Asianet Suvarna News Asianet Suvarna News

ಸಂವಿಧಾನ ಆಶಯಗಳಿಗೆ ತಕ್ಕಂತೆ ಕಾಂಗ್ರೆಸ್‌ ನಡೆಯುತ್ತಿದೆ: ಸಿದ್ದರಾಮಯ್ಯ

ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಭರವಸೆಗಳನ್ನು ಈಡೇರಿಸಿದ್ದೇವೆ. ಎಂಟೇ ತಿಂಗಳಲ್ಲಿ ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ. 36000 ಕೋಟಿ ರು.ಗಳನ್ನು ವ್ಯಯ ಮಾಡಿ ಜನರ ಖಾತೆಗೆ ನೇರವಾಗಿ ಜಮೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

Congress is running according to the wishes of the constitution Says Siddaramaiah gvd
Author
First Published Mar 13, 2024, 12:40 PM IST

ಚಾಮರಾಜನಗರ (ಮಾ.13): ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಭರವಸೆಗಳನ್ನು ಈಡೇರಿಸಿದ್ದೇವೆ. ಎಂಟೇ ತಿಂಗಳಲ್ಲಿ ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ. 36000 ಕೋಟಿ ರು.ಗಳನ್ನು ವ್ಯಯ ಮಾಡಿ ಜನರ ಖಾತೆಗೆ ನೇರವಾಗಿ ಜಮೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಚಾಮರಾಜನಗರದ ಡಾ. ಬಿ.ಆರ್‌. ಅಂಬೇಡ್ಕರ್‌ ಕ್ರೀಡಾಂಗಣದಲ್ಲಿ ಗ್ಯಾರಂಟಿ ಫಲಾನುಭವಿಗಳ ಸಮಾವೇಶವನ್ನು ಮಂಗಳವಾರ ಉದ್ಘಾಟಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು. ಅಧಿಕಾರ ಮತ್ತು ಸಂಪತ್ತು ಸಮಾಜದ ಎಲ್ಲರಲ್ಲೂ ಹಂಚಿಕೆಯಾಗಬೇಕು ಎನ್ನುವುದು ಸಂವಿಧಾನದ ಆಶಯ. ಸಂವಿಧಾನದ ಆಶಯಗಳಿಗೆ ತಕ್ಕಂತೆ ಕಾಂಗ್ರೆಸ್ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿದೆ. ಗ್ಯಾರಂಟಿಗಳನ್ನು ಕೊಟ್ಟಿದೆ. ಕೊಟ್ಟ ಮಾತಿನಂತೆ ಭರವಸೆಗಳನ್ನು ಈಡೇರಿಸಿದ ಏಕೈಕ ಸರ್ಕಾರ ನಮ್ಮದು ಎಂದರು.

ಅಸಮಾನತೆಗೆ ಮೂಲಕಾರಣ ದೇಶದಲ್ಲಿನ ಜಾತಿ ವ್ಯವಸ್ಥೆ: ಸಿದ್ದರಾಮಯ್ಯ

ನಮ್ಮ ಐದು ಗ್ಯಾರಂಟಿಗಳಿಗೆ ನಾಲ್ಕೂವರೆ ಕೋಟಿ ಜನರು ಫಲಾನುಭವಿಗಳಾಗಿದ್ದಾರೆ. ರಾಜ್ಯದ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 45 ಸಾವಿರದಿಂದ 50 ಸಾವಿರ ರು. ಕೊಡುತ್ತಿದ್ದೇವೆ. ಇದನ್ನು ಬಿಜೆಪಿ ಯಾಕೆ ವಿರೋಧಿಸುತ್ತಿದೆ? ನಾಡಿನ ಜನರಿಗೆ ಸರ್ಕಾರದ ಸವಲತ್ತುಗಳು ಸಿಗಬಾರದಾ? ಎಂದು ಪ್ರಶ್ನಿಸಿದರು. ಒಂದು ಕೋಟಿ ಇಪ್ಪತ್ತು ಲಕ್ಷ ಕುಟುಂಬಗಳ, ನಾಲ್ಕೂವರೆ ಕೋಟಿ ಜನಕ್ಕೆ ಈ ವರ್ಷ 36000 ಕೋಟಿ ಹಣ ಕೊಟ್ಟಿದ್ದೇವೆ. ಮುಂದಿನ ವರ್ಷಕ್ಕೆ 59000 ಕೋಟಿ ರೂಪಾಯಿಗಳನ್ನು ಗ್ಯಾರಂಟಿಗಳಿಗೆ ಕೊಟ್ಟಿದ್ದೇವೆ. ರಾಜ್ಯದ ಜನರ ಅಭಿವೃದ್ಧಿ ಕಾರ್ಯಗಳಿಗೆ ಒಂದು ಲಕ್ಷ ಇಪ್ಪತ್ತು ಕೋಟಿ ರೂಪಾಯಿಗಳನ್ನು ಬಜೆಟ್ ನಲ್ಲಿ ಘೋಷಿಸಿದ್ದೇವೆ ಎಂದರು.

ಮನುವಾದ ನಮ್ಮೆಲ್ಲರ ಶತ್ರು: ಸಂವಿಧಾನ ಬದಲಾಯಿಸುತ್ತೇವೆ ಎನ್ನುತ್ತಿರುವ ಮನುವಾದಿಗಳು ಮತ್ತು ಮನುವಾದ ನಮ್ಮ ನಿಮ್ಮೆಲ್ಲರ ಶತ್ರು. ಇವರಿಗೆ ಸಂವಿಧಾನ ಬದಲಾಯಿಸಲು ಅವಕಾಶ ಆಗದಂತೆ ಬಿಜೆಪಿಯನ್ನು ಹೀನಾಯವಾಗಿ ಸೋಲಿಸಿ. ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ನನಗೆ ಶಕ್ತಿ ತುಂಬಿ ಎಂದು ವಿನಂತಿಸಿದರು. ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎ.ಆರ್‌. ಕೃಷ್ಣಮೂರ್ತಿ, ಎಚ್‌.ಎಂ. ಗಣೇಶ್‌ ಪ್ರಸಾದ್‌, ಎಂ.ಆರ್‌. ಮಂಜುನಾಥ್‌, ಮರಿತಿಬ್ಬೇಗೌಡ, ಡಾ. ತಿಮ್ಮಯ್ಯ, ಅನಿಲ್ ಚಿಕ್ಕಮಾದು, ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ.

ಬಿಜೆಪಿ ಅಭ್ಯರ್ಥಿ ಗೆದ್ದರೆ, ಪ್ರಧಾನಿ ನರೇಂದ್ರ ಮೋದಿಗೆ ಶಕ್ತಿ: ಸಂಸದ ವೈ.ದೇವೇಂದ್ರಪ್ಪ

ಮೂಡಾ ಅಧ್ಯಕ್ಷ ಮರಿಗೌಡ, ಗ್ಯಾರಂಟಿ ಯೋಜನೆ ಸಮಿತಿ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ಮಾಜಿ ಸಚಿವ ಸೋಮಶೇಖರ್‌, ಮಾಜಿ ಸಂಸದ, ಕಾಗಲವಾಡಿ ಶಿವಣ್ಣ, ಮಾಜಿ ಶಾಸಕರಾದ ಆರ್‌. ನರೇಂದ್ರ, ಎಸ್‌.ಜಯಣ್ಣ, ಜಿ.ಎನ್‌. ನಂಜುಂಡಸ್ವಾಮಿ, ಕಾಂಗ್ರೆಸ್‌ ಮುಖಂಡ ಸುನಿಲ್‌ ಬೋಸ್‌, ನಗರಸಭಾ ಸದಸ್ಯ ಚಂದ್ರಶೇಖರ್‌, ಪ್ರಾದೇಶಿಕ ಆಯುಕ್ತ ಬಿ.ಸಿ. ಪ್ರಕಾಶ್‌, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಂಜುನಾಥ್‌ ಪ್ರಸಾದ್‌, ಡೀಸಿ ಶಿಲ್ಪಾನಾಗ್, ಜಿಪಂ ಸಿಇಒ ಆನಂದ್‌ ಪ್ರಕಾಶ್‌ ಮೀನಾ, ಎಸ್ಪಿ ಪದ್ಮಿನಿ ಸಾಹು, ಎಡಿಸಿ ಗೀತಾ ಹುಡೇದ, ಉಪ ಕಾರ್ಯದರ್ಶಿ ಲಕ್ಷ್ಮಿ , ಎಸಿ ಎಂ. ಶಿವಮೂರ್ತಿ, ತಹಸೀಲ್ದಾರ್‌ ಬಸವರಾಜು, ನಗರಸಭಾ ಆಯುಕ್ತ ರಾಮದಾಸ್‌ ಮತ್ತಿತರರು ಹಾಜರಿದ್ದರು.

Follow Us:
Download App:
  • android
  • ios