Asianet Suvarna News Asianet Suvarna News

ಸರ್ಕಾರಿ ನೌಕರರಿಗೆ ಶೇ.3.75 ತುಟ್ಟಿ ಭತ್ಯೆ ಹೆಚ್ಚಿಸಿದ ಸರ್ಕಾರ; ಜನವರಿಯಿಂದಲೇ ಪೂರ್ವಾನ್ವಯ!

ಲೋಕಸಭಾ ಚುನಾವಣೆಯ ಹೊಸ್ತಿಲಿನಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಜನವರಿಯಿಂದ ಪೂರ್ವಾನ್ವಯ ಆಗುವಂತೆ ಶೇ.3.75 ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.

Government employees dearness allowance 3 75 percent increased Retrospective from January 1 sat
Author
First Published Mar 12, 2024, 4:04 PM IST

ಬೆಂಗಳೂರು (ಮಾ.12): ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಸಿಕ್ಕಿದೆ. 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 38.75 ರಿಂದ ಶೇಕಡ 42.5 ಗೆ ಪರಿಷ್ಕರಿಸಿ ಆದೇಶ ಹೊರಡಿಸಲಾಗಿದೆ.

ಈ ತುಟ್ಟಿಭತ್ಯೆ ಹೆಚ್ಚಳವು ಅರ್ಹ ಸರ್ಕಾರಿ ನೌಕರರಿಗೆ ಜ.1ರಿಂದಲೇ ಪೂರ್ವಾನ್ವಯ ಆಗುವಂತೆ ಆದೇಶ ಹೊರಡಿಸಲಾಗಿದೆ. ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಸಹ 2024ರ ಜ.1ರಿಂದಲೇ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನದ ಪ್ರಸಕ್ತ ಶೇಕಡ 38.75 ರಿಂದ ಶೇಕಡ 42.5 ಕ್ಕೆ ಹೆಚ್ಚಿಸಿ ಮಂಜೂರು ಮಾಡಲಾಗಿದೆ. ಇನ್ನು ತುಟ್ಟಿ ಭತ್ಯೆ ಹೆಚ್ಚಳದಿಂದ ರಾಜ್ಯ ಸರ್ಕಾರ ಬೊಕ್ಕಸಕ್ಕೆ 1792.71 ಕೋಟಿ ರೂ. ಹೊರೆಯಾಗಲಿದೆ ಎಂದು ಅಂದಾಜಿಸಲಾಗಿದೆ.

ಚುನಾವಣೆ ಹೊಸ್ತಿಲಲ್ಲಿ ಕಾಲರ್ ಹಿಡಿದು ಹೊರಗೆ ತಳ್ಳಿದ್ರೆ ಬೇಸರ ಆಗ್ತದೆ; ಸಂಸದ ಸದಾನಂದಗೌಡ ಬೇಸರ

ತುಟ್ಟಿಭತ್ಯೆಯ ಉದ್ದೇಶಕ್ಕಾಗಿ 'ಮೂಲ ವೇತನ' ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ, (ಅ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿ. (ಅ) 2018ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳ ನಿಯಮ 3(ಸಿ)ಯನ್ನು ಓದಿಕೊಂಡು 7ನೇ ನಿಯಮದ (3)ನೇ ಉಪನಿಯಮದ ಮೇರೆಗೆ ಅವನಿಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ, ಆ ವೈಯಕ್ತಿಕ ವೇತನ ಹಾಗೂ (ಇ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ಇದ್ದಲ್ಲಿ, ಅವುಗಳು ಸೇರುತ್ತವೆ ಎಂದು ತಿಳಿಸಲಾಗಿದೆ.

ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ವೇತನದಾರರಿಗೂ ಸಹ ಈ ಆದೇಶಗಳು ಅನ್ವಯಿಸುತ್ತವೆ. ಮೂಲ ವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ. ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ.

ಕೆಂಪೇಗೌಡ ಏರ್ಪೋರ್ಟಲ್ಲಿ ಇಂದಿರಾ ಕ್ಯಾಂಟೀನ್‌ ಶುರು: ಮುಖ್ಯಮಂತ್ರಿ ಸಿದ್ದರಾಮಯ್ಯ

ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜಿಪಿಸಿ ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು. ಈ ಆದೇಶದ ಮೇರೆಗೆ ಲಭ್ಯವಿರುವ ತುಟ್ಟಿಭತ್ಯೆಯನ್ನು ನಗದಾಗಿ ಪಾವತಿ ಮಾಡುವುದು. ತುಟ್ಟಿಭತ್ಯೆಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ 50 ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸತಕ್ಕದ್ದು ಮತ್ತು 50 ಪೈಸೆಗಿಂತ ಕಡಿಮೆ ಇರುವ ಭಿನ್ನಾಂಕಗಳನ್ನು ಕಡೆಗಣಿಸತಕ್ಕದ್ದು ಎಂದು ತಿಳಿಸಲಾಗಿದೆ.

ತುಟ್ಟಿಭತ್ಯೆ ಬಾಕಿ ಮೊತ್ತವನ್ನು, 2024ರ ಮಾರ್ಚ್ ಮಾಹೆಯ ವೇತನ ಬಟವಾಡೆಗೂ ಮೊದಲು ಪಾವತಿ ಮಾಡತಕ್ಕದ್ದಲ್ಲ. ತುಟ್ಟಿಭತ್ಯೆಯನ್ನು ಸಂಭಾವನೆಯ ವಿಶಿಷ್ಟ ಅಂಶವಾಗಿ ತೋರಿಸುವುದು ಮತ್ತು ಯಾವುದೇ ಉದ್ದೇಶಕ್ಕಾಗಿ ಇದನ್ನು ವೇತನ ಎಂದು ಪರಿಗಣಿಸಲಾಗುವುದಿಲ್ಲ ಎಂದು ಆದೇಶ ಹೊರಡಸಲಾಗಿದೆ.

Follow Us:
Download App:
  • android
  • ios