಗಿಯ ಡಾ.ಉಮೇಶ್ ಜಾಧವ್, ಬೀದರ್‌ನ ಭಗವಂತ ಖೂಬಾ, ಧಾರವಾಡದ ಪ್ರಹ್ಲಾದ್ ಜೋಶಿ, ಶಿವಮೊಗ್ಗದ ಬಿ.ವೈ.ರಾಘವೇಂದ್ರ, ಬೆಂಗಳೂರು ಉತ್ತರ ಶೋಭಾ ಕರಂದ್ಲಾಜೆ, ಬೆಂಗಳೂರು ಕೇಂದ್ರದ ಪಿ.ಸಿ.ಮೋಹನ್, ಬೆಂಗಳೂರು ದಕ್ಷಿಣದ ತೇಜಸ್ವಿ ಸೂರ್ಯ, ರಾಯಚೂರಿನ ರಾಜಾ ಅಮರೇಶ್ ನಾಯಕ್. 

ಲೋಕಸಭೆ ಚುನಾವಣೆ 2024: ಪ್ರಹ್ಲಾದ ಜೋಶಿ ಬದಲಾವಣೆಗೆ ಲಿಂಗಾಯತ ಮಠಾಧೀಶರ ಪಟ್ಟು

ಇನ್ನುಳಿದ 9 ಮಂದಿ ಪೈಕಿ ಇಬ್ಬರು ಮಾಜಿ ಮುಖ್ಯಮಂತ್ರಿಗಳು, ಒಬ್ಬರು ಮಾಜಿ ಉಪಮುಖ್ಯಮಂತ್ರಿ, ಐವರು ರಾಜ್ಯದ ಮಾಜಿ ಸಚಿವರು ಹಾಗೂ ಒಬ್ಬ ಮಾಜಿ ಶಾಸಕ ಸೇರಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ಬೆಳಗಾವಿಯಿಂದ ಮತ್ತು ಬಸವರಾಜ ಬೊಮ್ಮಾಯಿ ಅವರು ಹಾವೇರಿಯಿಂದ ಕಣಕ್ಕಿಳಿದಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಚಿತ್ರದುರ್ಗದ ಅಭ್ಯರ್ಥಿಯಾಗಿದ್ದಾರೆ. ಮಾಜಿ ಸಚಿವರಾದ ವಿ.ಸೋಮಣ್ಣ ತುಮಕೂರಿನಿಂದ, ಬಿ.ಶ್ರೀರಾಮುಲುಬಳ್ಳಾರಿಯಿಂದ, ಕೋಟ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂ ರಿನಿಂದ, ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರದಿಂದ ಹಾಗೂ ವಿಶ್ವೇಶ್ವರ ಹೆಗಡೆ ಕಾಗೇರಿ ಉತ್ತರ ಕನ್ನಡದಿಂದ ಕಣಕ್ಕಿಳಿದಿದ್ದಾರೆ. ಮಾಜಿ ಶಾಸಕ ಎಸ್.ಬಾಲರಾಜು ಚಾಮರಾಜನಗರದಿಂದ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. 

Follow Us:
Download App:
  • android
  • ios