ಜಿ.ಟಿ.ದೇವೇಗೌಡರಿಗೆ ಆಮೇಲೆ ನಮ್ಮ ಶಕ್ತಿ ತೋರಿಸುವೆ: ಕೇಂದ್ರ ಸಚಿವ ಕುಮಾರಸ್ವಾಮಿ
ತಮ್ಮ ಮೇಲೆ ಕ್ರಮ ಕೈಗೊಳ್ಳಲು ಧಂ ಬೇಕು ಎಂಬ ಶಾಸಕ ಜಿ.ಟಿ.ದೇವೇಗೌಡ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಹಿರಿಯರು ನಮ್ಮ ಪಕ್ಷದಲ್ಲಿದ್ದಾರೆ. ಬಗೆ ಆಮೇಲೆ ತೀರ್ಮಾನ ಕೈಗೊಳ್ಳುತ್ತೇವೆ. ನಮ್ಮ ಶಕ್ತಿ ಆಮೇಲೆ ತೋರಿಸುತ್ತೇವೆ ಎಂದ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ
ಮೈಸೂರು(ಜ.25): ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಆಮೇಲೆ ನಮ್ಮ ಶಕ್ತಿ ತೋರಿಸುತ್ತೇವೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ತಮ್ಮ ಮೇಲೆ ಕ್ರಮ ಕೈಗೊಳ್ಳಲು ಧಂ ಬೇಕು ಎಂಬ ಶಾಸಕ ಜಿ.ಟಿ.ದೇವೇಗೌಡ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಹಿರಿಯರು ನಮ್ಮ ಪಕ್ಷದಲ್ಲಿದ್ದಾರೆ. ಬಗೆ ಆಮೇಲೆ ತೀರ್ಮಾನ ಕೈಗೊಳ್ಳುತ್ತೇವೆ. ನಮ್ಮ ಶಕ್ತಿ ಆಮೇಲೆ ತೋರಿಸುತ್ತೇವೆ ಎಂದರು.
ಮುಡಾ ಹಗರಣ: ಆಡಿಯೋ ಸೇರಿ ಒಟ್ಟು ಸಾವಿರ ಪುಟದ ದಾಖಲೆ ತನಿಖೆ ವರದಿಯಲ್ಲೇನಿದೆ?, ಭಾರೀ ಕುತೂಹಲ
ಕಾಂಗ್ರೆಸ್ ಅವರಿಗೆ ನಾಡಿನ ಜನತೆ ಒಳ್ಳೆ ಕೆಲಸ ಮಾಡಿ ಎಂದು ಅಧಿಕಾರ ಕೊಟ್ಟಿದ್ದಾರೆ. 18 ತಿಂಗಳಿನಿಂದ ಅವರ ನಡವಳಿಕೆ ನೋಡಿದರೆ ರಾಜ್ಯದ ಜನತೆಯ ಸಮಸ್ಯೆಗೆ ಪರಿಹಾರ ತರುವ ರೀತಿ ಕಾಣುತ್ತಿಲ್ಲ. ವಿರೋಧ ಪಕ್ಷಗಳನ್ನು ಅಸ್ಥಿರ ಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಆಡಳಿತಕ್ಕೆ ಕರ್ನಾಟಕಕ್ಕೆ ಒಳ್ಳೆಯ ಹೆಸರಿದೆ. ಅದನ್ನು ಸರ್ವನಾಶ ಮಾಡಲು ಕಾಂಗ್ರೆಸ್ ಅವರು ಹೊರಟ್ಟಿದ್ದಾರೆ ಎಂದು ದೂರಿದರು.
ನನ್ನ, ಯತ್ನಾಳ್ ವಿರುದ್ಧ ಕ್ರಮಕ್ಕೆ ಧಮ್ ಬೇಕು: ಜಿ.ಟಿ.ದೇವೇಗೌಡ
ಮುಖ್ಯಮಂತ್ರಿ ನಾವೆಲ್ಲ ಒಂದಾಗಿದ್ದೇವೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಾರಿಗೋಸ್ಕರ ಒಂದಾಗಿದ್ದಾರೆ. ಅಧಿಕಾರಕ್ಕೆ ಮತ್ತು ಕುರ್ಚಿಗಾಗಿ ಮಾತ್ರ ಒಂದಾಗುತ್ತಿದ್ದಾರೆ. ಜನರು ಕುರ್ಚಿ ಕೊಟ್ಟಿದ್ದಾರೆ. ಜನರಿಗೆ ಏನು ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದರು
ಶ್ರೀರಾಮುಲು ಕಾಂಗ್ರೆಸ್‌ಗೆ ಹೋಗುವುದಿಲ್ಲ: ಎಚ್‌ಡಿಕೆ
ಶ್ರೀರಾಮುಲು ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಹೋಗುವುದಿಲ್ಲ ಸಚಿವ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ಶ್ರೀರಾಮುಲು ಮತ್ತು ಜನಾರ್ದನ ರೆಡ್ಡಿ ಕಲಹ ಬಿಜೆಪಿಯ ಆಂತರಿಕ ವಿಚಾರ. ಬಿಜೆಪಿಯಲ್ಲಿ ಏನು ನಡೆಯುತ್ತಿದೆಂಬ ಬಗ್ಗೆ ನನಗೆ ಮಾಹಿತಿ ಇಲ್ಲ. ಇಬ್ಬರೂ ಒಂದು ಕಾಲದಲ್ಲಿ ಆತ್ಮೀಯ ಸ್ನೇಹಿತರು, ಅಣ್ಣ ತಮ್ಮಂದಿರಕ್ಕಿಂತ ಚೆನ್ನಾಗಿದ್ದ ವರು. ಇಬ್ಬರ ಜಗಳವನ್ನು ಬಿಜೆಪಿಯ ನಾಯಕರೇ ಕುಳಿತು ಪರಿಹರಿಸಬೇಕು. ಈ ಬಗ್ಗೆ ನಾನು ಬಿಜೆಪಿ ನಾಯಕರಿಗೆ ಮನವಿ ಮಾಡುತ್ತೇನೆ. ಶ್ರೀರಾಮುಲು ನನ್ನ ಅಭಿಪ್ರಾಯದಲ್ಲಿ ಕಾಂಗ್ರೆಸ್‌ಗೆ ಹೋಗುವುದಿಲ್ಲ ಎಂದರು.