Asianet Suvarna News Asianet Suvarna News

Breaking: ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ

ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಕಾಲೇಜು ಆವರಣದಲ್ಲಿ ಕೊಲೆ ಮಾಡಿದ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲು ಸರ್ಕಾರ ಕ್ರಮ ಕೈಗೊಂಡಿದೆ.

Karnataka govt set up special court for Hubballi student Neha Hiremath murder case hearing sat
Author
First Published Apr 22, 2024, 8:56 PM IST

ಬೆಂಗಳೂರು (ಏ.22): ಇಡೀ ರಾಜ್ಯಾದ್ಯಂತ ಸಾರ್ವಜನಿಕವಾಗಿ ಆಕ್ರೋಶಕ್ಕೆ ಒಳಗಾದ ಪ್ರಕರಣವಾದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರನ್ನು ಕಾಲೇಜು ಆವರಣದಲ್ಲಿ ಕೊಲೆ ಮಾಡಿದ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲು ಸರ್ಕಾರ ಕ್ರಮ ಕೈಗೊಂಡಿದೆ.

ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ಕುರಿತಂತೆ ರಾಜ್ಯಾದ್ಯಂತ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದಿಂದ ಈ ಕುಮಾರಿ ನೇಹಾ ಹೀನಾಯ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ಮಾಡಿದ್ದಾರೆ. ಈ ವೇಳೆ ಸರ್ಕಾರದಿಂದ ವಿಶೇಷ ನ್ಯಾಯಾಲಯವನ್ನು ಸ್ಥಾಪನೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರು ಕೂಡಲೇ ವಿಶೇಷ ನ್ಯಾಯಾಲಯ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಕಾನೂನು ಸಚಿವ ಎಚ್.ಕೆ. ಪಾಟೀಲ್ ಆದೇಶ ನೀಡಿದ್ದಾರೆ.

ಜನಸಂಖ್ಯೆ ಹೆಚ್ಚಿಸುವ ಲವ್ ಜಿಹಾದ್‌ಗೆ ಒಪ್ಪದ ನೇಹಾಳನ್ನು ಫಯಾಜ್ ಕೊಂದಿದ್ದಾನೆ; ಪ್ರಮೋದ್ ಮುತಾಲಿಕ್ ಆರೋಪ

ಇನ್ನು ಸುಪ್ರೀಂ ಕೋರ್ಟ್‌ನಿಂದ ಮಹಿಳೆಯರ ವಿರುದ್ಧದ ಹೀನಾಯ ಅಪರಾಧ ಪ್ರಕರಣಗಳಲ್ಲಿ ನೀಡಿರುವ ಮಾರ್ಗದರ್ಶನಗಳನ್ನು ಪರಿಶೀಲಿಸಿ ಹಾಗೂ ಅಪರಾಧ ಪ್ರಕ್ರಿಯಾ ಸಂಹಿತೆ ಹಾಗೂ ಐಪಿಸಿ ಸೆಕ್ಷನ್‌ನಲ್ಲಿ ಮಾಡಲಾಗಿರುವ ತಿದ್ದುಪಡಿಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ವಿಶೇಷ ನ್ಯಾಯಾಲಯ ಸ್ಥಾಪನೆಗಿರುವ ಅವಕಾಶಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಕುಮಾರಿ ನೇಹಾಳನನ್ನು ಬರ್ಬರ ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಜನರ ಮನಸ್ಸಿನಿಂದ ಈ ಘಟನೆ ಮಾಡುವ ಮುನ್ನವೇ ಕೊಲೆ ಅಪರಾಧಿಗೆ ಸೂಕ್ರ ಶಿಕ್ಷೆಯಾಗಬೇಕೆಂದು ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ಹಾಗೂ ಒತ್ತಾಯಗಳು ಸರ್ಕಾರಕ್ಕೆ ಸಲ್ಲಿಕೆಯಾಗಿವೆ. ಮುಖ್ಯವಾಗಿ ನೇಹಾ ಹಿರೇಮಠ ಪ್ರಕರಣವು ಸಾಮಾಜಿಕ ಮತ್ತು ವಿದ್ಯಾರ್ಥಿಗಳ ಮೇಲೆ ತೀವ್ರ ಪರಿಣಾಮ ಬೀರಿರುವುದರಿಂದ ವಿಶೇಷ ನ್ಯಾಯಾಲಯವನ್ನು ಸರ್ಕಾರದಿಂದ ಸ್ಥಾಪನೆ ಮಾಡಲಾಗುತ್ತಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ. ಪಾಟೀಲರು ಸ್ಪಷ್ಟೀಕರಣ ನೀಡಿದ್ದಾರೆ.

Follow Us:
Download App:
  • android
  • ios