May 9, 2025, 1:01 PM IST
2028ರವರೆಗೂ ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ. ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ, ಅಧ್ಯಕ್ಷ ಸ್ಥಾನದಲ್ಲಿ ಡಿ.ಕೆ.ಶಿವಕುಮಾರ್ ಇದ್ದು ಕಾಂಗ್ರೆಸ್ ಸರ್ಕಾರ ಅಧಿಕಾರ ನಡೆಸಲಿದೆ ಎಂದು ಸಿದ್ದು ಪೂರ್ಣಾವಧಿ ಸಿಎಂ ಎಂಬ ಕೂಗನ್ನು ಸಚಿವ ಭೈರತಿ ಸುರೇಶ್ ಮತ್ತೆ ಮುಖ್ಯವಾಹಿನಿಗೆ ತಂದರು.
May 9, 2025, 9:00 AM IST
ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
May 9, 2025, 7:26 AM IST
ಬೆಂಗಳೂರು (ಮೇ.09): ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ವರದಿ (ಜಾತಿಗಣತಿ) ವಿಚಾರವಾಗಿ ಇಂದು ಮಧ್ಯಾಹ್ನ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸಚಿವರ ಅಭಿಪ್ರಾಯ ಲಿಖಿತವಾಗಿ ಸಲ್ಲಿಕೆಯಾಗಲಿದ್ದು, ಕೇಂದ್ರ ಸರ್ಕಾರವೂ ಜಾತಿಗಣತಿ ಘೋಷಿಸಿರುವುದರಿಂದ ರಾಜ್ಯದ ಜಾತಿಗಣತಿ ವರದಿ ಭವಿಷ್ಯದ ಬಗ್ಗೆ ಮಹತ್ವದ ಚರ್ಚೆಯಾಗುವ ನಿರೀಕ್ಷೆಯಿದೆ. ಜಾತಿಗಣತಿ ವರದಿ ಕುರಿತು ಸಚಿವ ಸಂಪುಟ ಸಭೆ ಯಾವ ನಿರ್ಧಾರ ಮಾಡಲಿದೆ ಎಂಬ ಬಗ್ಗೆ ಇದೀಗ ತೀವ್ರ ಕುತೂಹಲ ಮೂಡಿದೆ. ಏ.17 ರಂದು ನಡೆದ ಜಾತಿಗಣತಿ ವರದಿ ಕುರಿತು ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಕೆಲ ಸಚಿವರು ವರದಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು.
May 9, 2025, 7:09 AM IST
ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ವರದಿ (ಜಾತಿಗಣತಿ) ವಿಚಾರವಾಗಿ ಶುಕ್ರವಾರ ಮಧ್ಯಾಹ್ನ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸಚಿವರ ಅಭಿಪ್ರಾಯ ಲಿಖಿತವಾಗಿ ಸಲ್ಲಿಕೆಯಾಗಲಿದ್ದು, ಕೇಂದ್ರ ಸರ್ಕಾರವೂ ಜಾತಿಗಣತಿ ಘೋಷಿಸಿರುವುದರಿಂದ ರಾಜ್ಯದ ಜಾತಿಗಣತಿ ವರದಿ ಭವಿಷ್ಯದ ಬಗ್ಗೆ ಮಹತ್ವದ ಚರ್ಚೆಯಾಗುವ ನಿರೀಕ್ಷೆಯಿದೆ.
May 9, 2025, 6:59 AM IST
ಪಹಲ್ಗಾಂ ಉಗ್ರರು ನಡೆಸಿದ ನರಮೇಧಕ್ಕೆ ಪ್ರತೀಕಾರವಾಗಿ ‘ಆಪರೇಷನ್ ಸಿಂದೂರ’ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಯೋಧರಿಗೆ ಬೆಂಬಲ ಸೂಚಿಸಲು ರಾಜ್ಯ ಕಾಂಗ್ರೆಸ್ ವತಿಯಿಂದ ಶುಕ್ರವಾರ ಬೆಳಗ್ಗೆ 9.30 ಗಂಟೆಗೆ ಬೆಂಗಳೂರಿನಲ್ಲಿ ‘ತಿರಂಗಾ ಯಾತ್ರೆ’ ಹಮ್ಮಿಕೊಳ್ಳಲಾಗಿದೆ.
May 9, 2025, 3:17 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಸರ್ಕಾರವನ್ನು ಟೀಕಿಸಿದ್ದಾರೆ. ಅವರು ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಎತ್ತಿ ತೋರಿಸಿದರು ಮತ್ತು ಬಿಜೆಪಿಯನ್ನು ಜನ ವಿರೋಧಿ ಎಂದು ಕರೆದರು. ಅವರು ಮಂಡ್ಯದಲ್ಲಿ ಹೊಸ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಭರವಸೆ ನೀಡಿದರು.
May 8, 2025, 5:46 AM IST
ದೇಶದ ಯೋಧರು ಉಗ್ರರ ಮೇಲೆ ನಡೆಸಿದ ದಾಳಿ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್‌ನಿಂದ ಬುಧವಾರ ರಾಯಚೂರಿನಲ್ಲಿ ಹಮ್ಮಿಕೊಂಡಿದ್ದ ಬೆಲೆ ಏರಿಕೆ ವಿರುದ್ಧದ ಪ್ರತಿಭಟನೆ ಹಾಗೂ ಸಂವಿಧಾನ ಉಳಿಸಿ ರ್‍ಯಾಲಿ ರದ್ದುಗೊಳಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
May 8, 2025, 12:35 AM IST
ಮೇ 8 ರಂದು ತುಮಕೂರಿನಲ್ಲಿ ಬಿಜೆಪಿ ನೇತೃತ್ವದಲ್ಲಿ ಬೃಹತ್ ಜನಾಕ್ರೋಶ ಪ್ರತಿಭಟನೆ ನಡೆಯಲಿದೆ. ಕಾಂಗ್ರೆಸ್ ಸರ್ಕಾರದ ದುರಾಡಳಿತ, ತೆರಿಗೆ ಹೆಚ್ಚಳ, ಭ್ರಷ್ಟಾಚಾರ ವಿರುದ್ಧ ಪಕ್ಷಾತೀತವಾಗಿ ಜನರು ಭಾಗವಹಿಸಲಿದ್ದಾರೆ.
May 7, 2025, 1:26 PM IST
ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತ ಸರ್ಕಾರ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಹಣೆಗೆ ಸಿಂಧೂರ ಇಟ್ಟುಕೊಂಡು ಬಂದಿದ್ದು, ಚರ್ಚೆಗೆ ಗ್ರಾಸವಾಗಿದೆ.
May 7, 2025, 10:04 AM IST
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ನಾಯಕರು 'ಆಪರೇಷನ್ ಸಿಂಧೂರ್' ಕಾರ್ಯಾಚರಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
May 6, 2025, 11:33 AM IST
ರಾಜ್ಯ ಕ್ರೀಡಾ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕ್ರೀಡಾ ಸಮಿತಿಯನ್ನು ಕ್ರೀಡಾ ಪ್ರಾಧಿಕಾರವನ್ನಾಗಿ ಮಾಡಿದರೂ ಯಾವುದೇ ಪ್ರಗತಿ ಕಾಣದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
May 6, 2025, 10:18 AM IST
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಮಾಡುವ ಸಲುವಾಗಿ ರಾಜ್ಯ ಸರ್ಕಾರ ರಚಿಸಿರುವ ನ್ಯಾ. ನಾಗಮೋಹನ್‌ದಾಸ್ ನೇತೃತ್ವದ ಆಯೋಗ ಸೋಮವಾರದಿಂದ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ- 2025ಗೆ ಚಾಲನೆ ನೀಡಿದೆ.
May 6, 2025, 8:25 AM IST
ಕನ್ನಡ ಬೆಳೆಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದ್ದು, ಕನ್ನಡ ಕೃತಿಗಳು ಇಂಗ್ಲಿಷ್ ಸೇರಿ ವಿವಿಧ ಭಾಷೆಗೆ ತರ್ಜುಮೆ ಮಾಡಿ ಕನ್ನಡ ಸಾಹಿತ್ಯದ ಕಂಪು ಪಸರಿಸಲು ಸಹಕರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
May 6, 2025, 7:12 AM IST
ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸಲು ರಾಜ್ಯಾದ್ಯಂತ ಹಮ್ಮಿಕೊಂಡಿರುವ ಮನೆ-ಮನೆ ಸಮೀಕ್ಷೆ ಸೋಮವಾರ ಅಧಿಕೃತವಾಗಿ ಶುರುವಾಗಿದೆ. ಕೆಲ ಕಡೆ ಗಣತಿದಾರರಿಗೆ ಸಣ್ಣಪುಟ್ಟ ಗೊಂದಲಗಳು ಉಂಟಾಗಿದ್ದವು ಹಾಗೂ ಗಣತಿಗೆ ಒಳಗಾಗುತ್ತಿದ್ದವರಿಗೆ ಮಾಹಿತಿ ಕೊರತೆಯಿಂದ ಸ್ವಲ್ಪಮಟ್ಟಿಗೆ ಸಮಸ್ಯೆಯಾಗಿತ್ತು. ಮಾಹಿತಿದಾರರ ಫೋಟೋ ತೆಗೆದು ಅಪ್ಲೋಡ್ ಮಾಡುವುದು ಕಡ್ಡಾಯ. ಇದಕ್ಕೆ ಕೆಲವರು ಅಸಹಕಾರ ತೋರುತ್ತಿದ್ದು, ಅಂತಹವರ ಬಳಿ ಬಿಪಿಎಲ್, ಆಧಾರ್ ಕಾರ್ಡ್ ಅಥವಾ ಜಾತಿ ಪ್ರಮಾಣಪತ್ರ ಪಡೆದು ಮುಂದುವರೆಯಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದ ಒಂದೇ ಒಂದು ಗ್ರಾಮದಲ್ಲೂ ಶುದ್ಧ ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ಸಮಸ್ಯೆಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ. ಜಿಲ್ಲೆಗಳಲ್ಲಿ ತುರ್ತು ಕುಡಿಯುವ ನೀರಿನ ಪೂರೈಕೆಗೆ ಜಿಲ್ಲಾಧಿಕಾರಿಗಳು ಕ್ರಿಯಾ ಯೋಜನೆ ರೂಪಿಸಿ, ಟಾಸ್ಕ್‌ಪೋರ್ಸ್‌ನಿಂದ ಅನುಮೋದನೆ ಪಡೆದುಕೊಂಡು ಅನುಷ್ಠಾನಗೊಳಿಸಬೇಕು ಎಂದು ಸೂಚನೆ ನೀಡಲಾಗಿದೆ.
May 6, 2025, 4:21 AM IST
ರಾಜ್ಯದ ಒಂದೇ ಒಂದು ಗ್ರಾಮದಲ್ಲೂ ಶುದ್ಧ ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ಸಮಸ್ಯೆಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ.