Asianet Suvarna News Asianet Suvarna News

ಬಿಜೆಪಿ ಅಭ್ಯರ್ಥಿಯ ಚುನಾವಣೆ ಖರ್ಚಿಗೆ ₹25000 ಹಣ ನೀಡಿ, ಗೆಲುವಿಗೆ ಶುಭಹಾರೈಸಿದ ಚುರುಮುರಿ ಮಾರುವ ವ್ಯಕ್ತಿ!

ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತ ಹಾಗೂ ಚುರುಮುರಿ ವ್ಯಾಪಾರಿಯೋರ್ವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಗೆ 25,000 ಹಣ ನೀಡಿ ಗೆಲ್ಲುವಂತೆ ಶುಭಹಾರೈಸಿದ್ದಾರೆ. 

Lok sabha election 2024 Election campaign by BJP candidate Kota Srinivasa Pujari with ct rav at chikkamagaluru rav
Author
First Published Mar 22, 2024, 7:55 PM IST

ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್ ಚಿಕ್ಕಮಗಳೂರು 

ಚಿಕ್ಕಮಗಳೂರು (ಮಾ.22) : ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತ ಹಾಗೂ ಚುರುಮುರಿ ವ್ಯಾಪಾರಿಯೋರ್ವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಗೆ 25,000 ಹಣ ನೀಡಿ ಗೆಲ್ಲುವಂತೆ ಶುಭಹಾರೈಸಿದ್ದಾರೆ. 

ಕೋಟಾ ಶ್ರೀನಿವಾಸ ಪೂಜಾರಿ ಇಂದು ಬೆಳಗ್ಗೆಯಿಂದ ಚಿಕ್ಕಮಗಳೂರು ನಗರದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಈ ವೇಳೆ ಪ್ರಚಾರಕ್ಕೆಂದು ಹೋದಾಗ ಚಿಕ್ಕಮಗಳೂರು ಹೊರವಲಯದ ತೇಗೂರು ಸರ್ಕಲ್ ನಲ್ಲಿನ ಚುರುಮುರಿ ವ್ಯಾಪಾರಿ ಲೊಕೇಶ್ ಬಾಬು ಕೋಟಾಗೆ 25 ಸಾವಿರ ಹಣವನ್ನ ಚುನಾವಣಾ ಖರ್ಚಿಗಾಗಿ ನೀಡಿ ಗೆಲ್ಲುವಂತೆ ಶುಭ ಹಾರೈಸಿದ್ದಾರೆ. 

20 ದಿನದಲ್ಲಿ 10 ಲಕ್ಷ ಕುಕ್ಕರ್ ಆರ್ಡರ್ ಮಾಡಿದ ಕಾಂಗ್ರೆಸ್! ನಿಖಿಲ್ ಕುಮಾರಸ್ವಾಮಿ ಆರೋಪ ಏನು?

ಹಣದ ಜೊತೆ ಎಲೆ ಅಡಿಕೆ ಬಾಳೆ ಹಣ್ಣು : 

ಹಣದ ಜೊತೆ ಎಲೆ-ಅಡಿಕೆ-ಬಾಳೆಹಣ್ಣು ಸೇರಿ ವಿವಿಧ ಹಣ್ಣುಗಳನ್ನ ನೀಡಿ ಚುನಾವಣೆಗೆ ಶುಭಕೋರಿದ್ದಾರೆ. ಕಳೆದ 25 ವರ್ಷಗಳಿಂದ ತೇಗೂರು ಸರ್ಕಲ್ ನಲ್ಲಿ ಚುರುಮುರಿ ಅಂಗಡಿ ಇಟ್ಟಿರುವ ಲೊಕೇಶ್ ಬಿಜೆಪಿಯ ಅಪ್ಪಟ ಕಾರ್ಯಕರ್ತ. ಇಂದು ಕೋಟಾ ಪ್ರತಿಯೊಂದು ಅಂಗಡಿಗಳಿಗೆ ಹೋಗಿ ಮತಯಾಚನೆ ಮಾಡುವ ವೇಳೆ ಹಣ ನೀಡಿ ಶುಭಕೋರಿದ್ದಾರೆ. ಈ ವೇಳೆ ಕೋಟಾ  ಜೊತೆಗಿದ್ದ ಸಿ.ಟಿ.ರವಿ ಲೋಕೇಶ್ ರನ್ನ ಆತ್ಮಿಯವಾಗಿ ತಬ್ಬಿಕೊಂಡು ಇಂತಹಾ ದೇವ ದುರ್ಲಬ ಕಾರ್ಯಕರ್ತರೇ ಬಿಜೆಪಿಯ ಶಕ್ತಿ ಎಂದು ವರ್ಣಿಸಿದ್ದಾರೆ.

ನಾಳೆಯೂ ಕಾಫಿನಾಡಿನಲ್ಲಿ ಕೋಟಾ ಪ್ರವಾಸ :
 
ಇದು ಕೇವಲ ಬಜೆಪಿ ಕಾರ್ಯಕರ್ತರ ಭಾವನೆಯಲ್ಲ. ಹಿಂದುತ್ವದ ಆಧಾರವೂ ಅಲ್ಲ. ದೇಶದಲ್ಲಿರುವ ಪ್ರತಿಯೊಬ್ಬ ರಾಷ್ಟ್ರ ಭಕ್ತರೂ ಕೂಡ ಈ ದೇಶ ಒಳ್ಳೆಯದಾಗಬೇಕಾದರೆ ನರೇಂದ್ರ ಮೋದಿ ಅಧಿಕಾರಕ್ಕೆ ಬರಬೇಕೆಂದು ಬಯಸುತ್ತಿದ್ದಾರೆ. ಆದ್ದರಿಂದ ಪಕ್ಷದ ಎಲ್ಲಾ ಮುಖಂಡರು ಒಟ್ಟಾಗಿ ಗೆಲುವಿಗೆ ಶ್ರಮಿಸೋಣ ಎಂದು ಹೇಳಿದರು.

ಮಾಜಿ ಸಚಿವ ಸಿ.ಟಿ ರವಿ ಮಾತನಾಡಿ, ಕೋಟಾ ಶ್ರೀನಿವಾಸ ಪೂಜಾರಿ ಅವರು ಸರಳ ಸಜ್ಜನ ರಾಜಕಾರಣಿಯಾಗಿದ್ದು, ದೇಶಕ್ಕಾಗಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಬಿಜೆಪಿಗೆ ಮತನೀಡಿ ಎಂದು ಮನವಿ ಮಾಡಿದರು. ಇಂದು ಮತ್ತು ನಾಳೆ ಚಿಕ್ಕಮಗಳೂರಿನಲ್ಲಿ ಪ್ರಚಾರ ಮಾಡಲಿರುವ ಕೋಟಾ ಶ್ರೀನಿವಾಸ ಪೂಜಾರಿ ಜಿಲ್ಲೆಯ ವಿವಿದೆಡೆ ಪ್ರಚಾರ ಮಾಡಲಿದ್ದಾರೆ. ಇಂದು ಬೆಳಗ್ಗೆ ಯೋಗಶಾಲೆ, ಜಿಲ್ಲಾ ಆಟದ ಮೈದಾನದಲ್ಲಿ ವಾಕ್ ಮಾಡುತ್ತಿದ್ದವರನ್ನ ಭೇಟಿ ಮಾಡಿ ಮತಭೇಟೆ ನಡೆಸಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ: ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು!

ಸರಳ ಹಾಗೂ ಸಜ್ಜನ ವ್ಯಕ್ತಿತ್ವದ ಕೋಟಾಗೆ ಮತದಾರರು ಬೆಂಬಲ ನೀಡುವಂತೆ ಭರವಸೆ ನೀಡಿದ್ದಾರೆ.ನಾಳೆಯೂ ಚಿಕ್ಕಮಗಳೂರಿನಲ್ಲಿ ಪ್ರಚಾರ ಮಾಡಲಿರುವ ಕೋಟಾ ಶ್ರೀನಿವಾಸ ಪೂಜಾರಿ ಜಿಲ್ಲೆಯ ವಿವಿದೆಡೆ ಪ್ರಚಾರ ಮಾಡಲಿದ್ದಾರೆ. ಇಂದು ಬೆಳಗ್ಗೆ ಯೋಗಶಾಲೆ, ಜಿಲ್ಲಾ ಆಟದ ಮೈದಾನದಲ್ಲಿ ವಾಕ್ ಮಾಡುತ್ತಿದ್ದವರನ್ನ ಭೇಟಿ ಮಾಡಿ ಮತಭೇಟೆ ನಡೆಸಿದ್ದಾರೆ.

Follow Us:
Download App:
  • android
  • ios