Asianet Suvarna News Asianet Suvarna News

ರಾಜ್ಯದ ಡ್ಯಾಂಗಳಲ್ಲಿ ಈಗ ಉಳಿದಿರೋದು ಕೇವಲ 10% ನೀರು!

ಹಲವು ವರ್ಷಗಳ ನಂತರ ರಾಜ್ಯದ ಜಲಾಶಯಗಳಲ್ಲಿ ಕಡಿಮೆ ಪ್ರಮಾಣದ ನೀರಿನ ಶೇಖರಣೆ ಇದ್ದು, ಸಕಾಲದಲ್ಲಿ ಮಳೆಯಾಗದಿದ್ದರೆ ರಾಜ್ಯದ ನೀರಿನ ಸಮಸ್ಯೆ ಮತ್ತಷ್ಟು ಗಂಭೀರವಾಗುವ ಲಕ್ಷಣಗಳು ಗೋಚರಿಸುತ್ತಿವೆ. 

Only 10 Percent Water is left in the dams of Karnataka gvd
Author
First Published Apr 30, 2024, 8:25 AM IST

ಬೆಂಗಳೂರು (ಏ.30): ಮಳೆ ಕೊರತೆ, ಬಿಸಿಲಿನ ಪ್ರಮಾಣ ಹೆಚ್ಚಳದಿಂದಾಗಿ ರಾಜ್ಯದಲ್ಲಿನ ಜಲಾಶಯಗಳಲ್ಲಿ ನೀರಿನ ಸಂಗ್ರಹ ಭಾರಿ ಪ್ರಮಾಣದಲ್ಲಿ ಕುಸಿತವಾಗಿದ್ದು, ಕೇವಲ ಶೇ. 10.83ರಷ್ಟು ಮಾತ್ರ ನೀರು ಇದೆ. ಹಲವು ವರ್ಷಗಳ ನಂತರ ರಾಜ್ಯದ ಜಲಾಶಯಗಳಲ್ಲಿ ಕಡಿಮೆ ಪ್ರಮಾಣದ ನೀರಿನ ಶೇಖರಣೆ ಇದ್ದು, ಸಕಾಲದಲ್ಲಿ ಮಳೆಯಾಗದಿದ್ದರೆ ರಾಜ್ಯದ ನೀರಿನ ಸಮಸ್ಯೆ ಮತ್ತಷ್ಟು ಗಂಭೀರವಾಗುವ ಲಕ್ಷಣಗಳು ಗೋಚರಿಸುತ್ತಿವೆ. 

ರಾಜ್ಯದಲ್ಲಿನ 22 ಜಲಾಶಯಗಳಲ್ಲಿ ಸದ್ಯ ಡೆಡ್‌ ಸ್ಟೋರೇಜ್‌ ಹೊರತುಪಡಿಸಿ 57.62 ಟಿಎಂಸಿ ನೀರು ಮಾತ್ರ ಉಳಿದಿದೆ. ಅದರಲ್ಲಿ ಕೃಷ್ಣಾ ಕೊಳ್ಳದ ಜಲಾಶಯಗಳಲ್ಲಿಯೇ 47.19 ಟಿಎಂಸಿ ನೀರು ಶೇಖರಣೆಯಾಗಿದೆ. ಆದರೆ, ಬೆಂಗಳೂರು ಸೇರಿದಂತೆ ನಾಲ್ಕೈದು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ಮಾತ್ರ 10.43 ಟಿಎಂಸಿ ನೀರು ಶೇಖರಣೆಯಾಗಿದ್ದು, ಮುಂಗಾರು ಮಳೆ ಆರಂಭವಾಗುವವರೆಗೆ ಆ ನೀರಿನಲ್ಲಿಯೇ ಜಿಲ್ಲೆಗಳಿಗೆ ನೀರು ಪೂರೈಸಬೇಕಾಗಿದೆ.

ಪ್ರಜ್ವಲ್ ಪರ ಪ್ರಚಾರ ಮಾಡಿದ್ದ ಮೋದಿ ಈಗೇನು ಹೇಳುತ್ತಾರೆ: ಪ್ರಿಯಾಂಕಾ ಗಾಂಧಿ

ಕಳೆದ ವರ್ಷಕ್ಕಿಂತ 45.77 ಟಿಎಂಸಿ ಕಡಿಮೆ ನೀರು: ರಾಜ್ಯದ ಜಲಾಶಯಗಳಲ್ಲಿ ಕಳೆದ ವರ್ಷಕ್ಕಿಂತ ಶೇ. 45ರಿಂದ 46ರಷ್ಟು ನೀರು ಕಡಿಮೆ ಶೇಖರಣೆಯಾಗಿದೆ. 2023ರ ಏಪ್ರಿಲ್‌ 29ರ ವೇಳೆಗೆ ರಾಜ್ಯದ ಜಲಾಶಯಗಳಲ್ಲಿ ಡೆಡ್‌ ಸ್ಟೋರೇಜ್‌ ಹೊರತುಪಡಿಸಿ 103.39ರಷ್ಟು ನೀರು ಶೇಖರಣೆಯಾಗಿತ್ತು. ಕಳೆದ ವರ್ಷಕ್ಕಿಂತ ಈ ವರ್ಷ 45.77 ಟಿಎಂಸಿ ಕಡಿಮೆ ನೀರು ಶೇಖರಣೆಯಾಗಿದೆ. 2022ರ ಇದೇ ಅವಧಿಯಲ್ಲಿ 124.99 ಟಿಎಂಸಿ ನೀರು ಶೇಖರಣೆಯಾಗಿತ್ತು.

ಅಧಿಕಾರಿಗಳ ಅಮಾನತಿಗೆ ಒತ್ತಾಯ: ತಾಲೂಕಿನ ಮುದೇನೂರ ತುಂಗಭದ್ರಾ ನದಿ ಜಾಕ್‌ವೆಲ್ ಬಳಿ ನಗರಕ್ಕೆ ನೀರು ಪೂರೈಸುವ ಸಲುವಾಗಿ ಮರಳಿನ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ಸಮರ್ಪಕವಾಗಿ ಮಾಡದ ನಗರಸಭೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರೈತ ಸಂಘಟನೆಗಳ ಮುಖಂಡರು ಉಪ ತಹಸೀಲ್ದಾರ್ ಮೋಹನ ಕಡೂರ ಮೂಲಕ ಪ್ರಾದೇಶಿಕ ಕಮೀಷನರ್ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಸಮಯದಲ್ಲಿ ರೈತ ಮುಖಂಡ ರವೀಂದ್ರಗೌಡ ಪಾಟೀಲ ಮಾತನಾಡಿ, ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಕಡಿಮೆಯಾದ ಹಿನ್ನೆಲೆಯಲ್ಲಿ ನಗರಕ್ಕೆ ನೀರು ಪೂರೈಕೆಯನ್ನು ಸ್ಥಗಿತಗೊಳಿಸಲಾಗಿತ್ತು. 

ಪ್ರಜ್ವಲ್‌ ರೇವಣ್ಣ, ಎನ್‌ಡಿಎ ವಿರುದ್ಧ ರಾಜ್ಯದಲ್ಲಿ ಭುಗಿಲೆದ್ದ ಆಕ್ರೋಶ: ಸಾಮಾಜಿಕ ಜಾಲತಾಣದಲ್ಲೂ ಟೀಕೆ

ಆಗ ರೈತ ಸಂಘಟನೆ ವತಿಯಿಂದ ತಾಲೂಕಿನ ಮಾಕನೂರ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗಿತ್ತು. ಇದಕ್ಕೆ ಸ್ಪಂದಿಸಿದ ಸರ್ಕಾರ ಭದ್ರಾ ಡ್ಯಾಂನಿಂದ ಎರಡು ಟಿಎಂಸಿ ನೀರನ್ನು ತುಂಗಭದ್ರಾ ನದಿಗೆ ಹರಿಸಿತ್ತು. ಈ ನೀರನ್ನು ಎರಡು ತಿಂಗಳಿಗೆ ಸಾಕಾಗುಷ್ಟು ಮರಳಿನ ತಡೆಗೋಡೆ ನಿರ್ಮಿಸಲು ಜಿಲ್ಲಾಡಳಿತ ಸೂಚನೆ ನೀಡಿತ್ತು. ಅದರಂತೆ ಲಕ್ಷಾಂತರ ರು. ಖರ್ಚು ಮಾಡಿ ತಡೆಗೋಡೆ ನಿರ್ಮಿಸಲಾಗಿತ್ತು. ಆದರೆ ನಗರಸಭೆಯ ತಾಂತ್ರಿಕ ವರ್ಗದವರ ನಿರ್ಲಕ್ಷ್ಯತನ, ಅವೈಜ್ಞಾನಿಕ ನೀತಿ, ಕಳಪೆ ಕಾಮಗಾರಿಯಿಂದ ನೀರು ಸಂಗ್ರಹವಾಗದೆ ಸಂಪೂರ್ಣ ನೀರು ಪೋಲಾಯಿತು. ಹೀಗಾಗಿ ಪುನಃ ನಗರಕ್ಕೆ ನೀರು ಪೂರೈಕೆ ಸ್ಥಗಿತಗೊಳಿಸಬೇಕಾಯಿತು. ಆದ್ದರಿಂದ ಇದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

Follow Us:
Download App:
  • android
  • ios