userpic
user icon

ಕಾಂಗ್ರೆಸ್‌ನ ನಾಲ್ಕನೇ ಗ್ಯಾರಂಟಿ ಘೋಷಿಸಿದ ರಾಹುಲ್ ಗಾಂಧಿ

Sathish Kumar KH  | Published: Mar 20, 2023, 4:44 PM IST

ಬೆಳಗಾವಿ (ಮಾ.20):  ಕರ್ನಾಟಕದಲ್ಲಿ ಮುಭರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಎಲ್ಲ ನಿರುದ್ಯೋಗಿಗಳಿಗೆ 3 ಸಾವಿರ ರೂ. ನಿರುದ್ಯೋಗ ಭತ್ಯೆ ನೀಡಲಾಗುವುದು ಎಂದು ಕಾಂಗ್ರೆಸ್‌ 4ನೇ ಗ್ಯಾರಂಟಿಯನ್ನು ರಾಹುಲ್‌ಗಾಂಧಿ ಘೋಷಣೆ ಮಾಡಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಯುವಕ್ರಾಂತಿ ಸಮಾವೇಶದಲ್ಲಿ ಕಾಂಗ್ರೆಸ್‌ 4ನೇ ಗ್ಯಾರಂಟಿ ಕಾರ್ಡ್‌ ಹಿಡಿದುಕೊಂಡು ಪ್ರದರ್ಶನ ಮಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ 4ನೇ ಗ್ಯಾರಂಟಿ 'ಯುವನಿಧಿ' ಕಾರ್ಯಕ್ರಮ ಘೋಷಣೆ ಮಾಡಲಾಯಿತು. ನಿರುದ್ಯೋಗ ಯುವಕ, ಯುವತಿಯರಿಗೆ ಮಾಸಿಕ ನಿರುದ್ಯೋಗ ಭತ್ಯೆ ನೀಡಲಾಗುವುದು. ಡಿಪ್ಲೋಮಾ ಆದವರಿಗೆ 1500 ರೂ., ಪದವೀಧರರಿಗೆ 3000 ರೂ. ನಿರುದ್ಯೋಗ ಭತ್ಯೆ ಕೊಡಲಾಗುವುದು. ಕಾಂಗ್ರೆಸ್ ಪಕ್ಷದಿಂದ ನಾಲ್ಕನೇ ಗ್ಯಾರಂಟಿ ಘೋಷಣೆ ಮೂಲಕ ಯುವಕರನ್ನು ಸೆಳೆಯಲಾಗಿದೆ. ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರಿಂದ ನಾಲ್ಕನೇ ಗ್ಯಾರಂಟಿ ಅನಾವರಣ ಮಾಡಿದರು.

Must See