Asianet Suvarna News Asianet Suvarna News

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಶೇ.80ಕ್ಕೂ ಹೆಚ್ಚಿನ ಸ್ಥಾನ: ರೇಣುಕಾಚಾರ್ಯ ವಿಶ್ವಾಸ

ಶೇ.80ಕ್ಕೂ ಹೆಚ್ಚಿನ ಸ್ಥಾನಗಳನ್ನು ಬಿಜೆಪಿ ಪಡೆದು ಮತ್ತೊಮ್ಮೆ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗುವುದು ಸೂರ್ಯ-ಚಂದ್ರರಷ್ಟೇ ಸತ್ಯ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.

More than 80 Percent seats for BJP in Lok Sabha elections Says MP Renukacharya gvd
Author
First Published May 8, 2024, 10:50 AM IST

ಹೊನ್ನಾಳಿ (ಮೇ.08): 2024ರ ಲೋಕಸಭಾ ಚುನಾವಣೆ ರಾಷ್ಟ್ರದಲ್ಲಿ 3ನೇ ಹಂತ ಹಾಗೂ ರಾಜ್ಯದಲ್ಲಿ 2ನೇ ಹಂತದ ಈ ಚುನಾವಣೆ ನಡೆಯುತ್ತಿದ್ದು, ಒಟ್ಟಾರೆಯಾಗಿ ಶೇ.80ಕ್ಕೂ ಹೆಚ್ಚಿನ ಸ್ಥಾನಗಳನ್ನು ಬಿಜೆಪಿ ಪಡೆದು ಮತ್ತೊಮ್ಮೆ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗುವುದು ಸೂರ್ಯ-ಚಂದ್ರರಷ್ಟೇ ಸತ್ಯ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಮತದಾನದ ದಿನವಾದ ಮೇ 7ರಂದು ಧರ್ಮಪತ್ನಿ ಸುಮಿತ್ರ ರೇಣುಕಾಚಾರ್ಯ ಅವರೊಂದಿಗೆ ಹಿರೇಕಲ್ಮಠದ ಚನ್ನೇಶ್ವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತಗಟ್ಟೆ ಸಂಖ್ಯೆ 105ಕ್ಕೆ ಆಗಮಿಸಿ ಎಲ್ಲರಂತೆ ಸರತಿ ಸಾಲಿನಲ್ಲಿ ನಿಂತು, ಅನಂತರ ಮತಗಟ್ಟೆಯೊಳಗೆ ಹೋಗಿ ಮತದಾನ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ವಿಶ್ವದ ಬಹಳಷ್ಟು ರಾಷ್ಟ್ರಗಳು ದೇಶದಲ್ಲಿ ನಡೆಯುತ್ತಿರುವ ಚುನಾವಣೆಗಳನ್ನು ಬಹುನಿರೀಕ್ಷೆಯಿಂದ ಗಮನಿಸುತ್ತಿವೆ. ದೇಶದ ಜನ ಕೂಡ ಈಗಾಗಲೇ ನರೇಂದ್ರ ಮೋದಿ ಸಮರ್ಥ ನಾಯಕತ್ವದಲ್ಲಿ ಬಹಳಷ್ಟು ನಂಬಿಕೆ ಹೊಂದಿ, ದೇಶದ ಸರ್ವತೋಮುಖ ಅಭಿವೃದ್ಧಿ ದೃಷ್ಠಿಯಿಂದ ಬಿಜೆಪಿಗೆ ಮತ ನೀಡುತ್ತಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇಬ್ಬರು ಒಪ್ಪಿ ಅರ್ಜಿ ವಾಪಸ್ ಪಡೆದ್ರೆ ವ್ಯಾಜ್ಯ ಇತ್ಯರ್ಥ: ರೂಪ-ರೋಹಿಣಿಗೆ ಸುಪ್ರೀಂಕೋರ್ಟ್‌ ಸಲಹೆ

ದೇಶದಲ್ಲಿ ಕಾಂಗ್ರೆಸ್ ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ. ಕೇವಲ ಅಲ್ಪಸಂಖ್ಯಾತರನ್ನು ಓಲೈಕೆ ಮಾಡಿಕೊಂಡು ದೇಶದ ಅಭಿವೃದ್ಧಿ, ಭದ್ರತೆ, ಸುರಕ್ಷತೆ ಕಡೆಗಣಿಸಿ ರಾಜಕಾರಣ ಮಾಡುತ್ತಿದೆ. ಪ್ರಸ್ತುತ ಕಾಂಗ್ರೆಸ್ ಹೆಚ್ಚಿನ ಅಸ್ತಿತ್ವವನ್ನು, ಜನರ ನಂಬಿಕೆಯನ್ನು ಕಳೆದುಕೊಂಡಿದೆ ಎಂದು ಹೇಳಿದರು. ವಿಶೇಷವಾಗಿ ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಎಲ್ಲ ಮತದಾರರಿಗೆ ಈಗಾಗಲೇ ಬಿಜೆಪಿಗೆ ಹೆಚ್ಚಿನ ಮತ ನೀಡಿ ಎಂದು ಮನವಿಮಾಡಿಕೊಂಡಿದ್ದೇನೆ. ಅವರು ಕೂಡ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರನ್ನು ಆಶೀರ್ವದಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Follow Us:
Download App:
  • android
  • ios