ಸಿಎಂ ಇಲ್ಲದೆ ಸಿಗಂದೂರು ಸೇತುವೆ ಲೋಕಾರ್ಪಣೆ, ಪ್ರಧಾನಿ ಮೋದಿಗೆ ದೂರು ನೀಡಿದ ಸಿದ್ಧರಾಮಯ್ಯ!ಸಿಎಂ ಸಿದ್ಧರಾಮಯ್ಯ ಅವರ ಅನುಪಸ್ಥಿತಿಯಲ್ಲಿ ಸೇತುವೆ ಲೋಕಾರ್ಪಣೆಗೊಂಡಿದ್ದು, ಆಹ್ವಾನ ಪತ್ರಿಕೆ ವಿವಾದಕ್ಕೆ ಕಾರಣವಾಗಿದೆ. ಶಿಷ್ಟಾಚಾರ ಉಲ್ಲಂಘನೆ ಆರೋಪಿಸಿ ಸಿಎಂ ಪ್ರಧಾನಿಗೆ ಪತ್ರ ಬರೆದಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಹಕಾರದ ಕೊರತೆ ಎದ್ದು ಕಾಣುತ್ತಿದೆ.