Asianet Suvarna News Asianet Suvarna News

ಕೇಂದ್ರ ಸರ್ಕಾರದ ತಪ್ಪು ನಿರ್ಧಾರದಿಂದ ದೇಶದಲ್ಲಿ ಆರ್ಥಿಕ ಸಂಕಷ್ಟ: ಸಚಿವ ಕೆ.ಜೆ.ಜಾರ್ಜ್‌

ಕೇಂದ್ರ ಸರ್ಕಾರದ ತಪ್ಪು ನಿರ್ಧಾರದಿಂದ ದೇಶದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿದೆ ಎಂದು ರಾಜ್ಯ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಆರೋಪಿಸಿದರು. 

Economic distress in the country due to the wrong decision of central govt Says Minister KJ George gvd
Author
First Published Feb 11, 2024, 5:23 AM IST

ಚಿಕ್ಕಮಗಳೂರು (ಫೆ.11): ಕೇಂದ್ರ ಸರ್ಕಾರದ ತಪ್ಪು ನಿರ್ಧಾರದಿಂದ ದೇಶದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿದೆ ಎಂದು ರಾಜ್ಯ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌ ಆರೋಪಿಸಿದರು. ನಗರದಲ್ಲಿ ಶನಿವಾರ ಏರ್ಪಡಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿ, ಕೇಂದ್ರ ಸರ್ಕಾರ ನೋಟುಗಳನ್ನು ಬದಲಾವಣೆ ಮಾಡಿತು. ಆದರೆ, ಇದರ ಉದ್ದೇಶ ಈಡೇರಲಿಲ್ಲ, ಜನರಿಗೆ ಆರ್ಥಿಕವಾಗಿ ತೊಂದರೆಯಾಯಿತು. 

ಕೋವಿಡ್‌ ಸಮಯದಲ್ಲಿ ಜನರು ಉದ್ಯೋಗ ಕಳೆದುಕೊಂಡು ಆರ್ಥಿಕ ಸಂಕಷ್ಟ ಎದುರಿಸುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಆರೋಪಿಸಿದರು. ಈ ಮಧ್ಯೆ, ಸಮಾವೇಶದ ವೇದಿಕೆಯಲ್ಲಿ ಗ್ಯಾರಂಟಿ ಯೋಜನೆಯ ಇಬ್ಬರು ಫಲಾನುಭವಿ ಮಹಿಳೆಯರು ತಮ್ಮ ಕೈಯ್ಯಾರೆ ಮನೆಯಲ್ಲಿ ಮಾಡಿದ್ದ ಸಿಹಿ ತಂದು ಸಚಿವ ಕೆ.ಜೆ. ಜಾರ್ಜ್‌ಗೆ ತಿನಿಸಿದರು. ತರೀಕೆರೆಯಿಂದ ಬಂದಿದ್ದ ಇನ್ನೋರ್ವ ಮಹಿಳೆ ತಮ್ಮ ಕೈಯ್ಯಾರೆ ಹೆಣೆದ ಶಾಲನ್ನು ಸಚಿವರಿಗೆ ನೀಡಿ ಅಭಿನಂದನೆ ಸಲ್ಲಿಸಿದರು.

ಮನಮೋಹನ್ ಸಿಂಗ್ ಕಾಲದಲ್ಲಿ ಎಷ್ಟು ತೆರಿಗೆ ಹಣ ಬಂದಿದೆ: ಸಿಎಂ ಸಿದ್ದುಗೆ ಪ್ರಶ್ನೆ ಮಾಡಿದ ಸಿ.ಟಿ.ರವಿ!

ಭೂ ದಾಖಲೆ ಗಣಕೀಕರಣ ರೈತರಿಗೆ ಅನುಕೂಲ: ಭೂ ದಾಖಲೆ ಗಣಕೀಕರಣ ಮಾಡುವುದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಹೇಳಿದರು. ತಾಲೂಕು ಕಚೇರಿಯಲ್ಲಿ ಭೂ ದಾಖಲೆಗಳ ಗಣಕೀಕರಣಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದ ಅವರು, ಹಳೆಯ ಭೂ ದಾಖಲೆಗಳನ್ನು ಗಣಕೀಕರಣ ಮಾಡಿರುವುದರಿಂದ ರೈತರ ದಾಖಲೆ ಕಳೆದು ಹೋಗದೆ ಶಾಶ್ವತವಾಗಿ ಉಳಿಯಲಿದೆ ಎಂದರು. 

ಶಾಸಕ ಎಚ್‌.ಡಿ. ತಮ್ಮಯ್ಯ ಮಾತನಾಡಿ, ಜಿಲ್ಲಾಡಳಿತದಿಂದ ಭೂ ಸುರಕ್ಷಾ ಯೋಜನೆಯನ್ನು ಸಚಿವರು ಉದ್ಘಾಟಿಸಿದ್ದು ಇದರ ಸದುಪಯೋಗವನ್ನು ಜಿಲ್ಲೆಯ ಜನತೆ ಪಡೆದು ಕೊಳ್ಳಬೇಕೆಂದು ವಿನಂತಿಸಿದರು. ತಮ್ಮ ಅಗತ್ಯ ದಾಖಲೆಗಳನ್ನು ಕೋರಿ ಅರ್ಜಿ ಸಲ್ಲಿಸುವ ರೈತರಿಗೆ ಭೂ ದಾಖಲೆಗಳನ್ನು ಒದಗಿಸಲು ಇದು ಪೂರಕವಾಗಿದೆ. ಜೊತೆಗೆ ಸಂಬಂಧಪಟ್ಟ ಅರ್ಜಿದಾರರಿಗೆ ದಾಖಲೆ ಒದಗಿಸಿದ ಸಂಪೂರ್ಣ ಮಾಹಿತಿ ರವಾನೆಯಾಗಲಿದೆ ಎಂದು ಹೇಳಿದರು.

ಸಂಸದ ಡಿ.ಕೆ.ಸುರೇಶ್ ವಿರುದ್ದ ಬಿಜೆಪಿ ಪ್ರತಿಭಟನೆ: ಭಾವಚಿತ್ರಕ್ಕೆ ಬೆಂಕಿ ಹಾಕಿ ಆಕ್ರೋಶ!

ಸಾರ್ವಜನಿಕರಿಗೆ ಜನಸ್ನೇಹಿ ಆಡಳಿತ ವ್ಯವಸ್ಥೆ ಕಲ್ಪಿಸಬೇಕೆಂಬ ದೃಷ್ಠಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರ ಮೂಲಕ ಭೂ ದಾಖಲೆಗಳ ಡಿಜಿಟಲ್‌ ಕಾರ್ಯಕ್ಕೆ ಮುಂದಾಗಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಬಿ. ಗೋಪಾಲಕೃಷ್ಣ, ಉಪ ವಿಭಾಗಾಧಿಕಾರಿ ದಲ್ಜಿತ್‌ಕುಮಾರ್, ತಹಶೀಲ್ದಾರ್ ಡಾ. ಸುಮಂತ್ ಉಪಸ್ಥಿತರಿದ್ದರು.

Follow Us:
Download App:
  • android
  • ios