ಯಾರು ಏನೇ ಹೇಳಲಿ, ದೇಶದಲ್ಲಿ ಬಿಜೆಪಿ 400ಕ್ಕೂ ಅಧಿಕ ಸ್ಥಾನ ಗೆಲ್ಲುತ್ತೆ: ಬೊಮ್ಮಾಯಿ

ಕಾಂಗೆಸ್ಸಿನ ಸುಳ್ಳು ಭರವಸೆಗಳಿಗೆ ಮನಸೊಲದೆ ಕಳೆದ ೧೦ ವರ್ಷಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಉತ್ತಮ ಯೋಜನೆಗಳನ್ನು ಹಾಗೂ ಸಾಧನೆಗಳನ್ನು ಮನಗಂಡು ಜನರು ಬಿಜೆಪಿಗೆ ಮತ ಚಲಾಯಿಸಿದ್ದಾರೆ. ಬಿಜೆಪಿ ಈ ಬಾರಿ ದೇಶದಲ್ಲಿ ೪೦೦ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

Lok sabha election 2024 Basavaraj bommai reacts bjp will come to power again india rav

ಹಾವೇರಿ (ಮೇ.16):  ಕಾಂಗೆಸ್ಸಿನ ಸುಳ್ಳು ಭರವಸೆಗಳಿಗೆ ಮನಸೊಲದೆ ಕಳೆದ ೧೦ ವರ್ಷಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಉತ್ತಮ ಯೋಜನೆಗಳನ್ನು ಹಾಗೂ ಸಾಧನೆಗಳನ್ನು ಮನಗಂಡು ಜನರು ಬಿಜೆಪಿಗೆ ಮತ ಚಲಾಯಿಸಿದ್ದಾರೆ. ಬಿಜೆಪಿ ಈ ಬಾರಿ ದೇಶದಲ್ಲಿ ೪೦೦ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಏರ್ಪಡಿಸಿದ್ದ ಜಿಲ್ಲಾ ಅವಲೋಕನ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಿನ ಭಯ ಪ್ರಾರಂಭವಾಗಿದೆ. ರಾಜ್ಯದ ಕಾಂಗ್ರೆಸ್ ಪಕ್ಷದ ನಾಯಕರಿಗೆ ನರೇಂದ್ರ ಮೋದಿಯವರನ್ನು ಟೀಕಿಸುವುದನ್ನು ಬಿಟ್ಟರೆ ಬೇರೆ ಕೆಲಸಗಳಿಲ್ಲ. ಈಗಾಗಲೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಹಾಡಹಗಲೆ ಮಹಿಳೆಯರ ಹತ್ಯೆಗಳು ನಡೆಯುತ್ತಿವೆ. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದರು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯವನ್ನು ಸುಲಿಗೆ ಮಾಡುತಿದೆ ಎಂದರು.

ಮೊದಲ ಬಾರಿಗೆ ಸಿಎಎ ಅಡಿ 14 ವಿದೇಶಿಗರಿಗೆ ಭಾರತ ಪೌರತ್ವ!

ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ, ಲೋಕಸಭಾ ಕ್ಷೇತ್ರದ ಸಂಚಾಲಕ ಮಂಜುನಾಥ ಓಲೇಕಾರ, ಬ್ಯಾಡಗಿ ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಹಾವೇರಿ ವಿಧಾನಸಭಾ ಕ್ಷೇತ್ರದ ಮುಖಂಡ ಗವಿಸಿದ್ದಪ್ಪ ದ್ಯಾಮಣ್ಣವರ ಮಾತನಾಡಿದರು.

ಸಭೆಯಲ್ಲಿ ಮಾಜಿ ಮುಖ್ಯ ಸಚೇತಕ ಡಿ.ಎಂ. ಸಾಲಿ, ಜಿಲ್ಲಾ ಸಂಘಟನ ಪ್ರಭಾರಿ ಎನ್.ಎಲ್. ಕಲ್ಲೇಶ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ. ಶೋಭಾ ನಿಸ್ಸಿಮಗೌಡ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ನಂಜುಡೇಶ ಕಳ್ಳೆರ, ಡಾ. ಸಂತೋಷ ಆಲದಕಟ್ಟಿ, ಮಂಜುನಾಥ ಗಾಣಿಗೇರ ಹಾಗೂ ಜಿಲ್ಲೆಯ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಪದಾಧಿಕಾರಿಗಳು, ವಿವಿಧ ಮಂಡಲಗಳ ಪದಾಧಿಕಾರಿಗಳು, ಮಹಾ ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಬೊಮ್ಮಾಯಿ

ಹಾವೇರಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತವಾಗಿರೋದಕ್ಕೆ ಹುಬ್ಬಳ್ಳಿಯಲ್ಲಿ ನಡೆದಿರುವ ಮತ್ತೊಂದು ಕೊಲೆ ಸಾಕ್ಷಿಯಾಗಿದೆ. ಹೇಯ ಕೃತ್ಯ ಮಾಡಿದವರು ಯಾರೇ ಆಗಲಿ ಒದ್ದು ಒಳಗೆ ಹಾಕಿ ಗಲ್ಲಿಗೇರಿಸುವ ಕೆಲಸ ಮಾಡಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಯಾಯಿ ಹೇಳಿದರು.

 

ಮೋದಿ ಮಹಾಭಾರತದ ಶ್ರೀಕೃಷ್ಣನಂತೆ ದುಷ್ಟರ ಸಂಹಾರಕ್ಕೆ ಗುರು: ಯೋಗಿ

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹಾಡಹಾಗಲೇ ಪ್ರಕರಣ ನಡೆಯುತ್ತಿದ್ದರೂ ಸರ್ಕಾರ ಏನೂ ಆಗಿಲ್ಲ ಎಂಬಂತೆ ವರ್ತಿಸುತ್ತಿದೆ. ಪೊಲೀಸರು ಕ್ಲಬ್ ನಡೆಸುವುದರಲ್ಲಿ ಮಗ್ನರಾಗಿದ್ದು, ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ, ರಾಜ್ಯ ಸರ್ಕಾರವೇ ಮುಂದೆ ನಿಂತು ಇಂಥ ಘಟನೆಗಳಿಗೆ ಕುಮ್ಮಕ್ಕು ನೀಡುವ ಕೆಲಸ ಮಾಡುತ್ತಿರುವುದನ್ನು ಇತಿಹಾಸದಲ್ಲಿ ಎಂದಿಗೂ ನೋಡಿರಲಿಲ್ಲ, ಇದು ಅತ್ಯಂತ ಜನ ವಿರೋಧಿ ಸರ್ಕಾರ ಎಂದು ಕಿಡಿಕಾರಿದರು.

Latest Videos
Follow Us:
Download App:
  • android
  • ios