Asianet Suvarna News Asianet Suvarna News

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ದೇವೇಗೌಡ, ಎಚ್‌ಡಿಕೆ ತಿರುಚಿದ ಫೋಟೋ, ವಿಡಿಯೋ ಪ್ರಸಾರಕ್ಕೆ ತಡೆ

ದೇವೇಗೌಡ ಮತ್ತು ಎಚ್.ಡಿ. ಕುಮಾರಸ್ವಾಮಿ ಸಲ್ಲಿಸಿದ್ದ ಮೂಲ ದಾವೆ ವಿಚಾರಣೆ ನಡೆಸಿದ ನ್ಯಾಯಾಧೀಶ ಎಚ್.ಎ. ಮೋಹನ್ ಅವರು, ಒಟ್ಟು 89 ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾಜ್ಞೆ ಆದೇಶ ಹೊರಡಿಸಿದೆ. 

HD Devegowda, HD Kumaraswamy Distorted Photo Video Broadcast Banned Says Court grg
Author
First Published May 7, 2024, 12:16 PM IST

ಬೆಂಗಳೂರು(ಮೇ.07):  ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ವಿರುದ್ಧ ನಕಲಿ ಸುದ್ದಿ, ಚಿತ್ರ ಅಥವಾ ವಿಡಿಯೋ ತಿರುಚಿ ಪ್ರಸಾರ/ಪ್ರಕಟಿಸದಂತೆ 34ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ ನ್ಯಾಯಾಲಯ, ಮಾಧ್ಯಮಗಳ ವಿರುದ್ಧ ತಾತ್ಕಾಲಿಕ ಪ್ರತಿಬಂಧಕಾಜ್ಞೆ ಆದೇಶ ಹೊರಡಿಸಿದೆ. 

ದೇವೇಗೌಡ ಮತ್ತು ಎಚ್.ಡಿ. ಕುಮಾರಸ್ವಾಮಿ ಸಲ್ಲಿಸಿದ್ದ ಮೂಲ ದಾವೆ ವಿಚಾರಣೆ ನಡೆಸಿದ ನ್ಯಾಯಾಧೀಶ ಎಚ್.ಎ. ಮೋಹನ್ ಅವರು, ಒಟ್ಟು 89 ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾಜ್ಞೆ ಆದೇಶ ಹೊರಡಿಸಿದೆ. 

ಸಂಸದ ಪ್ರಜ್ವಲ್‌ರಂಥವರ ಬಗ್ಗೆ ಸಹಿಷ್ಣುತೆ ಇರಬಾರದು, ಕಠಿಣ ಕ್ರಮ ಕೈಗೊಳ್ಳಬೇಕು : ಮೋದಿ

ಇದರಲ್ಲಿ ಮುದ್ರಣ, ವಿದ್ಯುನ್ಮಾನ ಮತ್ತು ಸಾಮಾಜಿಕ ಮಾಧ್ಯಮಗಳೂ ಸೇರಿವೆ. ಸಾರ್ವಜನಿಕವಾಗಿ ಗುರುತರವಾದ ಸಾಕ್ಷ್ಯದ ಕೊರತೆ ನಡುವೆ ದಾವೆದಾರರ ಫೋಟೋ ತಿರುಚಿ, ಉದ್ದೇಶಪೂರ್ವಕವಾಗಿ ಅವರ ವರ್ಚಸ್ಸಿಗೆ ಹಾನಿಯಾಗುವಂಥ ಸುಳ್ಳು ಸುದ್ದಿ ಪ್ರಕಟಿಸದಂತೆ ಆದೇಶಿಸಿ ವಿಚಾರಣೆಯನ್ನು ಮೇ 29ಕ್ಕೆ ಮುಂದೂಡಲಾಗಿದೆ.

Follow Us:
Download App:
  • android
  • ios