Asianet Suvarna News Asianet Suvarna News

ಲೋಕಸಭೆ ಚುನಾವಣೆಯಲ್ಲಿ ಕೋಲಾರದಿಂದ ಬಿಜೆಪಿಯನ್ನು ಗೆಲ್ಲಿಸಿ: ಸಂಸದ ಮುನಿಸ್ವಾಮಿ

2024ರ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಲ್ಲಿ ಬಿಜೆಪಿಯಿಂದ ಯಾರೇ ಸ್ಪರ್ಧಿಸಿದರೂ ಅವರಿಗೆ ಮತ ನೀಡುವಂತೆ ಹಾಗೂ ದೇಶದಲ್ಲಿ ಬಿಜೆಪಿ ಗೆಲ್ಲಿಸಿ, ಮತ್ತೊಮ್ಮೆ ಮೋದಿಯವರು ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಲು ಬಿಜೆಪಿ ಕಾರ್ಯಕರ್ತರು ಧೈರ್ಯದಿಂದ ಕಾರ್ಯನಿರ್ವಹಿಸಿ ಹಾಗೂ ಬೂತ್ ಮಟ್ಟದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗೆ ಹೆಚ್ಚು ಮತ ಬೀಳುವಂತೆ ಮತದಾರರಿಗೆ ಮನವೊಲಿಸುವಂತೆ ಕೋಲಾರ ಸಂಸದ ಎಸ್.ಮುನಿಸ್ವಾಮಿ ಕರೆಯಿತ್ತರು.

Win BJP from Kolar in Lok Sabha Election Says MP S Muniswamy gvd
Author
First Published Dec 28, 2023, 9:03 PM IST

ಟೇಕಲ್ (ಡಿ.28): 2024ರ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಲ್ಲಿ ಬಿಜೆಪಿಯಿಂದ ಯಾರೇ ಸ್ಪರ್ಧಿಸಿದರೂ ಅವರಿಗೆ ಮತ ನೀಡುವಂತೆ ಹಾಗೂ ದೇಶದಲ್ಲಿ ಬಿಜೆಪಿ ಗೆಲ್ಲಿಸಿ, ಮತ್ತೊಮ್ಮೆ ಮೋದಿಯವರು ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಲು ಬಿಜೆಪಿ ಕಾರ್ಯಕರ್ತರು ಧೈರ್ಯದಿಂದ ಕಾರ್ಯನಿರ್ವಹಿಸಿ ಹಾಗೂ ಬೂತ್ ಮಟ್ಟದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗೆ ಹೆಚ್ಚು ಮತ ಬೀಳುವಂತೆ ಮತದಾರರಿಗೆ ಮನವೊಲಿಸುವಂತೆ ಕೋಲಾರ ಸಂಸದ ಎಸ್.ಮುನಿಸ್ವಾಮಿ ಕರೆಯಿತ್ತರು.

ಸ್ವಗ್ರಾಮ ಯಲುವಗುಳಿ ಗ್ರಾಮದ ನಿವಾಸದಲ್ಲಿ ಮಾಲೂರು ತಾಲೂಕು ಬಿಜೆಪಿ ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಿ ಜಾರಿಗೆ ತಂದಿರುವ ಅನೇಕ ಜನಪರ ಯೋಜನೆಗಳ ಬಗ್ಗೆ ಮತದಾರರ ಮನವರಿಕೆ ಮಾಡಿ ಅವರ ಮನವೊಲಿಸಿ ಎಂದರು. ಕಳೆದ ಮೇ ತಿಂಗಳಿನಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಮರುಳಾಗಿದ್ದರಿಂದ ಬಿಜೆಪಿ ಸೋಲಲು ಕಾರಣವಾಯಿತು. ಆದರೆ ಈಗ ಅವರಿಗೆ ಮತ ಹಾಕಿದವರೇ ಪಶ್ಚಾತ್ತಾಪ ಪಟ್ಟು ಕಾಂಗ್ರೆಸ್ ಗೆ ಮತ ಹಾಕಿ ನಾವು ತಪ್ಪು ಮಾಡಿದ್ದೇವೆ ಎಂದು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಲು ಮುಂದಾಗುತ್ತಿದ್ದಾರೆ. 

ಸಿಎಂ ಸಿದ್ದರಾಮಯ್ಯ ಕೆಡಿಪಿ ಸಭೆ ಮ್ಯಾಚ್ ಫಿಕ್ಸಿಂಗ್: ಸಂಸದ ಮುನಿಸ್ವಾಮಿ

ಕಾಂಗ್ರೆಸ್ ಸರ್ಕಾರ ನೀಡಿದ್ದ ಭರವಸೆಗಳನ್ನು ಜಾರಿಗೆ ತರಲು ಸಾಧ್ಯವಾಗುತ್ತಿಲ್ಲ. ಗೃಹಲಕ್ಷ್ಮೀ ಯೋಜನೆ ಕೆಲವರಿಗೆ ಮಾತ್ರ ತಲುಪಿದೆ, ಅನ್ನಭಾಗ್ಯ ಯೋಜನೆಯ ಹಣ ಬಹಳಷ್ಟು ಜನರಿಗೆ ಬರಲೇ ಇಲ್ಲ. ಶಕ್ತಿ ಯೋಜನೆಯಿಂದ ಗ್ರಾಮೀಣ ಭಾಗದಲ್ಲಿ ಬಸ್‌ಗಳು ಬರುತ್ತಿಲ್ಲ. ಈ ಕಾರಣದಿಂದ ವಿದ್ಯಾರ್ಥಿಗಳಿಗೆ ಕಾಲ್ನಡಿಗೆಯೇ ಶಾಶ್ವತವಾಗಿದ್ದು, ಸರಿಯಾದ ಸಮಯಕ್ಕೆ ಶಾಲೆಗಳಿಗೆ ಹೋಗಲು ಆಗುತ್ತಿಲ್ಲ. ಆದ್ದರಿಂದ ಈಗ ತಾವು ಕಾಂಗ್ರೆಸ್ ಲೋಪಗಳನ್ನು ಮನವರಿಕೆ ಮಾಡಿ ಬಿಜೆಪಿ ಸಾಧನೆಗಳನ್ನು ಜನರಿಗೆ ತಿಳಿಸಿ, ಬಿಜೆಪಿಗೆ ಮತ ಹಾಕುವಂತೆ ಕಾರ್ಯಕರ್ತರನ್ನು ಹುರಿದುಂಬಿಸಿ ಎಂದು ಕಾರ್ಯಕರ್ತರಿಗೆ ಕರೆಯಿತ್ತರು.

ಹೊಂದಾಣಿಕೆ: ಮಾಲೂರು ಕ್ಷೇತ್ರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಡೆದ ಮತದಾನದಲ್ಲಿ ಬಿಜೆಪಿ ಅಭ್ಯರ್ಥಿಗೆ ೫೦ ಸಾವಿರಕ್ಕೂ ಹೆಚ್ಚು ಮತಗಳು ಬಂದಿದ್ದು, ಜೆಡಿಎಸ್ ಅಭ್ಯರ್ಥಿಗೆ ಅಂದಾಜು ೧೬ ಸಾವಿರಕ್ಕೂ ಹೆಚ್ಚು ಮತಗಳು ಬಂದಿದ್ದವು. ಲೋಕಸಭಾ ಚುನಾವಣೆಗೆ ಎರಡು ಪಕ್ಷಗಳು ಹೊಂದಾಣಿಕೆಯಾದರೆ ೭೫ ಸಾವಿರಕ್ಕೂ ಹೆಚ್ಚು ಮತಗಳು ಬಿಜೆಪಿ ಅಭ್ಯರ್ಥಿಗೆ ಬರುವಂತೆ ಕಾರ್ಯಕರ್ತರ ಮೇಲೆ ದೌರ್ಜನ್ಯವೆಸಗುತ್ತಿರುವುದು ಕಂಡು ಬರುತ್ತಿದೆ. ತಾವು ಯಾವುದಕ್ಕೂ ಭಯಪಡದೆ ಕಾರ್ಯನಿರ್ವಹಿಸಿ, ನಿಮ್ಮೊಂದಿಗೆ ನಾನಿದ್ದೇನೆ ಎಂದು ಮುನಿಸ್ವಾಮಿ ಅಭಯ ನೀಡಿದರು.

ಜನತೆ ಎಚ್ಚೆತ್ತುಕೊಳ್ಳದಿದ್ದರೆ ಪ್ರಜಾಪ್ರಭುತ್ವ ಧ್ವಂಸ: ಸಿಎಂ ಸಿದ್ದರಾಮಯ್ಯ

ಸಭೆಯಲ್ಲಿ ಬಿಜೆಪಿ ಪಕ್ಷದ ಮುಖಂಡರಾದ ಪುರಸಭಾ ಸದಸ್ಯ ವೇಮಣ್ಣ, ಜಿಪಂ ಮಾಜಿ ಉಪಾಧ್ಯಕ್ಷ ಗೋಪಾಲರೆಡ್ಡಿ, ಬನಹಳ್ಳಿ ಗ್ರಾಪಂ ಅಧ್ಯಕ್ಷ ಮಂಜುನಾಥ, ತಾಪಂ ಮಾಜಿ ಅಧ್ಯಕ್ಷ ಆನಂದ್, ಸದಸ್ಯ ಕೆ.ಎಂ.ರಾಮಕೃಷ್ಣಪ್ಪ, ಟಿ.ಪಿ.ವೆಂಕಟೇಶ್, ಹರೀಶ್, ದೊಡ್ಡ ಶಿವಾರ ರಘು, ವಿ.ಹನುಮಪ್ಪ, ಚಂದ್ರಶೇಖರ್, ವಕೀಲರ ಸಂಘದ ಅಧ್ಯಕ್ಷ ಟಿ.ಪಿ.ಕೃಷ್ಣಪ್ಪ, ಕೆ.ಬಿ. ನಾರಾಯಣಸ್ವಾಮಿ, ಸಂಪತ್ ಹಾಗೂ ೩೦೦ ಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿ ಬಿಜೆಪಿ ಗೆಲುವಿಗೆ ಸಲಹೆ ಸೂಚನೆಗಳನ್ನು ನೀಡಿದರು.

Follow Us:
Download App:
  • android
  • ios