Asianet Suvarna News Asianet Suvarna News

ಹೈಕಮಾಂಡ್‌ ಹೇಳಿದರೆ ಸಿಎಂ ಕುರ್ಚಿ ಬಿಡುವೆ: ಸಿದ್ದರಾಮಯ್ಯ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಆದ ನಂತರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಕುರ್ಚಿ ಬಿಟ್ಟುಕೊಡಬೇಕಾಗುತ್ತದೆ’ ಎಂಬ ಊಹಾಪೋಹಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Karnataka CM Siddaramaiah Talks Over Congress High Command grg
Author
First Published Apr 13, 2024, 8:14 AM IST

ಮೈಸೂರು(ಏ.13):  ‘ನಾನು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೇ ಬೇಡವೇ ಎಂಬುದು ಪಕ್ಷದ ಹೈಕಮಾಂಡ್ ಏನು ನಿರ್ಧರಿಸುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶುಕ್ರವಾರ ಮೈಸೂರಿನಲ್ಲಿ ಪಿಟಿಐ ವಿಡಿಯೋಸ್‌ ಸುದ್ದಿಸಂಸ್ಥೆ ಜತೆ ಮಾತನಾಡಿದ ಅವರು, ‘ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಆದ ನಂತರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಕುರ್ಚಿ ಬಿಟ್ಟುಕೊಡಬೇಕಾಗುತ್ತದೆ’ ಎಂಬ ಊಹಾಪೋಹಗಳಿಗೆ ಪ್ರತಿಕ್ರಿಯಿಸಿದರು.‘ಅದು (ಸಿಎಂ ಆಗಿ ಮುಂದುವರಿಯುವುದು) ಪಕ್ಷದ ಹೈಕಮಾಂಡ್ ಏನು ನಿರ್ಧರಿಸುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ಹೈಕಮಾಂಡ್ ತೀರ್ಮಾನಿಸಿದರೆ ಮುಂದುವರಿಯುತ್ತೇನೆ. ಇಲ್ಲದಿದ್ದರೆ ಹೈಕಮಾಂಡ್ ನಿರ್ಧಾರದಂತೆ ನಡೆಯುತ್ತೇನೆ’ ಎಂದು ಸಿದ್ದರಾಮಯ್ಯ ಹೇಳಿದರು. ಈ ಮೂಲಕ ಹೈಕಮಾಂಡ್‌ ಹೇಳಿದರೆ ಸಿಎಂ ಗಾದಿ ಬಿಟ್ಟುಕೊಡುವ ಸುಳಿವು ನೀಡಿದರು.

ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದಲ್ಲಿ ಸಿದ್ದರಾಮಯ್ಯ ತಂತ್ರ, ಕುತಂತ್ರ‌ ನಡೆಯಲ್ಲ: ಬೊಮ್ಮಾಯಿ

ಅತಂತ್ರ ಲೋಕಸಭೆ?

ಇನ್ನು ಲೋಕಸಭೆ ಚುನಾವಣೆ ಬಗ್ಗೆ ಉತ್ತರಿಸಿದ ಅವರು, ‘ಚುನಾವಣೆಯಲ್ಲಿ ಇಂಡಿಯಾ ಕೂಟಕ್ಕೆ ಸಂಪೂರ್ಣ ಬಹುಮತ ಸಿಗದೇ ಇರಬಹುದು. ಆದರೆ ಕೇಂದ್ರದಲ್ಲಿ ಸರ್ಕಾರ ರಚಿಸಲು ಎನ್‌ಡಿಎಗೂ ಸಾಕಷ್ಟು ಸ್ಥಾನಗಳು ಸಿಗುವುದಿಲ್ಲ’ ಎಂದರು. ಈ ಮೂಲಕ ಅತಂತ್ರ ಲೋಕಸಭೆಯ ಸುಳಿವು ನೀಡಿದರು.

ಇನ್ನು ಕರ್ನಾಟಕದಲ್ಲಿನ ಕಾಂಗ್ರೆಸ್‌ನ ಲೋಕಸಭಾ ಚುನಾವಣಾ ಭವಿಷ್ಯದ ಬಗ್ಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ತಮ್ಮ ಪಕ್ಷ 15-20 ಸ್ಥಾನಗಳನ್ನು ಗೆಲ್ಲುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದೇ ವೇಳೆ, ‘4 ವರ್ಷಗಳ ನಂತರ ನಾನು ಚುನಾವಣಾ ರಾಜಕೀಯದಲ್ಲಿ ಉಳಿಯುವುದಿಲ್ಲ. ಆದರೆ ಸಕ್ರಿಯ ರಾಜಕಾರಣದಲ್ಲಿ ಉಳಿಯುತ್ತೇನೆ’ ಎಂದು ಪುನರುಚ್ಚರಿಸಿದರು.

Follow Us:
Download App:
  • android
  • ios