userpic
user icon

ಉರಿಗೌಡ-ನಂಜೇಗೌಡ ಹೆಸರಲ್ಲಿ ಬಿಜೆಪಿ ತಪ್ಪು ಸಂದೇಶವನ್ನು ರವಾನಿಸುತ್ತಿದೆ: ಡಿ.ಕೆ.ಶಿವಕುಮಾರ್ ಕಿಡಿ

Sushma Hegde  | Published: Mar 20, 2023, 2:31 PM IST

ಕಾಲ್ಪನಿಕ ಕಥೆಗಳ ಮೂಲಕ ಬಿಜೆಪಿಯಿಂದ ತಪ್ಪು ಸಂದೇಶವನ್ನು ರವಾನಿಸಲಾಗುತ್ತಿದೆ, ಬಿಜೆಪಿಯ ವಾಟ್ಸಪ್ ಯುನಿವರ್ಸಿಟಿ ಹೊಸ ಇತಿಹಾಸ ಬರೆಯಲು ಯತ್ನಿಸುತ್ತಿದೆ. ಎಂದು ಕೆಪಿಸಿಸಿ  ಅಧ್ಯಕ್ಷ ಡಿ.ಕೆ.ಶಿವಕುಮಾರ್  ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.ಉರಿಗೌಡ, ನಂಜೇಗೌಡ ಬಗ್ಗೆ ಚಿತ್ರ ಮಾಡುತ್ತಿದ್ದಾರೆ. ಒಕ್ಕಲಿಗರ ಮತ ಸೆಳೆಯಲು ಮತ್ತು ಅವರ ಭಾವನೆಗಳಿಗೆ ಧಕ್ಕೆ ತರಲು ಬಿಜೆಪಿಯವರು ಮುಂದಾಗಿದ್ದಾರೆ. ನಿರ್ಮಲಾನಂದ ಸ್ವಾಮೀಜಿ  ಇದರ ಬಗ್ಗೆ ಹೋರಾಟ ಮಾಡಬೇಕು. ಸಾಹಿತಿಗಳು, ಹೋರಾಟಗಾರರು ಹಾಗೂ ಎಲ್ಲಾ ಸಮಾಜಗಳ ಮಠಾಧೀಶರು ಇದಕ್ಕೆ ಕೈಜೋಡಿಸಬೇಕು ಎಂದರು. ಹೊಸ ಇತಿಹಾಸ ಬರೆಯಲು ಯತ್ನಿಸುತ್ತಿದೆ. ಇದನ್ನು ಖಂಡಿಸಲು ನಿರ್ಮಲಾನಂದ ಸ್ವಾಮೀಜಿ ಸಭೆ ನಡೆಸಬೇಕು.  

Must See