May 9, 2025, 1:01 PM IST
2028ರವರೆಗೂ ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ. ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ, ಅಧ್ಯಕ್ಷ ಸ್ಥಾನದಲ್ಲಿ ಡಿ.ಕೆ.ಶಿವಕುಮಾರ್ ಇದ್ದು ಕಾಂಗ್ರೆಸ್ ಸರ್ಕಾರ ಅಧಿಕಾರ ನಡೆಸಲಿದೆ ಎಂದು ಸಿದ್ದು ಪೂರ್ಣಾವಧಿ ಸಿಎಂ ಎಂಬ ಕೂಗನ್ನು ಸಚಿವ ಭೈರತಿ ಸುರೇಶ್ ಮತ್ತೆ ಮುಖ್ಯವಾಹಿನಿಗೆ ತಂದರು.
May 9, 2025, 10:17 AM IST
ಪಹಲ್ಗಾಂನಲ್ಲಿ ನಡೆದ ಭಯೋತ್ಪಾದಕ ದಾಳಿ ಬಳಿಕ ಭಾರತೀಯ ಸೇನಾ ಪಡೆ ನಡೆಸಿದ ಆಪರೇಷನ್ ಸಿಂದೂರ್ ಕಾರ್ಯಾಚರಣೆಯು ಪ್ರಧಾನಿ ನರೇಂದ್ರ ಮೋದಿ ನಾಯಕತ್ವಕ್ಕೆ ಕೈಗನ್ನಡಿಯಾಗಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
May 9, 2025, 9:00 AM IST
ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
May 9, 2025, 7:09 AM IST
ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ವರದಿ (ಜಾತಿಗಣತಿ) ವಿಚಾರವಾಗಿ ಶುಕ್ರವಾರ ಮಧ್ಯಾಹ್ನ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸಚಿವರ ಅಭಿಪ್ರಾಯ ಲಿಖಿತವಾಗಿ ಸಲ್ಲಿಕೆಯಾಗಲಿದ್ದು, ಕೇಂದ್ರ ಸರ್ಕಾರವೂ ಜಾತಿಗಣತಿ ಘೋಷಿಸಿರುವುದರಿಂದ ರಾಜ್ಯದ ಜಾತಿಗಣತಿ ವರದಿ ಭವಿಷ್ಯದ ಬಗ್ಗೆ ಮಹತ್ವದ ಚರ್ಚೆಯಾಗುವ ನಿರೀಕ್ಷೆಯಿದೆ.
May 9, 2025, 6:59 AM IST
ಪಹಲ್ಗಾಂ ಉಗ್ರರು ನಡೆಸಿದ ನರಮೇಧಕ್ಕೆ ಪ್ರತೀಕಾರವಾಗಿ ‘ಆಪರೇಷನ್ ಸಿಂದೂರ’ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಯೋಧರಿಗೆ ಬೆಂಬಲ ಸೂಚಿಸಲು ರಾಜ್ಯ ಕಾಂಗ್ರೆಸ್ ವತಿಯಿಂದ ಶುಕ್ರವಾರ ಬೆಳಗ್ಗೆ 9.30 ಗಂಟೆಗೆ ಬೆಂಗಳೂರಿನಲ್ಲಿ ‘ತಿರಂಗಾ ಯಾತ್ರೆ’ ಹಮ್ಮಿಕೊಳ್ಳಲಾಗಿದೆ.
May 8, 2025, 8:39 AM IST
ದೇಶದ ಅಮಾಯಕರ ಮೇಲೆ ಉಗ್ರರರು ನಡೆಸಿದ ಕೃತ್ಯಕ್ಕೆ ನಮ್ಮ ಸೈನಿಕರು ತಕ್ಕ ಪ್ರತ್ಯುತ್ತರ ನೀಡಿದ್ದಾರೆ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಹೇಳಿದರು.
May 8, 2025, 7:08 AM IST
ಬೆಂಗಳೂರು: ರಾಜ್ಯದ ಅಣೆಕಟ್ಟುಗಳಿಗೆ ಭದ್ರತೆ ಒದಗಿಸುವಂತೆ ರಾಜ್ಯ ಸರ್ಕಾರ ತುರ್ತು ಆದೇಶವನ್ನು ಹೊರಡಿಸಿದೆ. ರಾಷ್ಟ್ರದಲ್ಲಾಗುತ್ತಿರುವ ಪ್ರಸ್ತುತ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳಿಗೆ ಭದ್ರತೆ ಒದಗಿಸಲು ನಿರ್ದೇಶನ ನೀಡಲಾಗಿದೆ. ರಾಜ್ಯ ಪೊಲೀಸ್ ಇಲಾಖೆಯ ಸಮನ್ವಯದೊಂದಿಗೆ ಹೆಚ್ಚಿನ ಭದ್ರತೆ ಒದಗಿಸಲು ಆದೇಶಿದೆ. ತಮ್ಮ ನಿಗಮ ಮತ್ತು ವಲಯ ವ್ಯಾಪ್ತಿಯಲ್ಲಿ ಬರುವ ಅಣೆಕಟ್ಟುಗಳಿಗೆ ಭದ್ರತೆ ನೀಡಬೇಕು ಮತ್ತು ತಕ್ಷಣ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿ ನೇಮ ಮಾಡಿಕೊಳ್ಳಬೇಕು. ಒಂದು ವೇಳೆ ಭದ್ರತೆಯಲ್ಲಿ ಯಾವುದೇ ಚ್ಯುತಿಯಾದಲ್ಲಿ, ಸಂಬಂಧಪಟ್ಟ ಯೋಜನಾಧಿಕಾರಿ ಅಥವಾ ಅಣೆಕಟ್ಟು ಅಧಿಕಾರಿಗಳೇ ಹೊಣೆಗಾರರು ಎಂದು ಸೂಚನೆ ನೀಡಲಾಗಿದೆ. ತಕ್ಷಣದಿಂದಲೇ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.
May 8, 2025, 5:46 AM IST
ದೇಶದ ಯೋಧರು ಉಗ್ರರ ಮೇಲೆ ನಡೆಸಿದ ದಾಳಿ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್‌ನಿಂದ ಬುಧವಾರ ರಾಯಚೂರಿನಲ್ಲಿ ಹಮ್ಮಿಕೊಂಡಿದ್ದ ಬೆಲೆ ಏರಿಕೆ ವಿರುದ್ಧದ ಪ್ರತಿಭಟನೆ ಹಾಗೂ ಸಂವಿಧಾನ ಉಳಿಸಿ ರ್‍ಯಾಲಿ ರದ್ದುಗೊಳಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
May 8, 2025, 5:38 AM IST
ಪಹಲ್ಗಾಂ ಭಯೋತ್ಪಾದನಾ ದಾಳಿಗೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಹೆಮ್ಮೆ ತರುವಂಥದ್ದು. ಇದು ಭಯೋತ್ಪಾದನೆ ಬೆಂಬಲಿಸುವ ದೇಶಗಳಿಗೆ ಎಚ್ಚರಿಕೆ ಗಂಟೆ ಎಂದು ಸ್ಪೀಕರ್ ಯು.ಟಿ ಖಾದರ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
May 8, 2025, 12:35 AM IST
ಮೇ 8 ರಂದು ತುಮಕೂರಿನಲ್ಲಿ ಬಿಜೆಪಿ ನೇತೃತ್ವದಲ್ಲಿ ಬೃಹತ್ ಜನಾಕ್ರೋಶ ಪ್ರತಿಭಟನೆ ನಡೆಯಲಿದೆ. ಕಾಂಗ್ರೆಸ್ ಸರ್ಕಾರದ ದುರಾಡಳಿತ, ತೆರಿಗೆ ಹೆಚ್ಚಳ, ಭ್ರಷ್ಟಾಚಾರ ವಿರುದ್ಧ ಪಕ್ಷಾತೀತವಾಗಿ ಜನರು ಭಾಗವಹಿಸಲಿದ್ದಾರೆ.
May 8, 2025, 12:11 AM IST
ಪ್ಯಾರಾ ವೈದ್ಯಕೀಯ ಮಂಡಳಿಯ ಮಾರ್ಕ್ ಕಾರ್ಡ್ ಟೆಂಡರ್‌ನಲ್ಲಿ ಅಕ್ರಮ ನಡೆದಿದ್ದು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಇಲಾಖೆಯಲ್ಲಿ ಕಾನೂನು ಬಾಹಿರ ಟೆಂಡರ್‌ಗಳನ್ನು ಮಾಡಲಾಗುತ್ತಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಒಂದು ಮಾರ್ಕ್ಸ್ ಕಾರ್ಡ್ ಮುದ್ರಿಸಲು 9.45 ರು. ಇದ್ದ ಟೆಂಡರ್ ಅನ್ನು ಈಗ 91 ರು.ಗೆ ಏರಿಸಲಾಗಿದೆ ಎಂದು ದೂರಿದ್ದಾರೆ.
May 7, 2025, 6:13 PM IST
ಮುಂದಿನ ಸಿಎಂ ಯಾರೆಂದು ಕೇಳಿದ್ರೆ ಶಾಸಕ ಪ್ರದೀಪ್ ಈಶ್ವರ್ ಹೀಗೆ ಎಡವಟ್ಟು ಮಾಡೋದಾ? ಅವರು ಹೇಳಿದ್ದೇನು, ಆಗಿದ್ದೇನು?
May 7, 2025, 5:20 PM IST
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಶ್ಲಾಘಿಸಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಮತ್ತು ಭದ್ರತಾ ಪಡೆಗಳ ಪರ ನಿಲ್ಲುವುದಾಗಿ ತಿಳಿಸಿದ್ದಾರೆ.
May 7, 2025, 3:10 PM IST
ಭಾರತದ ಸೇನೆಯ ದಾಳಿಯ ನಂತರ ಕರ್ನಾಟಕ ಕಾಂಗ್ರೆಸ್‌ನ 'ಶಾಂತಿ' ಟ್ವೀಟ್‌ಗೆ ಆಕ್ರೋಶ ವ್ಯಕ್ತವಾಗಿದೆ. ಟ್ವೀಟ್‌ನ ಸಮಯ ಸರಿಯಾಗಿಲ್ಲ ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ. ರಾಷ್ಟ್ರೀಯ ಐಕ್ಯತೆ ವಿಚಾರದಲ್ಲಿ ರಾಜಕೀಯ ಬೇಡ ಎಂದಿದ್ದಾರೆ.
May 7, 2025, 1:55 PM IST
ಭಾರತೀಯ ಸೇನೆ ಆಪರೇಷನ್ ಸಿಂಧೂರ ನಡೆಸುವುದರ ಮೂಲಕ ಪಾಕಿಸ್ತಾನದಲ್ಲಿನ ಉಗ್ರರಿಗೆ ಸ್ಪಷ್ಟ ಸಂದೇಶ ರವಾನಿಸಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.