ಶ್ರೀರಾಮುಲು ಕಾಂಗ್ರೆಸ್‌ಗೆ ಬಂದರೆ ಸ್ವಾಗತ: ಸಚಿವ ಚಲುವರಾಯಸ್ವಾಮಿ

ಸಂಸತ್ ಚುನಾವಣೆ ಸಮಯದಲ್ಲೇ ಶ್ರೀರಾಮುಲು ಕಾಂಗ್ರೆಸ್‌ಗೆ ಬರುತ್ತಾರೆಂದು ಚರ್ಚೆ ಆಗಿತ್ತು. ಆ ಸಮಯದಲ್ಲಿ ಅವರು ಬರಲಿಲ್ಲ. ಈಗ ಕಾಂಗ್ರೆಸ್‌ಗೆ ಬರುತ್ತಾರೋ, ಇಲ್ಲವೋ ಗೊತ್ತಿಲ್ಲ. ಒಮ್ಮೆ ಅವರು ಕಾಂಗ್ರೆಸ್‌ಗೆ ಬಂದರೆ ಸ್ವಾಗತಿಸುತ್ತೇವೆ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. 

Sriramulu will be welcome if he joins Congress Says Minister Chaluvarayaswamy

ಮಂಡ್ಯ (ಜ.25): ಸಂಸತ್ ಚುನಾವಣೆ ಸಮಯದಲ್ಲೇ ಶ್ರೀರಾಮುಲು ಕಾಂಗ್ರೆಸ್‌ಗೆ ಬರುತ್ತಾರೆಂದು ಚರ್ಚೆ ಆಗಿತ್ತು. ಆ ಸಮಯದಲ್ಲಿ ಅವರು ಬರಲಿಲ್ಲ. ಈಗ ಕಾಂಗ್ರೆಸ್‌ಗೆ ಬರುತ್ತಾರೋ, ಇಲ್ಲವೋ ಗೊತ್ತಿಲ್ಲ. ಒಮ್ಮೆ ಅವರು ಕಾಂಗ್ರೆಸ್‌ಗೆ ಬಂದರೆ ಸ್ವಾಗತಿಸುತ್ತೇವೆ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಜನಾರ್ದನ ರೆಡ್ಡಿ- ಶ್ರೀರಾಮುಲು ಜಗಳ ಅವರ ವೈಯಕ್ತಿಕ ವಿಚಾರ. ಅವರು ಏನು ಬೇಕಾದರೂ ಮಾಡಿಕೊಳ್ಳಲಿ. ಪಕ್ಷದ ತತ್ವ- ಸಿದ್ಧಾಂತ ಒಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಯಾರು ಬಂದರೂ ಸಂತೋಷ. ಅದರಂತೆ ಶ್ರೀರಾಮುಲು ಬಂದರೆ ಅಭ್ಯಂತರವಿಲ್ಲ. 

ಈ ಬಗ್ಗೆ ಹೈಕಮಾಂಡ್, ಮುಖ್ಯಮಂತ್ರಿಗಳು, ಕೆಪಿಸಿಸಿ ಅಧ್ಯಕ್ಷರು ತೀರ್ಮಾನ ಮಾಡುತ್ತಾರೆ ಎಂದು ಸುದ್ದಿಗಾರರಿಗೆ ತಿಳಿಸಿದರು. ಕಾಂಗ್ರೆಸ್‌ಗೆ ಬೇರೆ ಬೇರೆ ಪಕ್ಷಗಳಿಂದ ಒಂದಷ್ಟು ಜನ ಶಾಸಕರು ಬರುತ್ತಾರೆಂದು ಹೇಳುತ್ತಿದ್ದಾರೆ. ಯಾರೇ ಬಂದರೂ ನಮಗೇನು ಬೇಜಾರಿಲ್ಲ. ಬರದಿದ್ದವರನ್ನು ಬರಲೇಬೇಕೆಂದು ಎಳೆದುಕೊಂಡು ಬರುವ ಪರಿಸ್ಥಿತಿ ನಮಗಿಲ್ಲ. ಏಕೆಂದರೆ, 138 ಶಾಸಕರು ಇರುವುದರಿಂದ ನಮಗೆ ಸಮಸ್ಯೆ ಇಲ್ಲ. ನಮ್ಮ ಪಕ್ಷಕ್ಕೆ ಬರುತ್ತೇವೆ ಎನ್ನುವವರಿಗೆ ಮೊದಲು ಸಿಎಂ, ಕೆಪಿಸಿಸಿ ಅಧ್ಯಕ್ಷರ ಬಳಿ ಮಾತನಾಡಬೇಕು ಅಂತ ಹೇಳಿದ್ದೇವೆ ಎಂದು ತಿಳಿಸಿದರು. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ನವರು ನೀಡುತ್ತಿರುವ ಕಿರುಕುಳದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮೈಕ್ರೋ ಫೈನಾನ್ಸ್ ಕಿರುಕುಳದ ಸಂಬಂಧ ಕಠಿಣ ಕಾನೂನು ಕ್ರಮಕ್ಕೆ ಚಿಂತನೆ ನಡೆಸಲಾಗುತ್ತಿದೆ. 

ಬಡ್ಡಿ, ಸುಸ್ತಿಬಡ್ಡಿ ಹಾಕಿ ಸಾರ್ವಜನಿಕರಿಗೆ ತೊಂದರೆ ಕೊಟ್ಟರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಮಂಡ್ಯದಲ್ಲೂ ಈ ಬಗ್ಗೆ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ನಿರ್ದೇಶನ ನೀಡಿದ್ದೇನೆ. ಜನರೂ ಸಹ ಈ ಬಗ್ಗೆ ಜಾಗೃತರಾಗಬೇಕು ಎಂದು ನುಡಿದರು. ಮಂಡ್ಯದಲ್ಲಿ ಜೆಡಿಎಸ್- ಬಿಜೆಪಿ ಬೆಂಬಲಿತ ಸಹಕಾರ ಸಂಘಗಳ ಸದಸ್ಯರ ಅನರ್ಹ ವಿಚಾರವಾಗಿ ಪ್ರತಿಕ್ರಿಯಿಸಿ, ನಾವು ಅಧಿಕಾರದಲ್ಲಿ ಇಲ್ಲದಿದ್ದಾಗ ಡಿಸಿಸಿ ಬ್ಯಾಂಕ್‌ನಲ್ಲಿ 9 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದೆವು. ಜೆಡಿಎಸ್‌ನವರು 4 ಸ್ಥಾನಗಳಲ್ಲಿ ಗೆದ್ದಿದ್ದರು. ಆಗ ಬಿಜೆಪಿಯ ಉಮೇಶ್ ಅವರನ್ನು ಕರೆತಂದು ಅಧ್ಯಕ್ಷರನ್ನಾಗಿ ಮಾಡಿದರು. ಚುನಾವಣೆ ದಿನ ಕಾಂಗ್ರೆಸ್ ಪಕ್ಷದ ನಾಲ್ವರು ಸದಸ್ಯರನ್ನು 24 ಗಂಟೆಯಲ್ಲಿ ಅನರ್ಹರನ್ನಾಗಿ ಮಾಡಿದ್ದರು. ಇದು ಜೆಡಿಎಸ್- ಬಿಜೆಪಿಯವರಿಗೆ ದಬ್ಬಾಳಿಕೆ, ದೌರ್ಜನ್ಯ ಎನಿಸುತ್ತಿಲ್ಲವೇ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಬಗ್ಗೆ ಎಚ್‌ಡಿಕೆ ಸರ್ಟಿಫಿಕೇಟ್ ಅಗತ್ಯವಿಲ್ಲ: ಸಚಿವ ಚಲುವರಾಯಸ್ವಾಮಿ

ಪುಟ್ಟರಾಜು ಪಾಪ ಬಹಳ ಬುದ್ಧಿವಂತ. ಪುಟ್ಟರಾಜು ಯಜಮಾನನ ಹತ್ತಿರ ನಾನು ಕಲಿಯಬೇಕು. ಇವತ್ತು ಈ ರೀತಿ ಮಾತನಾಡುವವರು ಅವತ್ತು ಏನು ಮಾಡುತ್ತಿದ್ದರು. ಸಹಕಾರ ಇಲಾಖೆಯಲ್ಲಿ ನಾವು ಜೆಡಿಎಸ್‌ನವರಷ್ಟು ಕೆಳಗಿಳಿದು ಚುನಾವಣೆ ಮಾಡಲ್ಲ. ಇವತ್ತೂ ಅವರ ನಾಲ್ಕು ಜನ ಅಭ್ಯರ್ಥಿಗಳದ್ದು ತಡೆಯಾಜ್ಞೆ ಇದೆ. ಅದನ್ನು ತೆಗೆದರೆ ಅವರು ಅಭ್ಯರ್ಥಿಗಳೇ ಆಗುವಂತಿಲ್ಲ. ನಾವು ಅಂತಹದಕ್ಕೆಲ್ಲಾ ಕೈ ಹಾಕಿಲ್ಲ. ಸೂಪರ್ ಸೀಡ್ ಆಗಿರುವ ಸೊಸೈಟಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಡಿ ಅನ್ನೋಕೆ ಆಗುತ್ತಾ. ಕಾನೂನು ಬಾಹೀರವಾಗಿರುವ ಸೊಸೈಟಿಗಳ ವಿರುದ್ಧ ಕ್ರಮ ಆಗುತ್ತೆ ಎಂದರು.

Latest Videos
Follow Us:
Download App:
  • android
  • ios