Asianet Suvarna News Asianet Suvarna News

Loksabha Elections 2024: 28 ಎಂಪಿ ಸ್ಥಾನಗಳಲ್ಲೂ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು: ನಿಖಿಲ್ ಕುಮಾರಸ್ವಾಮಿ

ರಾಜ್ಯದಲ್ಲಿ ಮುಂಬರಲಿರುವ ಲೋಕಸಭಾ ಚುನಾವಣೆಯ 28 ಸ್ಥಾನಗಳು ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ರಾಷ್ಟ್ರದಲ್ಲಿ ಮೋದಿ ೩ನೇ ಭಾರಿ ಪ್ರಧಾನಿ ಮಂತ್ರಿಯನ್ನಾಗಿ ಮಾಡಬೇಕಾಗಿದೆ. 

Loksabha Elections 2024 Alliance candidates should win even in 28 MP seats Says Nikhil Kumaraswamy gvd
Author
First Published Mar 7, 2024, 12:44 PM IST

ಕೋಲಾರ (ಮಾ.07): ರಾಜ್ಯದಲ್ಲಿ ಮುಂಬರಲಿರುವ ಲೋಕಸಭಾ ಚುನಾವಣೆಯ 28 ಸ್ಥಾನಗಳು ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ರಾಷ್ಟ್ರದಲ್ಲಿ ಮೋದಿ ೩ನೇ ಭಾರಿ ಪ್ರಧಾನಿ ಮಂತ್ರಿಯನ್ನಾಗಿ ಮಾಡಬೇಕಾಗಿದೆ. ಇದನ್ನೇ ಗುರಿಯಾಗಿಸಿಕೊಂಡು ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಚುನಾವಣೆಯಲ್ಲಿ ಸಹಕಾರ ನೀಡಬೇಕೆಂದು ರಾಜ್ಯ ಜೆಡಿಎಸ್ ಯುವ ಸಂಘಟನೇಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು. ತಾಲೂಕಿನ ಅಮ್ಮೇರಹಳ್ಳಿ ಸಿಎಂಆರ್ ಕಲ್ಯಾಣ ಮಂದಿರದಲ್ಲಿ ಕೋಲಾರ ಲೋಕಸಭೆ ಚುನಾವಣೆಯಲ್ಲಿ ಜಿಡಿಎಸ್-ಬಿಜೆಪಿ ಮೈತ್ರಿ ವಿಚಾರ ಚರ್ಚೆ ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜನರ ಅಭಿಪ್ರಾಯ ಸಂಗ್ರಹ: ಕೋಲಾರ ಜಿಲ್ಲೆಯ ೮ ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರವಾಸದ ಮೂಲಕ ಕಾರ್ಯಕರ್ತರನ್ನು ಸಂಘಟಿಸಿ ಅವರ ಅಭಿಪ್ರಾಯ ಪಡೆದು ವರಿಷ್ಟರಿಗೆ ವರದಿ ಸಲ್ಲಿಸುವ ಕೆಲಸ ನನಗೆ ವಹಿಸಿದೆ, ಈ ಮೀಸಲು ಕ್ಷೇತ್ರದಲ್ಲಿ ಜಿಲ್ಲೆಯ ೬ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆ ವ್ಯಾಪ್ತಿಯ ೨ ವಿಧಾನಸಭಾ ಕ್ಷೇತ್ರ ಸೇರಿದಂತೆ ಒಟ್ಟು ೮ ವಿಧಾನಸಭಾ ಕ್ಷೇತ್ರಗಳ ಪೈಕಿ ೩ ಮಂದಿ ಜೆ.ಡಿ.ಎಸ್ ಶಾಸಕರು, ಓರ್ವರು ವಿಧಾನ ಪರಿಷತ್ ಸದಸ್ಯರು ಇದ್ದು ಕಳೆದ ಲೋಕಸಭಾ ಚುನಾವಣೆಯಲ್ಲಿ ೪,೮೫ ಲಕ್ಷ ಮತಗಳನ್ನು ಜೆಡಿಎಸ್ ಪಡೆದಿತ್ತು. ಕ್ಷೇತ್ರದಲ್ಲಿ ಬಿಜೆಪಿ ಲೋಕಸಭಾ ಸದಸ್ಯರಿದ್ದಾರೆ.

ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಯೋಜನೆಗಳು ಬಿಜೆಪಿಯವರ ಕಣ್ಣಿಗೆ ಕಾಣುತ್ತಿಲ್ಲವೇ?: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಎನ್‌ಡಿಎ ಅಭ್ಯರ್ಥಿಯನ್ನು ಗೆಲ್ಲಿಸುವುದು ನಮ್ಮೆಲ್ಲರ ಗುರಿಯಾಗಿದೆ ಎಂದು ಹೇಳಿದರು. ಎನ್.ಡಿ.ಎ ಮೈತ್ರಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ನಂತರ ಜೆ.ಡಿ.ಎಸ್ ಮತ್ತು ಬಿಜೆಪಿ ಪಕ್ಷಗಳ ಮೈತ್ರಿ ಸಭೆಗಳಾಗಬೇಕು, ಎರಡು ಪಕ್ಷಗಳು ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಂಡು ಮುಂದುವರೆದಾಗ ಮಾತ್ರ ಗೆಲುವಿನ ಫಲಿತಾಂಶ ಕಾಣಲು ಸಾಧ್ಯ, ಮುಂದೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮೈತ್ರಿ ಮುಂದುವರೆಸಿಕೊಂಡು ಹೋದಲ್ಲಿ ಮಾತ್ರ ರಾಜ್ಯದಲ್ಲಿ ಎನ್.ಡಿ.ಎ ಆಡಳಿತ ಚುಕ್ಕಾಣಿ ಹಿಡಿಯಲು ಸಾಧ್ಯ ಎಂದರು.

ಲಕ್ಷ್ಮಣ ಸವದಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

ಜೆಡಿಎಸ್‌ ಮಹಿಳಾ ಸಮಾವೇಶ: ಮಾಲೂರಿನ ರಶ್ಮೀ ರಾಮೇಗೌಡ ಜೆ.ಡಿ.ಎಸ್. ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಕಾತಿ ಮಾಡಿದೆ, ಇದೇ ತಿಂಗಳು ೧೪ ಅಥವಾ ೧೫ ರಂದು ತವರು ಜಿಲ್ಲೆಯಾಗಿರುವ ಕೋಲಾರದಲ್ಲಿಯೇ ಪ್ರಥಮ ಮಹಿಳಾ ಸಮಾವೇಶ ಆಯೋಜಿಸಲು ನಿರ್ಧರಿಸಿದೆ ಎಂದು ಹೇಳಿದರು. ಎಂಎಲ್‌ಸಿ ಇಂಚರ ಗೋವಿಂದರಾಜು, ರಾಜ್ಯ ಜೆಡಿಎಸ್ ಮಹಿಳಾ ಅಧ್ಯಕ್ಷ ರಶ್ಮಿ ರಾಮೇಗೌಡ, ಜಿಪಂ ಮಾಜಿ ಅಧ್ಯಕ್ಷೆ ಚೌಡೇಶ್ವರಿ ರಾಮು, ಮುಖಂಡರಾದ ಡಾ.ಡಿ.ಕೆ.ರಮೇಶ್, ಬಾಲಾಜಿ ಚೆನ್ನಯ್ಯ, ವಕ್ಕಲೇರಿ ರಾಮು, ಜಿ.ಇ.ರಾಮೇಗೌಡ, ತಿರುಮಲೇಶ್, ಪುಷ್ಟಿ ನಾರಾಯಣಸ್ವಾಮಿ, ಬಣಕನಹಳ್ಳಿ ನಟರಾಜ್, ಬಾಬುಮೌನಿ, ವಿಜಯಣ್ಣ, ನಗರಸಭಾ ಸದಸ್ಯರಾದ ರಾಕೇಶ್, ಮಂಜುನಾಥ್ ಇದ್ದರು.

Follow Us:
Download App:
  • android
  • ios