userpic
user icon
0 Min read

6 ತಿಂಗಳಲ್ಲಿ ಎಲ್ಲಾ ಬ್ಯಾಕ್‌ಲಾಗ್‌ ಹುದ್ದೆ ಭರ್ತಿ ಮಾಡಿ: ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

Fill All Backlog Posts in 6 months Says High Court of Karnataka grg
karnataka high court

Synopsis

ರಾಜ್ಯ ಸರ್ಕಾರದ ಎಲ್ಲ ಇಲಾಖೆ ಮತ್ತು ಸಂಸ್ಥೆಗಳಲ್ಲಿ ಖಾಲಿಯಿರುವ ಬ್ಯಾಕ್‌ಲಾಕ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಮುಂದಿನ ಆರು ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ಆದೇಶದಲ್ಲಿ ತಿಳಿಸಿದ ನ್ಯಾಯಪೀಠ 

ಬೆಂಗಳೂರು(ಸೆ.29):  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಷ್ಟ ಪಂಗಡದವರಿಗೆ ಮೀಸಲಿಟ್ಟ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರಿ ಸೇವೆಯಲ್ಲಿ ಅ ಸಮುದಾಯಗಳಿಗೆ ಕಲ್ಪಿಸಿದ ಪ್ರಾತಿನಿಧ್ಯ ಕಸಿದುಕೊಂಡಂತೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಮುಂದಿನ ಆರು ತಿಂಗಳ ಅಧಿಯಲ್ಲಿ ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಖಾಲಿಯಿರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಸಮರೋಪಾದಿಯಾಗಿ ಭರ್ತಿ ಮಾಡಬೇಕು ಎಂದು ಮಹತ್ವದ ತೀರ್ಪು ನೀಡಿದೆ.

ಬೆಂಗಳೂರಿನ ಪಟ್ಟಂದೂರು ಅಗ್ರಹಾರದ ನಿವಾಸಿ ಎಂ. ಮಂಜುನಾಥ್ ಪ್ರಸಾದ್ ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ತೀರ್ಪು ಮಾಡಿದೆ.

ಹೊರಗುತ್ತಿಗೆ ನೌಕರರಿಗೂ ಕಾಯಮಾತಿ ಭಾಗ್ಯ..!

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದಲಿತ ಸಮುದಾಯಗಳಿಗೆ ಮೀಸಲಾಗಿರುವ ಹುದ್ದೆಗಳನ್ನು ತಪ್ಪದೇ ಭರ್ತಿ ಮಾಡಬೇಕು. ಭರ್ತಿ ಮಾಡದೆ ಖಾಲಿ ಉಳಿಸುವುದುಕೊಳ್ಳುವುದು ಸಂವಿಧಾನವು ಈ ಸಮುದಾಯಗಳಿಗೆ ಕಲ್ಪಿಸಿರುವ ಸೌಲಭ್ಯಗಳನ್ನು ನಿರಾಕರಿಸಿದಂತೆ ಆಗುತ್ತದೆ. ಆದ್ದರಿಂದ ರಾಜ್ಯ ಸರ್ಕಾರದ ಎಲ್ಲ ಇಲಾಖೆ ಮತ್ತು ಸಂಸ್ಥೆಗಳಲ್ಲಿ ಖಾಲಿಯಿರುವ ಬ್ಯಾಕ್‌ಲಾಕ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಮುಂದಿನ ಆರು ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ಆದೇಶದಲ್ಲಿ ನ್ಯಾಯಪೀಠ ತಿಳಿಸಿದೆ.

ಪ್ರಕರಣದ ಹಿನ್ನೆಲೆ:

ಬೆಂಗಳೂರಿನ ವೈದ್ಯಕೀಯ ಮಹಾ ವಿದ್ಯಾಲಯದಲ್ಲಿರುವ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡುವಂತೆ ಕೋರಿ ಮಂಜುನಾಥ್‌ ಪ್ರಸಾದ್‌ ಹೈಕೋರ್ಟ್‌ಗೆ ತರಕಾರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಏಕ ಸದಸ್ಯ ಪೀಠ, ಈ ಸಂಬಂಧ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಮನವಿ ಸಲ್ಲಿಸುವಂತೆ ಸೂಚನೆ ನೀಡಿ ಅರ್ಜಿ ಇತ್ಯರ್ಥ ಪಡಿಸಿತ್ತು. ಆದರೆ, ಅರ್ಜಿದಾರರ ಮನವಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಪರಿಹಾರ ಕಲ್ಪಿಸಿರಲಿಲ್ಲ. ಇದರಿಂದ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಬ್ಯಾಕ್ ಲಾಗ್ ಹುದ್ದೆಗಳ ಮೀಸಲು ನೇಮಕಾತಿಗಳಾಗಿವೆ. ಈ ಹುದ್ದೆಗಳನ್ನ ಭರ್ತಿ ಮಾಡದೆ ಖಾಲಿ ಉಳಿಸುವುದು ಸಂವಿಧಾನದ ಪರಿಚ್ಛೇದ 14 (ಸಮಾನತೆ) ಮತ್ತು 16 (ರಾಜ್ಯಗಳ ಉದ್ಯೋಗವಕಾಶದಲ್ಲಿ ಸಮಾನ ಅವಕಾಶ ಕಲ್ಪಿಸುವ) ಉಲ್ಲಂಘನೆಯಾಗಲಿದೆ ಎಂದು ವಾದ ಮಂಡಿಸಿದ್ದರು.

ಸಾರಿಗೆ ಇಲಾಖೆ 13 ಸಾವಿರ ಉದ್ಯೋಗ ನೇಮಕಾತಿಗೆ ಶೀಘ್ರ ಚಾಲನೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಸರ್ಕಾರದ ಪರ ವಕೀಲರು ವಾದ ಮಂಡಿಸಿ, ಏಕ ಸದಸ್ಯ ಪೀಠ ನೀಡಿರುವ ಆದೇಶ ಸಮಂಜಸವಾಗಿದ್ದು, ಮೇಲ್ಮನವಿ ಅರ್ಜಿ ವಜಾಗೊಳಿಸಬೇಕು ಎಂದು ಕೋರಿದ್ದರು.

ಸರ್ಕಾರಿ ವಕೀಲರ ವಾದವನ್ನು ತೀವ್ರವಾಗಿ ಆಕ್ಷೇಪಿಸಿದ ವಿಭಾಗೀಯ ಪೀಠ, ರಾಜ್ಯ ಸರ್ಕಾರ ರಚನೆ ಮಾಡಿದ್ದ ಸಂಪುಟ ಉಪ ಸಮಿತಿಯು ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಈ ಹಿಂದೆ ಹೈಕೋರ್ಟ್ ನೀಡಿದ್ದ ಆದೇಶದಂತೆ ಎಲ್ಲ ಇಲಾಖೆಗಳಿಗೆ ಪತ್ರ ಬರೆದು ಹುದ್ದೆಗಳ ಭರ್ತಿಗೆ ನಿರ್ದೇಶನ ನೀಡಿದೆ. ಖಾಲಿ ಹುದ್ದೆಗಳನ್ನು ಮುಂದುವರೆಸುವ ಸಂಬಂಧ ಅಂಕಿ ಅಂಶಗಳನ್ನು ನೋಡಿದ ಬಳಿಕವೂ ಮೇಲ್ಮನವಿ ವಜಾಗೊಳಿಸುವಂತೆ ಸರ್ಕಾರಿ ವಕೀಲರ ವಾದಿಸಿರುವುದು ವಿಚಿತ್ರವಾಗಿದೆ. ನೊಂದ ನಾಗರಿಕ ನ್ಯಾಯಲಯದಲ್ಲಿ ಕಾನೂನು ಹೋರಾಟ ನಡೆಸಿ ಗೆಲುವು ಸಾಧಿಸಿದಲ್ಲಿ ಸರ್ಕಾರ ಸಂತೋಷ ಪಡಬೇಕು. ಹಾಗಾಗಿ, ಪ್ರಕರಣದಲ್ಲಿ ನ್ಯಾಯಾಲಯವು ಮಧ್ಯಪ್ರವೇಶ ಮಾಡಿ ಬ್ಯಾಕ್‌ಲಾಗ್‌ ಹುದ್ದೆಗಳ ಭರ್ತಿಗೆ ಆದೇಶಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ.

Latest Videos