Asianet Suvarna News Asianet Suvarna News

ಮೈಸೂರಿನಲ್ಲಿ ದಿಗ್ಗಜ ನಾಯಕರ ಮಹಾಸಂಗಮ: 8 ವರ್ಷಗಳ ಬಳಿಕ ಶ್ರೀನಿವಾಸ್ ಪ್ರಸಾದ್‌ ಭೇಟಿ ಮಾಡಿದ ಸಿದ್ದರಾಮಯ್ಯ

ಮೈಸೂರಿನ ಜಯಲಕ್ಷ್ಮಿ ಪುರಂನಲ್ಲಿನ ಶ್ರೀನಿವಾಸ ಪ್ರಸಾದ್‌ ಅವರ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಮಾತುಕತೆ ನಡೆಸಿದರು.
 

ಮೈಸೂರಿನ ಶ್ರೀನಿವಾಸ್ ಪ್ರಸಾದ್‌ ಮನೆಗೆ ಸಿಎಂ ಸಿದ್ದರಾಮಯ್ಯ(Siddaramaiah) ಭೇಟಿ ನೀಡಿದ್ದು, ಕಾಂಗ್ರೆಸ್(Congress) ಬೆಂಬಲಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗ್ತಿದೆ. ಇದು ರಾಜ್ಯ ರಾಜಕೀಯದಲ್ಲಿ ಅತಿ ದೊಡ್ಡ ಬೆಳವಣಿಗೆಯಾಗಿದ್ದು, 8 ವರ್ಷಗಳ ಬಳಿಕ ಸಿಎಂ ಸಿದ್ದರಾಮಯ್ಯ- ಶ್ರೀನಿವಾಸ ಪ್ರಸಾದ್(Srinivasa Prasad) ಒಂದಾಗಿದ್ದಾರೆ. ಮೈಸೂರಿನಲ್ಲಿ(Mysore) ದಿಗ್ಗಜ ನಾಯಕರ ಮಹಾಸಂಗಮವಾಗಿದೆ. ಮೈಸೂರಿನ ಜಯಲಕ್ಷ್ಮಿ ಪುರಂನಲ್ಲಿನ ಶ್ರೀನಿವಾಸ ಪ್ರಸಾದ್‌ ಅವರ ನಿವಾಸ ಇದೆ. ಉಭಯ ನಾಯಕರ ಭೇಟಿ ಕುತೂಹಲ ಕೆರಳಿಸಿದೆ. ಶ್ರೀನಿವಾಸ್ ಪ್ರಸಾದ್ ಭೇಟಿ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿ, ನೀವು ಕಾಂಗ್ರೆಸ್‌ನಲ್ಲಿ ಇದ್ದವರು ಕಾಂಗ್ರೆಸ್ ಬಗ್ಗೆ ಸಿಂಪಥಿ ಇರಲಿ‌ ಎಂದು ಹೇಳಿದ್ದೇನೆ. ಸುಧೀರ್ಘವಾಗಿ ರಾಜಕೀಯದ ಬಗ್ಗೆ ಚರ್ಚೆ ಮಾಡಿಲ್ಲ.ಅವರು ರಾಜಕೀಯವಾಗಿ ನಿವೃತ್ತಿ ತೆಗೆದುಕೊಂಡಿದ್ದಾರೆ. ಹೀಗಾಗಿ ರಾಜಕೀಯದ ಬಗ್ಗೆ ಹೆಚ್ಚು ಏನು ಮಾತನಾಡಿಲ್ಲ. ಅವರು ನಮ್ಮ ಹಳೆಯ ಸ್ನೇಹಿತರು. ರಾಜಕೀಯವಾಗಿ ಅವರು ಬಿಜೆಪಿಗೆ ಹೋಗಿದ್ದರು. ಈಗ ಅವರ ಆರೋಗ್ಯ ವಿಚಾರಿಸಲು ಬಂದಿದ್ದೆ ಅಷ್ಟೇ. ಶ್ರೀನಿವಾಸ್‌ ಪ್ರಸಾದ್ ಭೇಟಿ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Rameshwaram Cafe Blast: ಉಗ್ರರನ್ನು ಹಿಡಿಯುವಲ್ಲಿ ಎನ್‌ಐಎ ಯಶಸ್ವಿ: ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ

Video Top Stories