Asianet Suvarna News Asianet Suvarna News

ಕಾಂಗ್ರೆಸ್‌ಗೆ ಭಾರತ ’ನಮ್ಮ' ದೇಶವಲ್ಲ 'ನಿಮ್ಮದು’..!

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಪಿ.ವಿ ಸಿಂಧು ಚಿನ್ನ ಗೆಲ್ಲುವ ಮೂಲಕ ಇಡೀ ದೇಶವೇ ಹೆಮ್ಮೆ ಪಡುವಂತಹ ಸಾಧನೆ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಸಿಂಧುವನ್ನು ಹೊಗಳುವ ಭರದಲ್ಲಿ ಯಡವಟ್ಟು ಮಾಡಿಕೊಂಡಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

 

Congress congratulates PV Sindhu for making her nation proud People Slams which nation Congress belongs to
Author
New Delhi, First Published Aug 26, 2019, 4:13 PM IST

ನವದೆಹಲಿ[ಆ.26]: ವಿಶ್ವಬ್ಯಾಡ್ಮಿಂಟನ್ ಚಾಂಪಿಯನ್’ಶಿಪ್ ನಲ್ಲಿ ಭಾರತದ ತಾರಾ ಶಟ್ಲರ್ ಪಿ.ವಿ ಸಿಂಧು ಚಿನ್ನ ಗೆಲ್ಲುವ ಮೂಲಕ ಇಡೀ ದೇಶವೇ ಹೆಮ್ಮೆಪಡುವಂತಹ ಚಾರಿತ್ರಿಕ ಸಾಧನೆ ಮಾಡಿದ್ದಾರೆ. ಸ್ವಿಟ್ಜರ್‌ಲ್ಯಾಂಡ್‌ನ ಬಾಸೆಲ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಜಪಾನಿನ ನಜೊಮಿ ಒಕುಹರ ಮಣಿಸಿ ಚಿನ್ನ ಗೆಲ್ಲುವುದರೊಂದಿಗೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಶಟ್ಲರ್ ಎನ್ನುವ ದಾಖಲೆ ನಿರ್ಮಿಸಿದರು. ಸಿಂಧು ಸಾಧನೆಗೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿವೆ. ಇದೀಗ ಕಾಂಗ್ರೆಸ್ ಮಾಡಿದ ಟ್ವೀಟ್’ವೊಂದು ವಿವಾದಕ್ಕೆ ಗ್ರಾಸವಾಗಿದೆ.

ವಿಶ್ವ ಬ್ಯಾಡ್ಮಿಂಟನ್: ಚಿನ್ನ ಗೆದ್ದು ಇತಿಹಾಸ ಬರೆದ PV ಸಿಂಧು

ಹೌದು, ಕಾಂಗ್ರೆಸ್ ತನ್ನ ಟ್ವಿಟರ್ ಖಾತೆಯಲ್ಲಿ, ’ನೀವು ನಿಮ್ಮ ದೇಶವನ್ನು ಹೆಮ್ಮೆಪಡುವಂತೆ ಮಾಡಿದ್ದೀರ’ ಎನ್ನುವ ಟ್ವೀಟ್ ಈಗ ಸಾಕಷ್ಟು ಟ್ವೀಟ್ ವಾರ್’ಗೆ ಸಾಕ್ಷಿಯಾಗಿದೆ. ಕೆಲವರು ಭಾರತ ನಿಮ್ಮ ದೇಶವಲ್ಲವೇ ಎಂದು ಪ್ರಶ್ನಿಸಿದ್ದಾರೆ. 

ಕೆಲ ಟ್ವಿಟರಿಗರು ಕೊನೆಗೂ ಕಾಂಗ್ರೆಸ್ ಭಾರತವನ್ನು ತಮ್ಮ ದೇಶವಲ್ಲ ಎಂದು ಒಪ್ಪಿಕೊಂಡಿದೆ ಎಂದು ಲೇವಡಿ ಮಾಡಿದರೆ, ಮತ್ತೆ ಕೆಲವರು ಸಿಂಧು ನಿಮ್ಮ ದೇಶದವರಲ್ಲವೇ..? ಹಾಗಿದ್ದರೆ ಸಿಂಧು ಯಾವ ದೇಶವನ್ನು ಹೆಮ್ಮೆ ಪಡುವಂತೆ ಮಾಡಿದ್ದು ಎಂದು ಪ್ರಶ್ನಿಸಿದ್ದಾರೆ. 

ವಿಶ್ವ ಚಾಂಪಿಯನ್‌ಶಿಪ್‌ ಗೆದ್ದ ಸಿಂಧುಗೆ ಬಹುಮಾನ ಘೋಷಿಸಿದ ಯಡಿಯೂರಪ್ಪ

ಪಿ.ವಿ ಸಿಂಧು ಕಳೆದೆರಡು ವರ್ಷವೂ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್’ಶಿಪ್’ನಲ್ಲಿ ಫೈನಲ್ ಪ್ರವೇಶಿಸಿದ್ದರಾದರೂ ಚಿನ್ನ ಗೆಲ್ಲುವಲ್ಲಿ ವಿಫಲವಾಗಿದ್ದರು. ಆದರೆ, ಮೂರನೇ ಬಾರಿ ಕೊನೆಗೂ ಚಿನ್ನ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದರು. ಸಿಂಧು ಸಾಧನೆಗೆ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 5 ಲಕ್ಷ ರುಪಾಯಿ ಬಹುಮಾನ ಘೋಷಿಸಿದ್ದಾರೆ.


 

Latest Videos
Follow Us:
Download App:
  • android
  • ios